Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ಕಾರಿ ಬಸ್ ಪಲ್ಟಿ –ಅದೃಷ್ಠವಷಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
ಕರ್ನಾಟಕಪ್ರಮುಖ

ಸರ್ಕಾರಿ ಬಸ್ ಪಲ್ಟಿ –ಅದೃಷ್ಠವಷಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Share
1 Min Read
SHARE

ತುಮಕೂರು : ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಎಂ.ಎಚ್ ಪಟ್ಟಣ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಸರ್ಕಾರಿ ಬಸ್ ಪಲ್ಟಿಯಾದ ಘಟನೆ ಸಂಭವಿಸಿದ್ದು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

ಗುಬ್ಬಿಯಿಂದ ತುಮಕೂರು ಕಡೆಗೆ ತೆರಳುತ್ತಿದ್ದ ತಿಪಟೂರು ಡಿಪೋಗೆ ಸೇರಿದ KA 06 F 1253 ಹೊಸದುರ್ಗ–ಬೆಂಗಳೂರು ಎಕ್ಸ್ಪ್ರೆಸ್ ಸರ್ಕಾರಿ ಬಸ್‌ಗೆ ತಾಂತ್ರಿಕ ದೋಷ ಉಂಟಾದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಬಸ್‌ನಲ್ಲಿ ಅಳವಡಿಸಲಾಗಿದ್ದ ಸ್ಟೀರಿಂಗ್ ಆಕ್ಸೆಲ್ ಅಕಸ್ಮಾತ್ ತುಂಡಾಗಿ ನಿಯಂತ್ರಣ ತಪ್ಪಿದ ಬಸ್ ಎಂ.ಎಚ್ ಪಟ್ಟಣ ಸಮೀಪದ ಸರ್ವಿಸ್ ರಸ್ತೆಯಲ್ಲಿ ಪಲ್ಟಿಯಾಗಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಅಪಘಾತದ ವೇಳೆ ಬಸ್‌ನಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದರೂ, ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ತಕ್ಷಣ ಸ್ಥಳೀಯರ ಸಹಾಯದಿಂದ ಗುಬ್ಬಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಘಟನೆ ತಿಳಿದು ಕೂಡಲೇ ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಸಾಗಿಸುವ ಜೊತೆಗೆ ರಸ್ತೆ ಸಂಚಾರವನ್ನು ಸಹ ನಿಯಂತ್ರಿಸಿದರು.

ಇನ್ನೂ ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್‌ಪಿ ಗೋಪಾಲ್, ಗುಬ್ಬಿ ಸರ್ಕಲ್ ಇನ್ಸ್‌ಪೆಕ್ಟರ್ ರಾಘವೇಂದ್ರ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರೆದಿದೆ.

 

ಟಿಮ್ ಕುಕ್ ಜಾಗಕ್ಕೆ ಜಾನ್ ಟರ್ನಸ್, ಯಾರು ಆಪಲ್‌ನ ಈ ಹೊಸ ಬಾಸ್?

TAGGED:Government bus overturns - passengers fortunately escape death
Share This Article
Facebook Twitter Copy Link Print
Previous Article ಟಿಮ್ ಕುಕ್ ಜಾಗಕ್ಕೆ ಜಾನ್ ಟರ್ನಸ್, ಯಾರು ಆಪಲ್‌ನ ಈ ಹೊಸ ಬಾಸ್?
Next Article ಕೆಜಿಎಫ್ 3′ ಸಿನಿಮಾ ಬಗ್ಗೆ ನಟ ಯಶ್ ಹೇಳಿದ್ದೇನು?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?