Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಪಘಾತದಲ್ಲಿ ಕಾಲು ಕಳೆದುಕೊಂಡು ಸ್ಟ್ರೆಚರ್‌ನಲ್ಲೇ ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ನೆರವು
ಕರ್ನಾಟಕಪ್ರಮುಖ

ಅಪಘಾತದಲ್ಲಿ ಕಾಲು ಕಳೆದುಕೊಂಡು ಸ್ಟ್ರೆಚರ್‌ನಲ್ಲೇ ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ನೆರವು

Share
1 Min Read
SHARE

https://youtube.com/shorts/2gi1iB6d4H0?si=CNONE5w7sxEdw2CR

newsics.com

ಕೋಲಾರ: ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರೂ ಸ್ಟ್ರೆಚರ್ ನಲ್ಲಿ ಬಂದು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಚಿಕಿತ್ಸೆಗಾಗಿ ಬಿಜೆಪಿ ಶಾಸಕ ಸುರೇಶ್ ಕುಮಾರ್ ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.

ಕೋಲಾರ ಜಿಲ್ಲೆಯ ಕೆಜಿಎಫ್‌ನ ಕುಸುಮಾ ಎಂಬ ವಿದ್ಯಾರ್ಥಿನಿ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರು.

ಆದಾಗ್ಯೂ ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಆದರೆ ಇತ್ತೀಚೆಗೆ ಆಕೆಯ ಚಿಕಿತ್ಸಾ ವೆಚ್ಚ ಬರಿಸಲಾಗದೇ ಬಾಲಕಿಯ ತಂದೆ ತನ್ನ ಕಿಡ್ನಿ ಮಾರಲು ಮುಂದಾಗಿದ್ದರು. ಅವರ ಸಂಕಷ್ಟ ಅರಿತ ಮಾಜಿ ಸಚಿವ, ಶಾಸಕ ಸುರೇಶ್ ಕುಮಾರ್ ನೆರವಿಗೆ ಧಾವಿಸಿದ್ದಾರೆ.

ಕೆಜಿಎಫ್ ತಾಲೂಕಿನ ಚಿನ್ನನಾಗನಹಳ್ಳಿ ನಿವಾಸಿಯಾದ ಸೆಂಟ್ ಮೇರಿಸ್ ಹೈಸ್ಕೂಲ್ ವಿದ್ಯಾರ್ಥಿನಿ 16 ವರ್ಷದ ಕುಸುಮಾ, ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಒಂದು ಕಾಲು ಕಳೆದುಕೊಂಡಿದ್ದಳು. ನಂತರ ಆಕೆಯನ್ನು ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗದಿದ್ದರೂ, ವಿದ್ಯಾಭ್ಯಾಸದ ಮೇಲೆ ಆಸಕ್ತಿ ಕಳೆದುಕೊಳ್ಳದ ಕುಸುಮಾ, ತನ್ನ ತಾಯಿಯೊಂದಿಗೆ ಆಂಬ್ಯುಲೆನ್ಸ್ ಮೂಲಕ ಕೆಜಿಎಫ್‌ನ ಸೆಂಟ್ ಜೋಸೆಫ್ ಶಾಲೆಗೆ ಬಂದು ಪರೀಕ್ಷೆಗೆ ಹಾಜರಾಗಿದ್ದಳು.

ವಿದ್ಯಾರ್ಥಿನಿಯ ಪರಿಸ್ಥಿತಿಯನ್ನು ಗಮನಿಸಿ, ಕೆಜಿಎಫ್ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ. ನಾರಾಯಣಸ್ವಾಮಿ ಪರೀಕ್ಷೆ ಬರೆಯಲು ವಿಶೇಷ ಅನುಮತಿ ನೀಡಿದ್ದರು. ಇತ್ತೀಚೆಗೆ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿ ಬೆಂಗಳೂರಿನ ವೈಟ್‌ಫೀಲ್ಡ್‌ನ ಆಸ್ಟರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಅಗತ್ಯವಿದ್ದ ಹಣದ ಕೊರತೆಯಿಂದ ತಂದೆ ಶಂಕರಪ್ಪ ಸಂಕಷ್ಟಕ್ಕೀಡಾಗಿ, ತನ್ನ ಕಿಡ್ನಿ ಮಾರಾಟ ಮಾಡುವ ನಿರ್ಧಾರಕ್ಕೆ ಬಂದಿದ್ದರು.

ವಿಷಯ ತಿಳಿದು ಮಾಜಿ ಸಚಿವ ಸುರೇಶ್ ಕುಮಾರ್ ತಕ್ಷಣ ಸ್ಪಂದಿಸಿ ನೆರವಿಗೆ ಬಂದಿದ್ದಾರೆ. ಅವರು ಆರೋಗ್ಯ ಸಚಿವರು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರಿಗೆ ಮಾಹಿತಿ ನೀಡಿ, ಮುಖ್ಯಮಂತ್ರಿ ನಿಧಿಯಿಂದ ಚಿಕಿತ್ಸಾ ವೆಚ್ಚ ಭರಿಸುವ ವ್ಯವಸ್ಥೆ ಮಾಡಲು ಮುಂದಾಗಿದ್ದು, ಈ ಭರವಸೆಯಿಂದ ಕುಟುಂಬಕ್ಕೆ ಸಾಕಷ್ಟು ಆಶಾಭಾವ ಮೂಡಿದೆ.

https://www.newsics.com/2026/04/21/has-the-us-president-lost-his-mind/

TAGGED:Assistance provided to student who lost his leg in an accident and wrote SSLC exam on a stretcher
Share This Article
Facebook Twitter Copy Link Print
Previous Article ಜಾಗತಿಕ ಮಟ್ಟದ ಪ್ರಭಾವಿ ವ್ಯಕ್ತಿಗಳ ಪತನ : ಮತ್ತೊಂದು ಭಯಾನಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ!
Next Article ಕಾಂಗ್ರೆಸ್ ಶಾಸಕ ಹ್ಯಾರಿಸ್ ನಿವಾಸದಲ್ಲಿ E.D ಶೋಧ : ಮಹತ್ವದ ದಾಖಲೆಗಳು, ಡಿಜಿಟಲ್ ದಾಖಲೆ ವಶಕ್ಕೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?