Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಇರಾನ್ ವಿರುದ್ಧದ ದಾಳಿಗೆ ಸದ್ಯಕ್ಕೆ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಟ್ರಂಪ್
ವಿದೇಶಪ್ರಮುಖ

ಇರಾನ್ ವಿರುದ್ಧದ ದಾಳಿಗೆ ಸದ್ಯಕ್ಕೆ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಟ್ರಂಪ್

Share
2 Min Read
SHARE

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಮತ್ತು ಬಿಗುವಿನ ವಾತಾವರಣದ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಒಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಇರಾನ್ ವಿರುದ್ಧದ ದಾಳಿಯನ್ನು ಸದ್ಯಕ್ಕೆ ತಡೆಹಿಡಿದಿರುವ ಟ್ರಂಪ್, ರಾಜತಾಂತ್ರಿಕತೆಗೆ ಮತ್ತೊಂದು ಅವಕಾಶ ನೀಡಿದ್ದಾರೆ.

ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಸ್ಫೋಟಕ ಹಂತ ತಲುಪಿರುವಾಗಲೇ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮವನ್ನು ವಿಸ್ತರಿಸುವುದಾಗಿ ಘೋಷಿಸಿದ್ದಾರೆ. ಪಾಕಿಸ್ತಾನದ ನಾಯಕರ ವಿಶೇಷ ವಿನಂತಿಯ ಮೇರೆಗೆ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಪಾಕಿಸ್ತಾನದ ರಾಜತಾಂತ್ರಿಕ ನಡೆ
ಡೊನಾಲ್ಡ್​ ಟ್ರಂಪ್ ತಮ್ಮ ಟ್ರುತ್ ಸೋಶಿಯಲ್​​ ಪ್ಲಾಟ್​ಫಾರ್ಮ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪಾಕಿಸ್ತಾನದ ಫೀಲ್ಡ್​ ಮಾರ್ಷಲ್ ಆಸಿಮ್ ಮುನೀರ್ ಮತ್ತು ಶೆಹಬಾಜ್ ಷರೀಫ್ ಅವರು ಅಮೆರಿಕವನ್ನು ಸಂಪರ್ಕಿಸಿ ಮಾತುಕತೆಗೆ ಸಮಯ ಕೋರಿದ್ದಾರೆ ಎಂದು ತಿಳಿಸಿದ್ದಾರೆ.
ಇರಾನ್ ನಾಯಕರು ಮತ್ತು ಪ್ರತಿನಿಧಿಗಳು ಒಂದು ಏಕೀಕೃತ ಪ್ರಸ್ತಾಪವನ್ನು ಮಂಡಿಸುವವರೆಗೆ ದಾಳಿಯನ್ನು ತಡೆ ಹಿಡಿಯುವಂತೆ ಪಾಕಿಸ್ತಾನ ಮನವಿ ಮಾಡಿದೆ. ಅವರ ಪ್ರಸ್ತಾಪ ಬರುವವರೆಗೆ ಮತ್ತು ಚಚರ್ಚಗಳು ತಾರ್ಕಿಕ ಅಂತ್ಯ ಕಾಣುವವರೆಗೆ ತಾವು ಕದನ ವಿರಾಮ ವಿಸ್ತರಿಸುವುದಾಗಿ ಟ್ರಂಪ್ ತಿಳಿಸಿದ್ದಾರೆ.

ಹಾರ್ಮುಜ್ ಜಲಸಂಧಿ: ಟ್ರಂಪ್ ಅವರ ದಿಗ್ಬಂಧನ ತಂತ್ರ
ಜಾಗತಿಕ ತೈಲ ವ್ಯಾಪಾರದ ನಾಡಿಮಿಡಿತವಾಗಿರುವ ಹಾರ್ಮುಜ್ ಜಲಸಂಧಿಯ ವಿಚಾರದಲ್ಲಿ ಟ್ರಂಪ್ ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಹಾರ್ಮುಜ್ ಜಲಸಂಧಿ ಮುಕ್ತವಾಗಿದ್ದರೆ ಇರಾನ್ ದಿನಕ್ಕೆ ಸುಮಾರು 500 ಮಿಲಿಯನ್ ಡಾಲರ್ ಆದಾಯ ಗಳಿಸುತ್ತದೆ. ಆದರೆ ಅಮೆರಿಕದ ನೌಕಾಪಡೆಯು ಈ ಮಾರ್ಗವನ್ನು ಸಂಪೂರ್ಣವಾಗಿ ನಿರ್ಬಂಧಿಸಿರುವುದರಿಂದ ಇರಾನ್ ಆರ್ಥಿಕವಾಗಿ ಕಂಗೆಟ್ಟಿದೆ.

ಇರಾನ್ ಈ ಜಲಸಂಧಿಯನ್ನು ತಾನೇ ಮುಚ್ಚುವುದಾಗಿ ಹೇಳಿಕೊಳ್ಳುತ್ತಿದೆ. ಆದರೆ ಟ್ರಂಪ್ ಪ್ರಕಾರ, ಇದು ಕೇವಲ ತನ್ನ ಮರ್ಯಾದೆ ಉಳಿಸಿಕೊಳ್ಳಲು ಇರಾನ್ ಮಾಡುತ್ತಿರುವ ನಾಟಕ. ಅಮೆರಿಕ ಈಗಾಗಲೇ ಅದನ್ನು ಮುಚ್ಚಿರುವುದರಿಂದ ಇರಾನ್ ಅಸಹಾಯಕವಾಗಿದೆ.

ಅಮೆರಿಕ ಮತ್ತು ಇರಾನ್ ನಡುವಿನ ಎರಡು ವಾರಗಳ ಮೊದಲ ಹಂತದ ಕದನ ವಿರಾಮ ಬುಧವಾರಕ್ಕೆ ಅಂತ್ಯಗೊಂಡಿತ್ತು. ಎರಡನೇ ಸುತ್ತಿನ ಮಾತುಕತೆಗಳು ಯಾವುದೇ ಫಲ ನೀಡದೆ ಸ್ಥಗಿತಗೊಂಡಿದ್ದವು. ಟ್ರಂಪ್ ಮೊದಲು ಕದನ ವಿರಾಮ ವಿಸ್ತರಣೆ ನಿರಾಕರಿಸಿದ್ದರೂ, ಕೊನೆಯ ಕ್ಷಣದಲ್ಲಿ ಪಾಕಿಸ್ತಾನದ ಮಧ್ಯಸ್ಥಿಕೆಯಿಂದಾಗಿ ಮನಸ್ಸು ಬದಲಿಸಿದ್ದಾರೆ. ಆದರೂ ಅಮರಿಕ ಸೇನೆಗೆ ಯಾವುದೇ ಕ್ಷಣದಲ್ಲಿ ದಾಳಿಗೆ ಸಿದ್ದರಾಗಿರಿ ಎಂದು ಅವರು ಆದೇಶಿಸಿದ್ದಾರೆ.

ಮುಂದಿನ ಹಾದಿ ಕಠಿಣ
ಈ ಕದನ ವಿರಾಮ ವಿಸ್ತರಣೆಯು ತಾತ್ಕಾಲಿಕವಾಗಿದ್ದು, ಇರಾನ್ ಮಂಡಿಸುವ ಪ್ರಸ್ತಾಪದ ಮೇಲೆ ಎಲ್ಲವೂ ನಿರ್ಧರಿತವಾಗಲಿದೆ. ಒಂದೋ ಒಪ್ಪಂದವಾಗಬೇಕು, ಇಲ್ಲದಿದ್ದರೆ ಇರಾನ್ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂಬ ಪರೋಕ್ಷ ಎಚ್ಚರಿಕೆಯನ್ನು ಟ್ರಂಪ್ ನೀಡಿದ್ದಾರೆ. ಟ್ರಂಪ್ ಅವರ ಈ ನಡೆ ಇರಾನ್ ಸರ್ಕಾರವನ್ನು ಆರ್ಥಿಕವಾಗಿ ಹೈರಾಣಾಗಿಸಿ, ಅವರನ್ನು ಮಾತುಕತೆಯ ಮೇಜಿಗೆ ಬರುವಂತೆ ಮಾಡುವ ತಂತ್ರದ ಭಾಗವಾಗಿದೆ ಎಂದು ರಾಜತಾಂತ್ರಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ASTRO ಇಂದು ನೀಚಭಂಗ ರಾಜಯೋಗ, ಗಜಕೇಸರಿ, ವಾಶಿ, ಧನ ಯೋಗ: ಈ ಐದು ರಾಶಿಗಳ ಜನರಿಗೆ ಭಾರೀ ಅದೃಷ್ಟ

TAGGED:'Break' for now on attack against Iran: Trump agrees to Pakistan's mediation
Share This Article
Facebook Twitter Copy Link Print
Previous Article ASTRO ಇಂದು ನೀಚಭಂಗ ರಾಜಯೋಗ, ಗಜಕೇಸರಿ, ವಾಶಿ, ಧನ ಯೋಗ: ಈ ಐದು ರಾಶಿಗಳ ಜನರಿಗೆ ಭಾರೀ ಅದೃಷ್ಟ
Next Article ನಿಮ್ಮ ಕತ್ತು ಕಪ್ಪಾಗಿದೆಯೇ? ಇಲ್ಲಿದೆ ಮ್ಯಾಜಿಕ್ ಪರಿಹಾರ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?