Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಾಯಿ ಬುದ್ಧಿವಾದ ಹೇಳಿದ್ದಕ್ಕೆ 14 ವರ್ಷದ ಬಾಲಕ ಆತ್ಮಹತ್ಯೆ
ಕರ್ನಾಟಕಪ್ರಮುಖ

ತಾಯಿ ಬುದ್ಧಿವಾದ ಹೇಳಿದ್ದಕ್ಕೆ 14 ವರ್ಷದ ಬಾಲಕ ಆತ್ಮಹತ್ಯೆ

Share
1 Min Read
SHARE

newsics.com/ನ್ಯೂಸಿಕ್ಸ್

ಆನ್‌ಲೈನ್ ಗೇಮ್‌ಗೆ ದಾಸನಾಗಿದ್ದ 14 ವರ್ಷದ ಬಾಲಕನೊಬ್ಬ, ತಾಯಿ ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹುಬ್ಬಳ್ಳಿಯ ಉದಯನಗರದಲ್ಲಿ ನಡೆದಿದೆ.

 

‘ಫ್ರೀಫೈರ್’ ಗೇಮ್‌ಗೆ ಅತಿಯಾಗಿ ಅಡಿಕ್ಟ್ ಆಗಿದ್ದ ಸಮರ್ಥ್ ಎಂಬ ಬಾಲಕನೇ ಈ ಅತಿರೇಕದ ನಿರ್ಧಾರಕ್ಕೆ ಶರಣಾದ ದುರ್ದೈವಿ ಎಂದು ತಿಳಿದು ಬಂದಿದೆ.

ಗೇಮ್ ಅಡಿಕ್ಷನ್: ಸಮರ್ಥ್ ಕಳೆದ ಕೆಲವು ದಿನಗಳಿಂದ ಸತತವಾಗಿ ಮೊಬೈಲ್‌ನಲ್ಲಿ ಆನ್‌ಲೈನ್ ಗೇಮ್‌ಗಳನ್ನು ಆಡುತ್ತಿದ್ದ. ಗುರುವಾರ ರಾತ್ರಿಯೂ ಗೇಮ್ ಆಡುವುದರಲ್ಲಿ ಮಗ್ನನಾಗಿದ್ದಾಗ ತಾಯಿ ಆತನಿಗೆ ಬುದ್ಧಿವಾದ ಹೇಳಿದ್ದಾರೆ.

ತಕ್ಷಣದ ನಿರ್ಧಾರ : “ಮೊಬೈಲ್ ಸಾಕು ಮಾಡಿ ಓದಿಕೊಳ್ಳುವತ್ತ ಗಮನ ಹರಿಸು” ಎಂದು ಹೇಳಿದ ತಾಯಿ ಆತನ ಕೈಲಿದ್ದ ಫೋನ್ ಕಿತ್ತುಕೊಂಡಿದ್ದಾರೆ. ಇದರಿಂದ ತೀವ್ರವಾಗಿ ನೊಂದ ಬಾಲಕ, ತಕ್ಷಣ ತನ್ನ ಕೋಣೆಗೆ ಹೋಗಿ ಸೀರೆಯಿಂದ ನೇಣು ಬಿಗಿದುಕೊಂಡಿದ್ದಾನೆ.

ದೃಶ್ಯ ಕಂಡು ಪೋಷಕರು ಶಾಕ್: ಸುಮಾರು 15-20 ನಿಮಿಷಗಳಾದರೂ ಮಗ ಹೊರಗೆ ಬಾರದಿದ್ದಾಗ ಆತಂಕಗೊಂಡ ತಂದೆ ಕಿಟಕಿಯಿಂದ ಇಣುಕಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಬಾಲಕ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.

ಪೊಲೀಸ್ ಕಮಿಷನರ್ ಸಲಹೆ

ಈ ಘಟನೆ ಕುರಿತು ಪ್ರತಿಕ್ರಿಯಿಸಿದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಪೋಷಕರಿಗೆ ಕೆಲವು ಪ್ರಮುಖ ಸಲಹೆಗಳನ್ನು ನೀಡಿದ್ದಾರೆ: ಮಕ್ಕಳು ಅಡಿಕ್ಷನ್‌ಗೆ ಒಳಗಾಗಿದ್ದರೆ ತಕ್ಷಣವೇ ಮೊಬೈಲ್ ಕಿತ್ತುಕೊಳ್ಳುವ ಬದಲು, ನಿಧಾನವಾಗಿ ಅದರಿಂದ ಹೊರಬರುವಂತೆ ಮಾಡಬೇಕು. ವ್ಯಸನ ಹೆಚ್ಚಾಗಿದ್ದರೆ ಶಿಕ್ಷಕರು ಅಥವಾ ಮಕ್ಕಳ ತಜ್ಞರ ಜೊತೆ ಸಮಾಲೋಚನೆ ನಡೆಸಿ. ಮೊಬೈಲ್ ಅನ್ನು ಜ್ಞಾನಾರ್ಜನೆ ಅಥವಾ ಹೊಸ ಕೌಶಲ್ಯ ಕಲಿಯಲು ಬಳಸುವಂತೆ ಪ್ರೇರೇಪಿಸಿ.

ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ

TAGGED:14-year-old commits suicide after mother gives him advice!
Share This Article
Facebook Twitter Copy Link Print
Previous Article ಪೋಷಕರೇ ಎಚ್ಚರ : ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುಣಿಕೆ ಬಿಗಿದು ಬಾಲಕಿ ಸಾವು
Next Article Rare love story ಜಾತಿ ಮೀರಿದ, ಅಪರೂಪದ ಲವ್ ಮ್ಯಾರೇಜ್

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?