newsics.com
ನಂಜನಗೂಡು: ಬೈಕ್‌ನಲ್ಲಿ ಚಲಿಸುತ್ತಿದ್ದಾಗ ಟೈರ್ ಸ್ಫೋಟ ಆಗಿ ವಿದ್ಯಾರ್ಥಿನಿ ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಗಣೇಶಪುರ ಗ್ರಾಮದ ಬಿಳಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಸಿಂಚನಾ ಎಂದು ಗುರುತಿಸಲಾಗಿದೆ. ಸಿಂಚನಾ ನಂಜನಗೂಡು ತಾಲೂಕಿನ ಮಡುವಿನಹಳ್ಳಿಯ ಮಹದೇವಸ್ವಾಮಿ ಅವರ ಪುತ್ರಿಯಾಗಿದ್ದು, ತಂದೆಯೊಂದಿಗೆ ಬೈಕ್‌ನಲ್ಲಿ ಬರುತ್ತಿದ್ದಳು.
ಮಹದೇವಸ್ವಾಮಿ ಪತ್ನಿ, ಮಗ ಮತ್ತು ಮಗಳೊಂದಿಗೆ ಬೇಲದಕುಪ್ಪೆ ಮಹದೇಶ್ವರ ಸ್ವಾಮಿಯ ದೇವಾಲಯಕ್ಕೆ ತೆರಳಿ ಗ್ರಾಮಕ್ಕೆ ಹಿಂದಿರುಗುತ್ತಿದ್ದರು. ಬೈಕ್ ಚಲಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಟೈಯರ್ ಬ್ಲಾಸ್ಟ್ ಆಗಿದೆ. ಇದರಿಂದ ಬೈಕ್ ರಸ್ತೆ ಮೇಲೆ ವೇಗವಾಗಿ ಜಾರಿದ್ದು, ನಾಲ್ವರು ಕೆಳಗೆ ಬಿದ್ದಿದ್ದಾರೆ.
ನಾಲ್ವರು ರಸ್ತೆಯಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದರು. ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಿಂಚನಾ ಸಾವನ್ನಪ್ಪಿದ್ದಾರೆ. ಸಿಂಚನಾ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಳು.