newsics.com
ಭಾರೀ ಬಿಸಿಲಿಗೆ ಕಾದು ಕೆಂಡವಾಗ್ತಿರೋ ಜನರಿಗೆ ತಂಪೆರೆಯಲು ಮಳೆರಾಯ ಎಂಟ್ರಿ ಕೊಟ್ಟಿದ್ದಾನೆ. ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗ್ತಿದೆ. ರಾಜ್ಯದಲ್ಲಿ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲದೇ ರಾಜ್ಯದ ಅರ್ಧ ಭಾಗಕ್ಕೆ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಉತ್ತರ ಕನ್ನಡ, ಮಲೆನಾಡು, ಕರಾವಳಿ ಭಾಗದಲ್ಲಿ ಮಳೆ ಸಾಧ್ಯತೆ ಇದ್ದು, ಸಂಜೆ ಹಾಗೂ ರಾತ್ರಿ ವೇಳೆಗೆ ಗಾಳಿ ಸಹಿತ ಭಾರೀ ಮಳೆಯಾಗಲಿದೆ. ಇಂದು 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕೆಲ ಜಿಲ್ಲೆಗಳಲ್ಲಿ ಗುಡುಗು ಹಾಗೂ ಆಲಿಕಲ್ಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೀದರ್, ಕಲಬುರಗಿ , ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ,ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ , ತುಮಕೂರು, ಮೈಸೂರು, ಚಾಮರಾಜನಗರ, ಉತ್ತರ ಕನ್ನಡ, ಉಡುಪಿ,ದಕ್ಷಿಣ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದ್ದು, ಗುಡುಗು ಸಹಿತ ಮಳೆ ಮುನ್ಸೂಚನೆ ನೀಡಲಾಗಿದೆ.
https://www.newsics.com/2026/04/20/outrage-in-nepal-against-balen-shah-governments-new-rule/