Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > NIA Court judgement ಕುಕ್ಕರ್ ಬಾಂಬ್ ಸ್ಫೋಟ ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ: ಎನ್ಐಎ ಕೋರ್ಟ್ ತೀರ್ಪು
ಕರ್ನಾಟಕದೇಶಪ್ರಮುಖ

NIA Court judgement ಕುಕ್ಕರ್ ಬಾಂಬ್ ಸ್ಫೋಟ ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ: ಎನ್ಐಎ ಕೋರ್ಟ್ ತೀರ್ಪು

Share
2 Min Read
SHARE

newsics.com/ನ್ಯೂಸಿಕ್ಸ್

ಮಂಗಳೂರು: ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು, 10 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಆರೋಪಿ ಶಾರಿಕ್ ಬಾಂಬ್ ಹೊತ್ತು ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದರಿಂದ ಭಾರಿ ಅನಾಹುತವೊಂದು ತಪ್ಪಿತ್ತು. ಈ ಘಟನೆಯಲ್ಲಿ ಶಾರಿಕ್ ಮತ್ತು ಆಟೋ ಚಾಲಕ ಗಾಯಗೊಂಡಿದ್ದರು. ದೇಶದ ಭದ್ರತೆಗೆ ಧಕ್ಕೆ ತರುವ ಸಂಚು ರೂಪಿಸಿದ ಹಿನ್ನೆಲೆಯಲ್ಲಿ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಲಾಗಿತ್ತು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಎನ್‌ಐಎ ವಿಶೇಷ ನ್ಯಾಯಾಲಯವು, ಆರೋಪಿ ವಿರುದ್ಧದ ಸಾಕ್ಷ್ಯಗಳನ್ನು ಪುರಸ್ಕರಿಸಿದೆ. ಶಾರಿಕ್ ವಿರುದ್ಧ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ಪ್ರಕಟಿಸಲಾಗಿದೆ,.

ಐಪಿಸಿ ಸೆಕ್ಷನ್ 121ಎ (ಭಾರತ ಸರ್ಕಾರದ ವಿರುದ್ಧ ಯುದ್ಧ ಸಾರುವ ಸಂಚು) ಐಪಿಸಿ ಸೆಕ್ಷನ್ 122 (ಯುದ್ಧ ಮಾಡುವ ಉದ್ದೇಶದಿಂದ ಶಸ್ತ್ರಾಸ್ತ್ರ ಸಂಗ್ರಹಣೆ) ಐಪಿಸಿ ಸೆಕ್ಷನ್ 326 (ಮಾರಕ ಆಯುಧಗಳಿಂದ ಗಂಭೀರ ಗಾಯಗೊಳಿಸುವುದು) ಯುಎಪಿಎ (UAPA)(ಭಯೋತ್ಪಾದನಾ ಚಟುವಟಿಕೆಗಳ ತಡೆ ಕಾಯ್ದೆಯಡಿ ಕಠಿಣ ಶಿಕ್ಷೆ).

2022ರಲ್ಲಿ ಕರಾವಳಿ ನಗರಿ ಮಂಗಳೂರನ್ನು ಬೆಚ್ಚಿಬೀಳಿಸಿದ್ದ ಆಟೋ ರಿಕ್ಷಾ ಸ್ಫೋಟ ಪ್ರಕರಣಕ್ಕೆ ಇಂದು ತಾರ್ಕಿಕ ಅಂತ್ಯ ಸಿಕ್ಕಿದೆ. ಈ ಭೀಕರ ಸಂಚಿನ ಕರಾಳ ಮುಖಗಳು ಮತ್ತು ತನಿಖೆಯ ಏನೆಲ್ಲ ಆಗಿತ್ತು ಎಂಬ ಮಾಹಿತಿ ಇಲ್ಲಿದೆ ನೋಡಿ. ಮಂಗಳೂರಿನ ಕಂಕನಾಡಿ ರೈಲ್ವೆ ನಿಲ್ದಾಣದ ಸಮೀಪವಿರುವ ನಾಗುರಿ ಎಂಬಲ್ಲಿ ಸಂಜೆ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಭಾರಿ ಸದ್ದು ಕೇಳಿಬಂತು. ಅದು ಸಾಮಾನ್ಯ ಸ್ಫೋಟವಾಗಿರಲಿಲ್ಲ; ಅದೊಂದು ವ್ಯವಸ್ಥಿತವಾಗಿ ರೂಪಿಸಲಾಗಿದ್ದ ಐಇಡಿ (IED) ಬಾಂಬ್ ಸ್ಫೋಟ. ಈ ಘಟನೆಯಲ್ಲಿ ಆಟೋದಲ್ಲಿದ್ದ ಪ್ರಯಾಣಿಕ ಮೊಹಮ್ಮದ್ ಶಾರಿಕ್ ಮತ್ತು ಆಟೋ ಚಾಲಕ ಪುರುಷೋತ್ತಮ ಪೂಜಾರಿ ಗಂಭೀರವಾಗಿ ಗಾಯಗೊಂಡಿದ್ದರು.

ಪೊಲೀಸರು ತನಿಖೆ ಆರಂಭಿಸಿದಾಗ ಆಟೋದಲ್ಲಿ ಸುಟ್ಟುಹೋಗಿದ್ದ ಪ್ರೆಶರ್ ಕುಕ್ಕರ್ ಪತ್ತೆಯಾಯಿತು. ಅದರೊಳಗೆ ಡಿಟೋನೇಟರ್, ಸರ್ಕ್ಯೂಟ್ ಮತ್ತು ಬ್ಯಾಟರಿಗಳನ್ನು ಅಳವಡಿಸಲಾಗಿತ್ತು. ಆತ್ಮಾಹುತಿ ಬಾಂಬ್ ಇದ್ದಾಗಿತ್ತು ಎಂದು ತನಿಖೆಯಲ್ಲಿ ತಿಳಿದು ಬಂದಿತ್ತು. ಶಾರಿಕ್ ತನ್ನ ಬಳಿ ಹುಬ್ಬಳ್ಳಿಯ ‘ಪ್ರೇಮರಾಜ್’ ಎಂಬುವವರ ಹೆಸರಿನ ನಕಲಿ ಆಧಾರ್ ಕಾರ್ಡ್ ಇಟ್ಟುಕೊಂಡಿದ್ದನು, ಶಾರಿಕ್ ಮೈಸೂರಿನಲ್ಲಿ ಬಾಡಿಗೆ ಮನೆ ಪಡೆದು ಅಲ್ಲಿಯೇ ಬಾಂಬ್ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳನ್ನು ಅಳವಡಿಸಿದ್ದನು ಎಂಬುದು ತನಿಖೆಯಲ್ಲಿ ತಿಳಿದು ಬಂದಿತ್ತು.

ಪ್ರಕರಣದ ಗಾಂಭೀರ್ಯ ಅರಿತ ಕೇಂದ್ರ ಸರ್ಕಾರ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಿತು. ಶಾರಿಕ್ ಕೇವಲ ಒಬ್ಬ ಅಪರಾಧಿಯಲ್ಲ, ಆತ ಐಸಿಸ್ (ISIS) ಉಗ್ರ ಸಂಘಟನೆಯಿಂದ ಪ್ರೇರಿತನಾಗಿ ರಾಜ್ಯಾದ್ಯಂತ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ “ಲೋನ್ ವುಲ್ಫ್” (Lone Wolf) ಎಂಬುದು ಬಯಲಾಯಿತು. ಮಂಗಳೂರಿನ ಕದ್ರಿ ದೇವಸ್ಥಾನ ಅಥವಾ ಜನನಿಬಿಡ ಪ್ರದೇಶವೇ ಆತನ ಗುರಿಯಾಗಿತ್ತು ಎಂಬ ಶಂಕೆ ವ್ಯಕ್ತವಾಗಿತ್ತು.ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯವು ಕಳೆದ ನಾಲ್ಕು ವರ್ಷಗಳಿಂದ ನಡೆಯುತ್ತಿದ್ದ ವಿಚಾರಣೆಯನ್ನು ಪೂರ್ಣಗೊಳಿಸಿ ಇಂದು ಅಂತಿಮ ತೀರ್ಪು ನೀಡಿದೆ. ಇನ್ನು ಈ ಘಟನೆಯಿಂದ ಗಾಯಗೊಂಡಿದ್ದ ಪುರುಷೋತ್ತಮ ಪೂಜಾರಿ ಅವರ ಸಹಾಯ ಸುಧಾರಿಸಿಕೊಂಡಿದೆ.

ಪರಮೇಶ್ವರ್ ಗೆ ಸಿಎಂ ಪಟ್ಟ..!?; ಹೈಕಮಾಂಡ್ ಮುಂದೆ ಸಿದ್ದರಾಮಯ್ಯ ಇಟ್ಟ ʻಕಂಡೀಷನ್’ ಏನು?

ಗೋಲ್‌ಗಪ್ಪಾ ತಿಂದು 7 ವರ್ಷದ ಬಾಲಕ ಸಾವು; 18 ಮಂದಿ ಆಸ್ಪತ್ರೆಗೆ ದಾಖಲು

TAGGED:NIA court sentences cooker bomb blast convict to 10 years rigorous imprisonment
Share This Article
Facebook Twitter Copy Link Print
Previous Article ಮಕ್ಕಳಿಗೆ ಬೇಸಿಗೆಯಲ್ಲಿ ಏನನ್ನು ನೀಡಬೇಕು?
Next Article ಬಾಡಿ ಶೇಮಿಂಗ್ ಕುರಿತು ನಟ ಧನುಷ್ ಹೇಳಿದ್ದೇನು?

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?