Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಏ.24ರಂದು ಬೆಂಗಳೂರಿನಲ್ಲಿ ಆರ್​ಸಿಬಿ ಪಂದ್ಯ
ಕರ್ನಾಟಕಪ್ರಮುಖ

ಏ.24ರಂದು ಬೆಂಗಳೂರಿನಲ್ಲಿ ಆರ್​ಸಿಬಿ ಪಂದ್ಯ

Share
2 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಅಂದರೆ ಏಪ್ರಿಲ್​ 24ರಂದು ಆರ್​ಸಿಬಿ ಮತ್ತು ಜಿಟಿ ನಡುವೆ ಐಪಿಎಲ್ ಪಂದ್ಯ  ನಡೆಯಲಿದೆ. ಫ್ಯಾನ್ಸ್​​ ಪಂದ್ಯ ನೋಡಲು ಕಾತರರಾಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ಹಿನ್ನೆಲೆ ಬೆಂಗಳೂರು ಸಂಚಾರ ಪೊಲೀಸರು ಸ್ಟೇಡಿಯಂ ಸುತ್ತಮುತ್ತ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿದ್ದಾರೆ.

ಹಲವು ಸ್ಥಳಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ವಾಹನಗಳ ನಿಲುಗಡೆ ನಿಷೇಧ ಇರುವ ಸ್ಥಳಗಳು

ಕ್ವೀನ್ಸ್ ರಸ್ತೆಯ ಬಾಳೆಕುಂದ್ರಿ ವೃತ್ತದಿಂದ ಸಿಟಿಒ ಜಂಕ್ಷನ್‌ವರೆಗೆ ಮತ್ತು ಎಂ.ಜಿ. ರಸ್ತೆಯ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ರಸ್ತೆಯ ಎರಡೂ ಬದಿಯಲ್ಲಿ ಪಾರ್ಕಿಂಗ್ ಮಾಡುವಂತಿಲ್ಲ. ಇದರೊಂದಿಗೆ ಲಿಂಕ್ ರಸ್ತೆ, ರಾಜಭವನ್ ರಸ್ತೆ, ಟಿ. ಚೌಡಯ್ಯ ರಸ್ತೆ, ರೇಸ್ ಕೋರ್ಸ್ ರಸ್ತೆ ಹಾಗೂ ಸೆಂಟ್ರಲ್ ಸ್ಟ್ರೀಟ್ ರಸ್ತೆಗಳಲ್ಲಿಯೂ ವಾಹನ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ.

ಇನ್ನು ಕಬ್ಬನ್ ರಸ್ತೆಯ ಸಿಟಿಒ ವೃತ್ತದಿಂದ ಡಿಕ್ಕೆನ್ಸನ್ ರಸ್ತೆ ಜಂಕ್ಷನ್‌ವರೆಗೆ ಹಾಗೂ ಕಾಮರಾಜ್ ರಸ್ತೆ ಜಂಕ್ಷನ್‌ನಿಂದ ಡಿಕ್ಕೆನ್ಸನ್ ಜಂಕ್ಷನ್‌ವರೆಗೆ ಬಿಎಂಟಿಸಿ ಬಸ್‌ಗಳನ್ನು ಹೊರತುಪಡಿಸಿ ಉಳಿದೆಲ್ಲಾ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ. ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆ, ಲವೆಲ್ಲೆ ರಸ್ತೆ ಹಾಗೂ ವಿಟ್ಠಲ್ ಮಲ್ಯ ರಸ್ತೆಗಳ ಪ್ರಮುಖ ಜಂಕ್ಷನ್‌ಗಳ ನಡುವೆಯೂ ಈ ನಿಯಮ ಅನ್ವಯವಾಗಲಿದೆ. ಅಲ್ಲದೆ, ಕಬ್ಬನ್ ಪಾರ್ಕ್ ಒಳಗಿನ ಕಿಂಗ್ ರಸ್ತೆ, ಪ್ರೆಸ್ ಕ್ಲಬ್, ಬಾಲಭವನ್ ಹಾಗೂ ಫೌಂಟನ್ ರಸ್ತೆಗಳಲ್ಲಿ ಸಾರ್ವಜನಿಕರು ವಾಹನಗಳನ್ನು ನಿಲುಗಡೆ ಮಾಡದಂತೆ ಸೂಚಿಸಲಾಗಿದೆ.

ವಾಹನಗಳ ಪಾರ್ಕಿಂಗ್ ಸ್ಥಳಗಳು

ಪಂದ್ಯ ವೀಕ್ಷಿಸಲು ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಸ್ಟೇಡಿಯಂ ಸುತ್ತಮುತ್ತಲಿನ ವಿವಿಧೆಡೆ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ವಾಹನ ಸವಾರರು ಸಿದ್ಧಲಿಂಗಯ್ಯ ವೃತ್ತದ ಬಳಿಯಿರುವ ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ ಹಾಗೂ ಮ್ಯೂಸಿಯಂ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ ಯುರೋಪಿಯನ್ ಸ್ಕೂಲ್ ಮೈದಾನದಲ್ಲಿ ತಮ್ಮ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ. ಇವುಗಳ ಜೊತೆಗೆ ಫ್ರೀಡಂ ಪಾರ್ಕ್‌ನ ಬಹುಮಹಡಿ ಪಾರ್ಕಿಂಗ್ (MLCP), ಗರುಡ ಮಾಲ್, ಯು.ಬಿ. ಸಿಟಿ ಹಾಗೂ ಕಂಠೀರವ ಕ್ರೀಡಾಂಗಣದ ಆವರಣದಲ್ಲಿಯೂ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ. ಅಲ್ಲದೆ, ಶಿವಾಜಿನಗರ ಬಸ್ ನಿಲ್ದಾಣದ ಮೊದಲ ಮಹಡಿಯಲ್ಲಿಯೂ ಸಹ ವಾಹನಗಳ ನಿಲುಗಡೆಗೆ ಅವಕಾಶ ನೀಡಲಾಗಿದೆ.

ಸ್ಟೇಡಿಯಂ ಪ್ರವೇಶಿಸುವು ಹೇಗೆ?

ಕಬ್ಬನ್ ರಸ್ತೆ ಮೂಲಕ: ಗೇಟ್ ಸಂಖ್ಯೆ E-1 ರಿಂದ E-3, E-18, E-19, E-22 ಮತ್ತು E-23.
ಲಿಂಕ್ ರಸ್ತೆ ಮೂಲಕ: ಗೇಟ್ ಸಂಖ್ಯೆ E-11 ರಿಂದ E-17.
ಕ್ವೀನ್ಸ್ ರಸ್ತೆ ಮೂಲಕ: ಗೇಟ್ ಸಂಖ್ಯೆ E-05 ಮತ್ತು E-08.
ಗೇಟ್ ಸಂಖ್ಯೆ E-10 ಕೇವಲ ಆಟಗಾರರು ಮತ್ತು VIPಗಳಿಗೆ ಮಾತ್ರ ಮೀಸಲು.
ಬಿಆರ್‌ವಿ ಮೈದಾನ (ಗೇಟ್ ನಂ. 06) ಮತ್ತು ಮನೆಕ್‌ಶಾ ಪೆರೇಡ್ ಮೈದಾನ (ಗೇಟ್ ನಂ. 03) ಓಲಾ, ಉಬರ್, ಆಟೋ ಪಿಕ್-ಅಪ್ ಮತ್ತು ಡ್ರಾಪ್ ಸ್ಥಳಗಳಿಗೆ ಅವಕಾಶ ನೀಡಲಾಗಿದೆ. ಸಂಚಾರ ದಟ್ಟಣೆ ತಪ್ಪಿಸಲು ಮತ್ತು ಪಾರ್ಕಿಂಗ್ ಸಮಸ್ಯೆ ನೀಗಿಸಲು ಸಾರ್ವಜನಿಕರು ಹೆಚ್ಚಾಗಿ ಮೆಟ್ರೋ ಅಥವಾ ಬಿಎಂಟಿಸಿ ಬಸ್‌ಗಳನ್ನು ಬಳಸುವಂತೆ ಬೆಂಗಳೂರು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ಸಿಕ್ಕ ಸಿಕ್ಕವರಿಂದ ಹೊಡೆತ ತಿಂದು ದಿಕ್ಕಾಪಾಲಾಗಿ ಓಡಿದ BJP ಅಭ್ಯರ್ಥಿ

TAGGED:RCB match in Bengaluru on 24th April
Share This Article
Facebook Twitter Copy Link Print
Previous Article ಸಿಕ್ಕ ಸಿಕ್ಕವರಿಂದ ಹೊಡೆತ ತಿಂದು ದಿಕ್ಕಾಪಾಲಾಗಿ ಓಡಿದ BJP ಅಭ್ಯರ್ಥಿ
Next Article Fire Disaster ಬೆಂಗಳೂರಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ‌.ವರೆಗೂ ದಟ್ಟ ಹೊಗೆ! ವಿಡಿಯೋ ನೋಡಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?