newsics.com/ನ್ಯೂಸಿಕ್ಸ್
ಬೆಂಗಳೂರು : ಶೃಂಗೇರಿ ಕಾಂಗ್ರೆಸ್ ಶಾಸಕ ಟಿಡಿ ರಾಜೇಗೌಡಗೆ ಸಂಕಷ್ಟ ಎದುರಾಗಿದೆ. ಶೃಂಗೇರಿ ಕ್ಷೇತ್ರದ ಅಂಚೆ ಮತ ಮರುವಣಿಗೆಗೆ ಹೈಕೋರ್ಟ್ ಸೂಚನೆ ನೀಡಿದ್ದು, ಮೇ 2 ರಂದು ಬೆಳಿಗ್ಗೆ 9 ಗಂಟೆಗೆ ಅಂಚೆ ಮರು ಮತ ಎಣಿಕೆ ನಡೆಯಲಿದೆ. ಚಿಕ್ಕಮಂಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ಮರು ಮತ ಎಣಿಕೆ ನಡೆಯಲಿದೆ.
https://youtube.com/shorts/yrC3ODyMmjo?si=ybubL3Ee_pXg1sLS
ಟಿಡಿ ರಾಜೇಗೌಡ ಆಯ್ಕೆ ಆಸಿಂದು ಕೋರಿ ಜೀವರಾಜ್ ಅರ್ಜಿ ಸಲ್ಲಿಸಿದ್ದರು. ಜೀವರಾಜ್ ಶೃಂಗೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿಯಾಗಿದ್ದು, ಏಪ್ರಿಲ್ 6 ರಂದು ಮರು ಎಣಿಕೆಗೆ ಆದೇಶ ನೀಡಿ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು.
ಎರಡು ವಾರಗಳ ಕಾಲಾವಕಾಶ ಮಧ್ಯಂತರ ತಡೆ ನೀಡಿದ್ದ ಹೈಕೋರ್ಟ್ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ಇದೀಗ ಅಂಚೆ ಮತಗಳ ಮರು ಎಣಿಕೆ ಮಾಡಲು ಹೈಕೋರ್ಟ್ ಮತ್ತೆ ಆದೇಶ ಮಾಡಿದೆ. 201 ಮತಗಳ ಅಂತರದಿಂದ ಟಿಡಿ ರಾಜೇಗೌಡ ಗೆಲುವು ಸಾಧಿಸಿದ್ದರು.
https://www.newsics.com/2026/04/25/take-these-precautions-when-dating-during-a-heatwave/