newsics.com
ಬೆಂಗಳೂರು: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶವನ್ನು ಗುರುವಾರ ಮಧ್ಯಾಹ್ನ 12 ಗಂಟೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.
2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶವು ಶೇ. 94.10 ದಾಖಲಾಗಿದೆ. ದಕ್ಷಿಣ ಕನ್ನಡ ಫಸ್ಟ್, ಉಡುಪಿ ದ್ವಿತೀಯ ಮತ್ತು ಉತ್ತರ ಕನ್ನಡ ತೃತೀಯ ಸ್ಥಾನ ಪಡೆದಿದ್ದು, ಕಲಬುರ್ಗಿ ಕೊನೆಯ ಸ್ಥಾನ ಪಡೆದಿದೆ.
ಕಳೆದ ವರ್ಷ ಶೇ. 66.14 ದಾಖಲಾಗಿತ್ತು. ಈ ಬಾರಿ ಫಲಿತಾಂಶ ಏರಿಕೆಯಾಗಿದೆ. ಇದಕ್ಕೂ ಮುನ್ನ ವೆಬ್‌ಸೈಟ್‌ನಲ್ಲಿ 11.50ಕ್ಕೆ ಫಲಿತಾಂಶ ಪ್ರಕಟವಾಗಿ, ಮಕ್ಕಳಿಗೆ ಎಸ್‌ಎಂಎಸ್ ಮೂಲಕ ತಲುಪಿತ್ತು.
ಕಳೆದ ಕೆಲವು ವರ್ಷಗಳಿಗೆ ಹೋಲಿಸಿದರೆ ಈ ಬಾರಿ ರಾಜ್ಯದಲ್ಲಿ ದಾಖಲೆ ಪ್ರಮಾಣದ ಫಲಿತಾಂಶ ದಾಖಲಾಗಿದ್ದು, ಒಟ್ಟಾರೆ ಶೇ. 90 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಮಂಡಳಿಯ ಕಟ್ಟುನಿಟ್ಟಿನ ಕ್ರಮ ಹಾಗೂ ವಿದ್ಯಾರ್ಥಿಗಳ ಶ್ರಮದಿಂದಾಗಿ ಈ ಸಾಧನೆ ಸಾಧ್ಯವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
https://www.newsics.com/2026/04/23/sslc-result-94-1-result-girls-are-strong-this-time-too/