Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Tips ಈ ಸಮಸ್ಯೆಗಳಿದ್ದವರು ಮಾವಿನ ಹಣ್ಣು ತಿನ್ನಲೇ ಬಾರದು !
ಪ್ರಮುಖಆರೋಗ್ಯ

Health Tips ಈ ಸಮಸ್ಯೆಗಳಿದ್ದವರು ಮಾವಿನ ಹಣ್ಣು ತಿನ್ನಲೇ ಬಾರದು !

Share
2 Min Read
SHARE

newsics.com

ಮಾರುಕಟ್ಟೆಗಳಲ್ಲಿ ರಾಶಿ ರಾಶಿಯಾಗಿ ಮಾವಿನ ಹಣ್ಣು ಲಗ್ಗೆ ಇಟ್ಟಿವೆ. ಬಹುತೇಕ ಮಂದಿ ಬೇಸಿಗೆಯಲ್ಲಿ ಸಿಹಿ ಮತ್ತು ರಸಭರಿತವಾದ ಮಾವಿನ ಹಣ್ಣುಗಳನ್ನು ತಿನ್ನಲು ಇಷ್ಟಪಡುತ್ತಾರೆ. ಕೆಲವರು ಇದನ್ನು ಹಾಗೆಯೇ ತಿಂದರೆ, ಇನ್ನು ಕೆಲವರು ಐಸ್ ಕ್ರೀಮ್ ಅಥವಾ ಮಾವಿನ ಶೇಕ್ ರೂಪದಲ್ಲಿ ತಿನ್ನಲು ಇಷ್ಟಪಡುತ್ತಾರೆ.

ಮಾವು ತಿನ್ನಲು ರುಚಿಕರವಾಗಿರುವುದರ ಜೊತೆಗೆ, ನಮ್ಮ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿಯಾಗಿದೆ. ಮಾವಿನ ಹಣ್ಣಿನಲ್ಲಿ ವಿಟಮಿನ್ ಎ, ವಿಟಮಿನ್ ಬಿ9, ವಿಟಮಿನ್ ಸಿ, ವಿಟಮಿನ್ ಇ, ಫೈಬರ್, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ತಾಮ್ರದಂತಹ ಅನೇಕ ಪೋಷಕಾಂಶಗಳು ಅಡಗಿವೆ. ಇದು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಮಾವಿನಹಣ್ಣಿನ ಸೇವನೆಯು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರಿಂದ ಹಿಡಿದು ಹೃದಯವನ್ನು ಆರೋಗ್ಯವಾಗಿಡುವವರೆಗೆ ಪ್ರಯೋಜನಕಾರಿಯಾಗಿದೆ. ಇಷ್ಟೆಲ್ಲಾ ಪ್ರಯೋಜನಗಳಿದ್ದರೂ, ಎಲ್ಲರೂ ಮಾವಿನಹಣ್ಣು ತಿನ್ನುವಂತಿಲ್ಲ.

https://youtube.com/shorts/7P5j592ICRU?si=brWLJ4hEetaflYiu

  1. ಮಧುಮೇಹ ಇರುವವರು

ಮಾವಿನ ಹಣ್ಣಿನಲ್ಲಿ ನೈಸರ್ಗಿಕ ಸಕ್ಕರೆ ಅಂಶ (Fructose) ಹೆಚ್ಚಾಗಿರುತ್ತದೆ. ಇದನ್ನು ಅತಿಯಾಗಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು ತಕ್ಷಣವೇ ಏರಿಕೆಯಾಗಬಹುದು. ಆದ್ದರಿಂದ ಸಕ್ಕರೆ ಕಾಯಿಲೆ ಇರುವವರು ವೈದ್ಯರ ಸಲಹೆ ಮೇರೆಗೆ ಅತ್ಯಲ್ಪ ಪ್ರಮಾಣದಲ್ಲಿ ಮಾತ್ರ ಸೇವಿಸುವುದು ಉತ್ತಮ.

 

2. ತೂಕ ಇಳಿಸುವ ಆಲೋಚನೆಯಲ್ಲಿದ್ದೀರಾ?

ಮಾವಿನ ಹಣ್ಣಿನಲ್ಲಿ ಕ್ಯಾಲೊರಿಗಳು ಅಧಿಕವಾಗಿವೆ. ಒಂದು ಮಧ್ಯಮ ಗಾತ್ರದ ಮಾವಿನ ಹಣ್ಣಿನಲ್ಲಿ ಅಂದಾಜು ೧೫೦ ರಿಂದ ೨೦೦ ಕ್ಯಾಲೊರಿಗಳಿರುತ್ತವೆ. ನೀವು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಮಾವಿನ ಹಣ್ಣಿನ ಅತಿಯಾದ ಸೇವನೆ ನಿಮ್ಮ ಪ್ರಯತ್ನಕ್ಕೆ ಅಡ್ಡಿಯಾಗಬಹುದು.

 

3. ಜೀರ್ಣಕ್ರಿಯೆಯ ಸಮಸ್ಯೆ ಮತ್ತು ಅತಿಸಾರ

ಮಾವಿನ ಹಣ್ಣಿನಲ್ಲಿ ನಾರಿನಂಶ ಹೆಚ್ಚಿರುತ್ತದೆ ನಿಜ, ಆದರೆ ಅತಿಯಾಗಿ ತಿಂದರೆ ಅದು ಹೊಟ್ಟೆಯ ಅಸ್ವಸ್ಥತೆಗೆ ಕಾರಣವಾಗಬಹುದು. ವಿಶೇಷವಾಗಿ ಅತಿಯಾದ ಸೇವನೆಯಿಂದ ಅತಿಸಾರ ಅಥವಾ ಹೊಟ್ಟೆ ಉಬ್ಬರದಂತಹ ಸಮಸ್ಯೆಗಳು ಕಾಣಿಸಿಕೊಳ್ಳಬಹುದು.

 

4. ಅಲರ್ಜಿ ಸಮಸ್ಯೆ ಇರುವವರು

ಕೆಲವರಿಗೆ ಮಾವಿನ ಹಣ್ಣು ತಿಂದ ತಕ್ಷಣ ಚರ್ಮದ ಮೇಲೆ ಕೆಂಪು ದದ್ದುಗಳು, ತುರಿಕೆ ಅಥವಾ ಕಣ್ಣಿನ ಉರಿ ಕಾಣಿಸಿಕೊಳ್ಳಬಹುದು. ಇದನ್ನು ‘ಮ್ಯಾಂಗೋ ಲ್ಯಾಟೆಕ್ಸ್ ಅಲರ್ಜಿ’ ಎಂದು ಕರೆಯಲಾಗುತ್ತದೆ. ಅಂತಹ ಲಕ್ಷಣಗಳಿದ್ದರೆ ಮಾವಿನ ಹಣ್ಣಿನಿಂದ ದೂರವಿರುವುದು ಒಳೆತಯದು.

 

5. ಕೃತಕವಾಗಿ ಹಣ್ಣು ಮಾಡಿದ ಮಾವಿನ ಹಣ್ಣುಗಳು

ಮಾರುಕಟ್ಟೆಯಲ್ಲಿ ಸಿಗುವ ಕೆಲವು ಮಾವಿನ ಹಣ್ಣುಗಳನ್ನು ಕ್ಯಾಲ್ಸಿಯಂ ಕಾರ್ಬೈಡ್ ಬಳಸಿ ಕೃತಕವಾಗಿ ಹಣ್ಣು ಮಾಡಲಾಗುತ್ತದೆ. ಇವುಗಳನ್ನು ಸೇವಿಸುವುದರಿಂದ ಹೊಟ್ಟೆ ನೋವು, ತಲೆತಿರುಗುವಿಕೆ ಮತ್ತು ದೀರ್ಘಕಾಲದಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಹಣ್ಣನ್ನು ಖರೀದಿಸಿದ ನಂತರ ಕನಿಷ್ಠ 30 ನಿಮಿಷಗಳ ಕಾಲ ನೀರಿನಲ್ಲಿ ನೆನೆಸಿಟ್ಟು ನಂತರ ಬಳಸುವುದು ಸುರಕ್ಷಿತ.

https://www.newsics.com/2026/04/24/minister-d-sudhakars-health-condition-is-critical/

TAGGED:People with these problems should not eat mangoes!
Share This Article
Facebook Twitter Copy Link Print
Previous Article Minister D. Sudhakar ಸಚಿವ ಡಿ.ಸುಧಾಕರ್​ ಆರೋಗ್ಯ ಸ್ಥಿತಿ ಗಂಭೀರ
Next Article ಕಾರ್ -ಡಂಪರ್ ಟ್ರಕ್ ಡಿಕ್ಕಿಯಾಗಿ ಭಾರೀ ಬೆಂಕಿ: ಮೂವರು ಸಜೀವ ದಹನ, ಐವರು ಗಂಭೀರ

Popular Posts

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

You Might Also Like

ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?