newsics.com/ನ್ಯೂಸಿಕ್ಸ್
ಮಹಿಳೆಯೊಂದಿಗಿನ ಅಕ್ರಮ ಸಂಬಂಧವನ್ನು ಪ್ರಶ್ನೆ ಮಾಡಿದ್ದಕ್ಕೆ ಅಪ್ರಾಪ್ತ ಮಕ್ಕಳ ಮೇಲೆ ಹಲ್ಲೆ ನಡೆಸಿದ್ದ ಕಾಂಗ್ರೆಸ್ ಮುಖಂಡನನ್ನು ಪೊಲಿಸರು ಬಂಧಿಸಿದ್ದಾರೆ.
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆನಂದ್ ನಾಯ್ಡು ಬಂಧಿತ ಆರೋಪಿ.
ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಆನಂದ್ ನಾಯ್ಡು ಮಹಿಳೆಯೊಬ್ಬರ ಜೊತೆ ಅಕ್ರಮ ಸಂಬಂಧದಲ್ಲಿದ್ದು, ಮಹಿಳೆಯ ಪತಿ ಇದನ್ನು ಪ್ರಶ್ನಿಸಿದ್ದಾರೆ. ಆತನ ಮೇಲಿನ ಸೇಡಿಗೆ ಆನಂದ್ ನಾಯ್ಡು ಆತನ ಅಪ್ರಾಪ್ತ ಮಕ್ಕಳ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದ ಎನ್ನಲಾಗಿದೆ.
ಮಕ್ಕಳಿಗೆ ಕಚ್ಚಿ, ಕೈ-ಕಾಲುಗಳ ಮೇಲೆ ರಾಡ್ ನಿಂದ ಮನಬಂದಂತೆ ಹಲ್ಲೆ ನಡೆಸಿ ಗಾಯಗೊಳಿಸಿದ್ದಾನೆ. ಆನಂದ್ ನಾಯ್ಡು ವಿರುದ್ಧ ಆರೋಪ ಮಾಡಿ ಮಕ್ಕಳು ದೂರು ನೀಡಿದ್ದರು. ಪ್ರಕರಣ ಸಂಬಂಧ ಮಕ್ಕಳ ತಂದೆ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ದೂರು ನೀಡಿದ್ದರು. ಇದೀಗ ಆರೋಪಿ ಆನಂದ್ ನಾಯ್ಡು ನನ್ನು ಪೊಲೀಸರು ಬಂಧಿಸಿದ್ದಾರೆ.
ಪತ್ನಿಯನ್ನು ಕೊಚ್ಚಿ ಕೊಂದು ಮಗು ಜೊತೆ ಬಾವಿಗೆ ಹಾರಿ ಪತಿ ಆತ್ಮಹತ್ಯೆ.!