Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಈ ಹಿಂದೆ ಹಣಕ್ಕಾಗಿ ಕಿಡ್ನಾಪ್ ಆಗಿ ಬಚಾವ್ ಆಗಿದ್ದ ಪೈನಾನ್ಶಿಯರ್ ನ ಬರ್ಬರ ಹತ್ಯೆ!
ಕರ್ನಾಟಕಪ್ರಮುಖ

ಈ ಹಿಂದೆ ಹಣಕ್ಕಾಗಿ ಕಿಡ್ನಾಪ್ ಆಗಿ ಬಚಾವ್ ಆಗಿದ್ದ ಪೈನಾನ್ಶಿಯರ್ ನ ಬರ್ಬರ ಹತ್ಯೆ!

Share
1 Min Read
SHARE

newsics.com/ನ್ಯೂಸಿಕ್ಸ್

ಪಟ್ಟಣದ ಬಸ್ ನಿಲ್ದಾಣದ ಎದುರಿನ ಅಂಬಿಕಾ ಹೋಟೆಲ್‌ನಲ್ಲಿ ಪೈನಾನ್ಸ್ ವ್ಯವಹಾರ ಮಾಡುತ್ತಿದ್ದ ಜಮೀರ್ ಅಹ್ಮದ್ ದರ್ಗಾವಾಲೆಯನ್ನು ದುಷ್ಕರ್ಮಿಗಳು ಅಮಾನುಷವಾಗಿ ಕೊಲೆಗೈದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ನಡೆದಿದೆ.

https://youtube.com/shorts/yrC3ODyMmjo?si=ybubL3Ee_pXg1sLS

ಏಪ್ರಿಲ್ 24ರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ, ಜಮೀರ್ ಅಹ್ಮದ್ ತಮ್ಮ ಸ್ನೇಹಿತನೊಂದಿಗೆ ಊಟಕ್ಕೆ ಹೋಟೆಲ್‌ಗೆ ಬಂದಿದ್ದರು. ಈ ವೇಳೆ ಸ್ನೇಹಿತನನ್ನು ಸಿಗರೇಟ್ ತರಲು ಹೊರಗೆ ಕಳುಹಿಸಿದ್ದಾಗ, ನಾಲ್ಕೈದು ಮಂದಿ ದುಷ್ಕರ್ಮಿಗಳು ಏಕಾಏಕಿ ಹೋಟೆಲ್‌ಗೆ ನುಗ್ಗಿದ್ದಾರೆ.

ಮೊದಲು ಜಮೀರ್ ಅವರ ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. ನಂತರ ಪ್ರಾಣಾಪಾಯದಿಂದ ತಪ್ಪಿಸಿಕೊಳ್ಳಲು ಜಮೀರ್ ಹೋಟೆಲ್‌ನ ಅಡುಗೆಮನೆಯ ಕಡೆಗೆ ಓಡಲು ಯತ್ನಿಸಿದರೂ, ದುಷ್ಕರ್ಮಿಗಳು ಅವರನ್ನು ಹಿಂಬಾಲಿಸಿ ಹಿಡಿದುಕೊಂಡು, ಹರಿತವಾದ ಮಚ್ಚಿನಿಂದ ಕುತ್ತಿಗೆಗೆ ಗಂಭೀರವಾಗಿ ಇರಿದು ಕೊಲೆಗೈದಿದ್ದಾರೆ. ಇದಲ್ಲದೆ, ಗುಂಡು ಹಾರಿಸಿದ ಶಂಕೆಯೂ ವ್ಯಕ್ತವಾಗಿದೆ. ಘಟನೆ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಜಮೀರ್ ಅಹ್ಮದ್ ಪೈನಾನ್ಸ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು. ಸುಮಾರು ಒಂದೂವರೆ ವರ್ಷಗಳ ಹಿಂದೆ ಅವರನ್ನು ಹಣಕ್ಕಾಗಿ ಅಪಹರಣ ಮಾಡಲಾಗಿತ್ತು. ಆಗ ಸುಮಾರು 30 ಲಕ್ಷ ರೂ. ಹಣಕ್ಕಾಗಿ ಅಪಹರಣಕಾರರು ಬೇಡಿಕೆ ಇಟ್ಟಿದ್ದರು. ಆದರೆ, ಮುಂಡಗೋಡ ಪೊಲೀಸರು ಚಾಕಚಕ್ಯತೆಯಿಂದ ಕಾರ್ಯಾಚರಣೆ ನಡೆಸಿ ಅಪಹರಣಕಾರರನ್ನು ಬಂಧಿಸಿ ಜಮೀರ್ ಅವರನ್ನು ರಕ್ಷಿಸಿದ್ದರು.

.ಘಟನೆಯ ಮಾಹಿತಿ ತಿಳಿದ ತಕ್ಷಣ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

https://www.newsics.com/2026/04/25/tired-of-harassment-newlywed-commits-suicide-just-two-months-after-marriage/

TAGGED:The brutal murder of a financier who had previously been kidnapped for money and saved!
Share This Article
Facebook Twitter Copy Link Print
Previous Article ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ಮದುವೆಯಾದ ಎರಡೇ ತಿಂಗಳಿಗೆ ಆತ್ಮ*ಹತ್ಯೆ
Next Article ಆಸ್ಪತ್ರೆಗೆ ಬಂದಿದ್ದ ಮಹಿಳೆ ಜತೆ ಕಾಲು ಮುಟ್ಟಿ ಅಸಭ್ಯವಾಗಿ ವರ್ತಿಸಿದ ಆಸ್ಪತ್ರೆ ಸಿಬ್ಬಂದಿ

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?