newsics.com/ನ್ಯೂಸಿಕ್ಸ್
ದೈವಕ್ಕೆ ರಣವೀರ್ ಸಿಂಗ್ ಅವಮಾನ ಮಾಡಿದ ಪ್ರಕರಣ ಕೊನೆಗೂ ಇತ್ಯರ್ಥವಾಗಿದೆ. ಈ ಪ್ರಕರಣದಲ್ಲಿ ರಣವೀರ್ ಕ್ಷಮೆಯಾಚನೆಯನ್ನು ವಕೀಲರು ಒಪ್ಪಿಕೊಂಡಿದ್ದಾರೆ.
https://youtube.com/shorts/yrC3ODyMmjo?si=ybubL3Ee_pXg1sLS
ದೈವಕ್ಕೆ ಅವಮಾನ ಮಾಡಿದ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಎಫ್ ಐಆರ್ ರದ್ದು ಕೋರಿ ನಟ ರಣವೀರ್ ಸಿಂಗ್ ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ತಪ್ಪಿಗಾಗಿ ಕ್ಷಮೆಯಾಚಿಸಿದ್ದರು. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಬಂದು ಕ್ಷಮೆಯಾಚಿಸುವುದಾಗಿಯೂ ಹೇಳಿದ್ದರು.
ಅರ್ಜಿ ವಿಚಾರಣೆ ವೇಳೆ ರಣವೀರ್ ಸಿಂಗ್ ಕ್ಷಮಾಪಣೆ ಪತ್ರವನ್ನು ಕೋರ್ಟ್ ಗೆ ಸಲ್ಲಿಸಿದ್ದು, ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲು ಸಿದ್ಧರಿರುವುದಾಗಿ ಆದರೆ ಭದ್ರತೆ ದೃಷ್ಟಿಯಿಂದ ಭೇಟಿಗೆ ಗಡುವು ನೀಡುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ರಣವೀರ್ ಸಿಂಗ್ ಪರ ವಕೀಲ ಸಜನ್ ಪೂವಯ್ಯ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ರಣವೀರ್ ಸಿಂಗ್ ಕ್ಷಮೆಯಾಚನೆ ಅಂಗೀಕರಿಸಿದ ಹೈಕೋರ್ಟ್, ಅರ್ಜಿಯನ್ನು ಇತ್ಯರ್ಥಗೊಳಿಸಿದೆ. ಅಲ್ಲದೇ ಚಾಮುಂಡಿ ಬೆಟ್ಟ ಭೇಟಿ ಬಗ್ಗೆ ಆದೇಶ ನೀಡಲಾಗುವುದು ಎಂದು ತಿಳಿಸಿದೆ.