newsics.com/ನ್ಯೂಸಿಕ್ಸ್
ಕಠ್ಮಂಡು: ಜೀಪ್ ಗುಡ್ಡಗಾಡು ರಸ್ತೆಯಿಂದ ಜಾರಿ ಸುಮಾರು 700 ಮೀಟರ್ ಆಳದ ಕಂದಕಕ್ಕೆ ಉರುಳಿ 20 ಜನರು ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾ ಜಿಲ್ಲೆಯಲ್ಲಿ ನಡೆದಿದೆ.
ರೋಲ್ಪಾದಲ್ಲಿರುವ ಜಿಲ್ಲಾ ಪೊಲೀಸ್ ಕಚೇರಿಯ ಮಾಹಿತಿ ಅಧಿಕಾರಿ ಪೊಲೀಸ್ ಇನ್ಸ್‌ಪೆಕ್ಟರ್ ಸುನಿಲ್ ಥಾಪಾ ನೇಪಾಳಿ ಅವರ ಪ್ರಕಾರ, ಶುಕ್ರವಾರ ಬೈಸಾಖ್ ಪೂರ್ಣಿಮಾ ಆಚರಣೆಯಲ್ಲಿ ಭಾಗವಹಿಸಲು ಪ್ರಯಾಣಿಸುತ್ತಿದ್ದ ಸ್ಥಳೀಯರು ಖಾಸಗಿ ಜೀಪನ್ನು ಬಾಡಿಗೆಗೆ ಪಡೆದಿದ್ದರು.
ಈ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಅಪಘಾತದ ಸಮಯದಲ್ಲಿ ವಾಹನದಲ್ಲಿದ್ದ ಪ್ರಯಾಣಿಕರ ಸಂಖ್ಯೆ ಇನ್ನೂ ತಿಳಿದಿಲ್ಲ.