Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪರಮೇಶ್ವರ್ ಗೆ ಸಿಎಂ ಪಟ್ಟ..!?; ಹೈಕಮಾಂಡ್ ಮುಂದೆ ಸಿದ್ದರಾಮಯ್ಯ ಇಟ್ಟ ʻಕಂಡೀಷನ್’ ಏನು?
ಕರ್ನಾಟಕಪ್ರಮುಖ

ಪರಮೇಶ್ವರ್ ಗೆ ಸಿಎಂ ಪಟ್ಟ..!?; ಹೈಕಮಾಂಡ್ ಮುಂದೆ ಸಿದ್ದರಾಮಯ್ಯ ಇಟ್ಟ ʻಕಂಡೀಷನ್’ ಏನು?

Share
2 Min Read
SHARE

ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೆ ಪಟ್ಟದ ಫೈಟ್ ಜೋರಾಗಿದೆ. ಸಿದ್ದರಾಮಯ್ಯ ಸಿಎಂ ಆಗಿ ಮೂರು ವರ್ಷ ಪೂರ್ಣಗೊಳಿಸುತ್ತಿರುವ ವೇಳೆಯಲ್ಲೆ ಸಿಎಂ ಸ್ಥಾನ ಹಂಚಿಕೆಗೆ ಡಿಕೆಶಿ ಬಣ ಬೇಡಿಕೆ ಇಡ್ತಿದ್ರೆ ಟಗರು ಟೀಂ ಸಿಎಂ ಬದಲಾವಣೆ ಯೇ ಇಲ್ಲ ಅನ್ನೋ ಪಟ್ಟಿಗೆ ನಿಂತಿದೆ.

ರಾಜಕಾರಣದಲ್ಲಿ ಈಗ ದಲಿತ ಮುಖ್ಯಮಂತ್ರಿ ಅಸ್ತ್ರದ ಬಿರುಗಾಳಿ ಎದ್ದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್ ಮುಂದೆ ಇಟ್ಟಿದ್ದಾರೆ ಎನ್ನಲಾದ ಹೊಸ ಷರತ್ತು ಭಾರೀ ಸಂಚಲನ ಮೂಡಿಸಿದೆ. ಒಂದು ವೇಳೆ ತಾವು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕಾದ ಸಂದರ್ಭ ಬಂದರೆ, ಮುಂದಿನ ಮುಖ್ಯಮಂತ್ರಿಯಾಗಿ ಡಾ.ಜಿ. ಪರಮೇಶ್ವರ್ ಅವರನ್ನು ನೇಮಿಸಬೇಕು ಎಂಬ ಬೇಡಿಕೆಯನ್ನು ಸಿದ್ದರಾಮಯ್ಯ ಮುಂದಿಟ್ಟಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಹೈಕಮಾಂಡ್‌ನ ದಲಿತ ಪರ ನಿಲುವನ್ನೇ ಅಸ್ತ್ರವಾಗಿ ಬಳಸಿಕೊಂಡಿರುವ ಸಿದ್ದರಾಮಯ್ಯ, ದಲಿತ ನಾಯಕನಿಗೆ ಪಟ್ಟ ಕಟ್ಟುವ ವಾದದ ಮೂಲಕ ವಿರೋಧಿ ಬಣಕ್ಕೆ ಚೆಕ್ ನೀಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಸಿದ್ದರಾಮಯ್ಯ ಮತ್ತು ಪರಮೇಶ್ವರ್ ನಡುವೆ ಗುಪ್ತವಾಗಿ ‘ಸೀಕ್ರೆಟ್ ಡೀಲ್’ ಒಂದು ಕುದುರಿದೆ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ. ರಾಹುಲ್ ಗಾಂಧಿ ಸೂಚಿಸಿದರೆ ತಾವು ಕುರ್ಚಿಯಿಂದ ಇಳಿಯಲು ಸಿದ್ಧ ಎಂಬ ಸಂದೇಶ ರವಾನಿಸಿರುವ ಮುಖ್ಯಮಂತ್ರಿಗಳು, ಆದರೆ ತಮ್ಮ ನಂತರ ಪರಮೇಶ್ವರ್ ಅವರನ್ನೇ ಕೂರಿಸಬೇಕು ಎಂಬ ಪಟ್ಟು ಹಿಡಿದಿರುವುದು ಕುತೂಹಲ ಮೂಡಿಸಿದೆ. ದಲಿತ ಸಿಎಂ ಆದರೆ ಮಾತ್ರ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರಲು ಸಾಧ್ಯ ಎಂಬ ಹೊಸ ವಾದವನ್ನು ಹೈಕಮಾಂಡ್ ಮುಂದೆ ಮಂಡಿಸುವ ಮೂಲಕ ಸಿದ್ದರಾಮಯ್ಯ ಅವರು ಹೊಸ ರಾಜಕೀಯ ವರಸೆ ಶುರು ಮಾಡಿದ್ದಾರೆ.

ಕುರ್ಚಿ ಬಿಟ್ಟರೂ ಕಿಂಗ್ ಮೇಕರ್ ಆಗಿ ಉಳಿಯುವ ಮತ್ತು ತಮಗೆ ಬೇಕಾದವರನ್ನು ಅಧಿಕಾರದಲ್ಲಿ ಕೂರಿಸುವ ಸಿದ್ದರಾಮಯ್ಯ ಅವರ ಈ ಕಸರತ್ತು ರಾಜ್ಯ ಕಾಂಗ್ರೆಸ್‌ನ ಇತರ ಆಕಾಂಕ್ಷಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಹೈಕಮಾಂಡ್ ಕೂಡ ದಲಿತ ನಾಯಕನಿಗೆ ಅವಕಾಶ ನೀಡುವ ವಿಚಾರದಲ್ಲಿ ಮೃದು ಧೋರಣೆ ಹೊಂದಿರುವುದರಿಂದ, ಈ ದಲಿತಾಸ್ತ್ರವು ಸಿದ್ದರಾಮಯ್ಯ ಅವರ ಪಾಲಿಗೆ ದೊಡ್ಡ ಬಲವಾಗಿ ಪರಿಣಮಿಸಿದೆ. ಒಟ್ಟಿನಲ್ಲಿ ಕರ್ನಾಟಕ ಕಾಂಗ್ರೆಸ್‌ನ ನಾಯಕತ್ವ ಬದಲಾವಣೆಯ ಚರ್ಚೆಗಳು ಈಗ ಕೇವಲ ವೈಯಕ್ತಿಕ ಹೋರಾಟವಾಗಿ ಉಳಿಯದೆ, ಜಾತಿ ಸಮೀಕರಣದ ಹೊಸ ಆಯಾಮವನ್ನು ಪಡೆದುಕೊಂಡಿವೆ.

Today’s Horoscope ರಾಶಿ‌ ಭವಿಷ್ಯ 27-04-2026, ಸೋಮವಾರ, ನಿಮ್ಮ ಇಂದಿನ ಗ್ರಹಗತಿ ಹೇಗಿದೆ?

TAGGED:Parameshwara appointed CM..!?; What is the 'condition' Siddaramaiah placed before the high command?
Share This Article
Facebook Twitter Copy Link Print
Previous Article ಚಲಿಸುತ್ತಿದ್ದ ರೈಲಿನಿಂದ ಕೈಜಾರಿ ಬಿದ್ದ ಮಗು : ಚೈನ್ ಎಳೆದರೂ ನಿಲ್ಲದ ರೈಲು, ಕಣ್ಣೀರಿಟ್ಟ ತಾಯಿ
Next Article ಶವಪೆಟ್ಟಿಗೆ ಎದುರು ಭರ್ಜರಿ ಡಾನ್ಸ್! ಇದ್ಯಾಕೆ ಹೀಗೆ? ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ, ವಿಡಿಯೋ ನೋಡಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?