Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರ ಅಂಗಾಂಗ ಮುಟ್ಟಿ ವಿಕೃತಿ: ಇಬ್ಬರು ಕಾಮುಕರು ಅರೆಸ್ಟ್
ಕರ್ನಾಟಕಪ್ರಮುಖ

ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರ ಅಂಗಾಂಗ ಮುಟ್ಟಿ ವಿಕೃತಿ: ಇಬ್ಬರು ಕಾಮುಕರು ಅರೆಸ್ಟ್

Share
1 Min Read
SHARE

newsics.com/ನ್ಯೂಸಿಕ್ಸ್

ಇತ್ತೀಚಿನ ದಿನಗಳಲ್ಲಿ ರೋಡ್ ರೋಮಿಯೋಗಳ ಹಾವಳಿ ಹೆಚ್ಚುತ್ತಿದೆ. ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರ ಮೈಮುಟ್ಟಿ ವಿಲಕ್ಷಣತೆ ಮೆರೆಯುವ ಬೀದಿ ಕಾಮಣ್ಣರ ಅಟ್ಟಹಾಸ ಮಿತಿಮೀರುತ್ತಿದೆ. ಬೈಕ್ ನಲ್ಲಿ ಬಂದ ಮೂವರು ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರ ಮೈ-ಕೈ ಮುಟ್ಟಿ ಎಸ್ಕೇಪ್ ಆಗಿದ್ದ ಪ್ರಕರಣದ ನಡುವೆಯೇ ಬೆಂಗಳೂರಿನಲ್ಲಿಯೂ ಇಂಥದ್ದೇ ಘಟನೆ ನಡೆದಿದೆ.

ಬೈಕ್ ನಲ್ಲಿ ಬಂದ ಇಬ್ಬರು ಕಾಮುಕರು, ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಯರಿಗೆ ಬ್ಯಾಡ್ ಟಚ್ ಮಾಡಿ ವಿಕ್ರ‍ಿತಿ ಮೆರೆದು ಪರಾರಿಯಾಗಿದ್ದರು. ಇದೀಗ ಈ ಬೀದಿ ಕಾಮಣ್ಣರನ್ನು ಪೊಲೀಸರು ಬಂಧಿಸಿದ್ದಾರೆ.

ಯಲಹಂಕದಿಂದ ಬಾಗಲೂರಿಗೆ ತೆರಳುವ ರಸ್ತೆಯಲ್ಲಿ ಈ ಘಟನೆ ನಡೆದಿತ್ತು. ಬೈಕ್‌ ಸವಾರರಿಬ್ಬರು ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರ ಅಂಗಾಂಗ ಮುಟ್ಟಿ ವಿಕೃತಿ ಮೆರೆದು ಎಸ್ಕೇಪ್ ಆಗಿದ್ದರು. ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಪಾವಗಡ ಮೂಲದ ಹರೀಶ್ ಮತ್ತು ಪ್ರಜ್ವಲ್ ಎಂದು ಗುರುತಿಸಲಾಗಿದೆ. ಹತ್ತನೇ ತರಗತಿಯಲ್ಲಿ ಫೇಲ್ ಆಗಿದ್ದ ಇಬ್ಬರೂ ಬೆಂಗಳೂರಿಗೆ ಬಂದು ಡಿಲವರಿ ಬಾಯ್‌ ಕೆಲಸ ಮಾಡಿಕೊಂಡಿದ್ದರು. ಕೆಲಸಕೆಂದು ಬಂದವರು ನೆಟ್ಟಗೆ ದುಡಿದು ತಿನ್ನುವುದನ್ನು ಬಿಟ್ಟು ಪುಂಡಾಟ ಮೆರೆದಿದ್ದಾರೆ. ಏ. 22 ರಂದು ಯಲಹಂಕದಿಂದ ಬಾಗಲೂರಿಗೆ ತೆರಳುವ ಮುಖ್ಯರಸ್ತೆಯಲ್ಲಿ ಬೈಕ್ ನಲ್ಲಿ ತೆರಳುವಾಗ ಯುವತಿಯರ ಅಂಗಾಂಗ ಮುಟ್ಟಿ, ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಆರೋಪಿಗಳ ಕೃತ್ಯ ಹಿಂಬದಿಯಿಂದ ಬರುತ್ತಿದ್ದ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರಯಾಗಿತ್ತು. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿತ್ತು. ತಕ್ಷಣ ಅಲರ್ಟ್ ಆದ ಯಲಹಂಕ ಪೊಲೀಸರು ಸುಮೊಟೊ ಕೇಸ್ ದಾಖಲಿಸಿಕೊಂಡು ಇಬ್ಬರು ಕಾಮುಕರನ್ನು ಅರೆಸ್ಟ್ ಮಾಡಿದ್ದಾರೆ.

ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಭಾರತೀಯರ ವಿಡಿಯೋ ವೈರಲ್!

TAGGED:Two men arrested for sexually assaulting young women walking on the road
Share This Article
Facebook Twitter Copy Link Print
Previous Article ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಭಾರತೀಯರ ವಿಡಿಯೋ ವೈರಲ್!
Next Article ಫಸ್ಟ್ ಕ್ಲಾಸ್ ನಲ್ಲಿ ಪಾಸಾದ ಬಾಲಕಿ ಸಾವಿಗೆ ಶರಣು

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?