newsics.com
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಜನತೆಗೆ ಹವಾಮಾನ ಇಲಾಖೆ ತಂಪಾದ ಸುದ್ದಿಯ ಜೊತೆಗೆ ಎಚ್ಚರಿಕೆಯನ್ನೂ ನೀಡಿದೆ.
https://youtube.com/shorts/7P5j592ICRU?si=brWLJ4hEetaflYiu
ಮುಂದಿನ 7 ದಿನಗಳ ಕಾಲ ರಾಜ್ಯದ ವಿವಿಧೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಜನರು ಜಾಗರೂಕರಾಗಿರಲು ಸೂಚಿಸಲಾಗಿದೆ. ಸೂರ್ಯನ ತಾಪಮಾನ ಏರುತ್ತಿರುವ ಬೆನ್ನಲ್ಲೇ ಈ ಬದಲಾವಣೆ ಕಂಡುಬಂದಿದ್ದು, ಪ್ರಕೃತಿಯ ಈ ವಿಚಿತ್ರ ವೈಪರೀತ್ಯ ಜನರನ್ನು ಕಂಗಾಲಾಗಿಸಿದೆ.
ಮುಂದಿನ 24 ಗಂಟೆಗಳಲ್ಲಿ ಬೀದರ್, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಜೆ ವೇಳೆಗೆ ವರುಣನ ಆರ್ಭಟ ಜೋರಾಗಿರಲಿದೆ.
ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಏಪ್ರಿಲ್ 25ರಿಂದ ಇಲ್ಲಿ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಲಕ್ಷಣಗಳಿವೆ.
https://www.newsics.com/2026/04/24/state-government-orders-transfer-of-9-inspectors/