Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಮಳೆಗೆ ಇಬ್ಬರು ಬಲಿ : ಇನ್ನೂ 3 ದಿನ ಬಿರುಗಾಳಿ ಸಹಿತ ಭಾರೀ ಮಳೆ
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಮಳೆಗೆ ಇಬ್ಬರು ಬಲಿ : ಇನ್ನೂ 3 ದಿನ ಬಿರುಗಾಳಿ ಸಹಿತ ಭಾರೀ ಮಳೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಗುಡುಗು ಸಹಿತ ಸುರಿದ ಮಳೆಗೆ ಇಬ್ಬರು ಬಲಿಯಾಗಿದ್ದು, ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿದೆ.

https://youtube.com/shorts/eOoYZp9a9F0?si=CP6V90gKWCTFTFCS

ಕೊಪ್ಪಳ, ಗದಗ, ರಾಯಚೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಪ್ರಕೃತಿ ವಿಕೋಪಕ್ಕೆ ಇಬ್ಬರು ಮೃತಪಟ್ಟಿದ್ದಾರೆ.

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜಿ. ಬೆಂಚಮಟ್ಟಿ ಗ್ರಾಮದಲ್ಲಿ ಸೋಮವಾರ ಸಂಜೆ ಸಿಡಿಲು ಬಡಿದು ದೇವರಾಯನಗೌಡ ಪಾಟೀಲ (50) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಅರಹತೊಳಲು ಗ್ರಾಮದಲ್ಲಿ ಮಳೆಯ ಅಬ್ಬರಕ್ಕೆ ಅಡಿಕೆ ತೋಟದ ಮನೆಗೆ ಹಾಕಿದ್ದ ಹಂಚುಗಳು ಹಾರಿ ಹೋಗಿವೆ. ಇದನ್ನು ಕಂಡು ಗಾಬರಿಗೊಂಡ ಆರ್. ಲೋಕೇಶ (52) ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ರಾಯಚೂರು ಜಿಲ್ಲೆಯ ಹಳೆ ಕೆರೆ ಎಂಬಲ್ಲಿ ಸಿಡಿಲು ಬಡಿದು 8 ಕುರಿಗಳು ಹಾಗೂ 3 ಕುರಿಮರಿಗಳು ಮೃತಪಟ್ಟಿವೆ. ಗದಗ ಜಿಲ್ಲೆಯ ಮುಂಡರಗಿಯಲ್ಲಿ ಬಿರುಗಾಳಿ ಸಹಿತ ಮಳೆಗೆ ಖಾಸಗಿ ಕಂಪನಿಯ ಮೊಬೈಲ್ ಟವರ್ ಕಂಬ ಮುರಿದು ಬಿದ್ದಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಸಾವಿರಾರು ಅಡಿಕೆ ಮರಗಳು ನೆಲಸಮವಾಗಿವೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆ ಹಾಗೂ ಬಿರುಗಾಳಿ ಸಂಭವಿಸಲಿದೆ. ವಿಶೇಷವಾಗಿ ಆಲಿಕಲ್ಲು ಮಳೆ ಬೀಳುವ ಸಾಧ್ಯತೆ ಇರುವುದರಿಂದ ಜನರು ತೀವ್ರ ಮುನ್ನೆಚ್ಚರಿಕೆ ವಹಿಸಬೇಕೆಂದು ಎಚ್ಚರಿಸಲಾಗಿದೆ.

ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿಲೋಮೀಟರ್ ತಲುಪುವ ಸಾಧ್ಯತೆಯಿದ್ದು, ಆಲಿಕಲ್ಲು ಮಳೆಯ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಲ್ಲಿ ಏಪ್ರಿಲ್ 28 ರಿಂದ 30 ರವರೆಗೆ ಮಳೆಯ ತೀವ್ರತೆ ಹೆಚ್ಚಿರಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಏಪ್ರಿಲ್ 29 ಮತ್ತು 30 ರಂದು ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

https://www.newsics.com/2026/04/28/fire-accident-young-women-who-jumped-from-pg-escape-with-life/

TAGGED:Two killed in rain in the state: Heavy rain with storms for another 3 days
Share This Article
Facebook Twitter Copy Link Print
Previous Article ಅಗ್ನಿ ಅವಘಡ : ಪಿಜಿಯಿಂದ ಹಾರಿದ ಯುವತಿಯರು : ಪ್ರಾಣಪಾಯದಿಂದ ಪಾರು
Next Article ಹಾರ್ಮುಜ್ ಜಲಸಂಧಿಯಲ್ಲಿ ಹಡಗಿನ ಮೇಲೆ ದಾಳಿ: ಇಬ್ಬರು ಭಾರತೀಯ ಸಿಬ್ಬಂದಿಗೆ ಗಾಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?