newsics.com/ನ್ಯೂಸಿಕ್ಸ್
ಬೆಂಗಳೂರು: ಭಾರೀ ಮಳೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸ ‘ಕಾವೇರಿ’ಯ ಮುಂಭಾಗದಲ್ಲೇ ಬೃಹತ್ ಮರವೊಂದು ಬುಡಸಮೇತ ಉರುಳಿ ಬಿದ್ದಿದೆ.
https://youtube.com/shorts/A7gPa–K6QY?si=UClQxtCV5fiwGWUd
4-5 ಮರವು ಕಾವೇರಿ ನಿವಾಸದ ಕಾಂಪೌಂಡ ಮೇಲೆ ಉರುಳಿ ಬಿದ್ದಿದೆ. ಅದೃಷ್ಟವಶಾತ್ ದೊಡ್ಡ ಮಟ್ಟದ ಅನಾಹುತವೊಂದು ತಪ್ಪಿದಂತಾಗಿದೆ . ಮರ ಬಿದ್ದ ತಕ್ಷಣ ಎಚ್ಚೆತ್ತ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಸಿಎಂ ನಿವಾಸದ ಸುತ್ತಮುತ್ತಲಿನ ರಸ್ತೆಗಳನ್ನು ಬಂದ್ ಮಾಡಿದರು. ಈ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಮಣ್ಣು ಸಡಿಲಗೊಂಡು ಮರ ಉರುಳಿರಬಹುದು ಎಂದು ಶಂಕಿಸಲಾಗಿದೆ.
ಬೆಂಗಳೂರಿನಲ್ಲಿ ಕಳೆದ 25 ವರ್ಷಗಳಲ್ಲಿ ದಾಖಲಾದ ಅತಿ ಹೆಚ್ಚು ಮಳೆ ಇದಾಗಿದ್ದು, ಸಿಎಂ ನಿವಾಸದ ಬಳಿಯೇ ನಡೆದ ಈ ಘಟನೆಯು ಹಳೆಯ ಮರಗಳ ನಿರ್ವಹಣೆಯ ಬಗ್ಗೆ ಆತಂಕ ಮೂಡಿಸಿದೆ.
https://www.newsics.com/2026/04/30/significant-change-in-gas-cylinder-booking-from-tomorrow/