Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಮೀರ್ ಗೆ ಸಿದ್ದರಾಮಯ್ಯ ನೀಡಿದ ಆ ‘ಸೂಕ್ಷ್ಮ’ ಸಂದೇಶವೇನು?
ಕರ್ನಾಟಕಪ್ರಮುಖ

ಜಮೀರ್ ಗೆ ಸಿದ್ದರಾಮಯ್ಯ ನೀಡಿದ ಆ ‘ಸೂಕ್ಷ್ಮ’ ಸಂದೇಶವೇನು?

Share
2 Min Read
SHARE

ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಪ್ರಕರಣ ಈಗ ಹೈಕಮಾಂಡ್ ಮಟ್ಟಕ್ಕೆ ತಲುಪುವ ಲಕ್ಷಣಗಳು ಕಾಣಿಸುತ್ತಿವೆ. ಈ ವಿವಾದದ ಬೆನ್ನಲ್ಲೇ ಜಮೀರ್ ಅಹಮದ್ ತೀವ್ರ ಆತಂಕಕ್ಕೆ ಒಳಗಾಗಿದ್ದು, ಬೆಂಗಳೂರಿನಲ್ಲಿ ಸಂಧಾನ ಮತ್ತು ತಂತ್ರ ರೂಪಿಸುವಲ್ಲಿ ನಿರತರಾಗಿದ್ದಾರೆ.

ವಿಶೇಷವೆಂದರೆ, ಜಮೀರ್ ಅವರ ದೆಹಲಿ ಪ್ರವಾಸಕ್ಕೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಬ್ರೇಕ್ ಹಾಕಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಸಿದ್ದರಾಮಯ್ಯ ನೀಡಿದ ಆ ‘ಸೂಕ್ಷ್ಮ’ ಸಂದೇಶವೇನು?

ಸೋಮವಾರ ಬೆಳಿಗ್ಗೆ ದೆಹಲಿಗೆ ಹೋಗುವ ಸಿದ್ಧತೆಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಮೀರ್ ಅಹಮದ್ ಖಾನ್ ಭೇಟಿ ಮಾಡಿದ್ದರು. ಈ ವೇಳೆ ವೈರಲ್ ಆಗಿರುವ ಆಡಿಯೋ ಕುರಿತು ಜಮೀರ್ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ. ಆದರೆ, ಸಿದ್ದರಾಮಯ್ಯ ಅವರು ಈ ಸಮಯದಲ್ಲಿ ಜಮೀರ್ ದೆಹಲಿಗೆ ಬರುವುದು ಸೂಕ್ತವಲ್ಲ ಎಂಬ ಕಿವಿಮಾತು ಹೇಳಿದ್ದಾರೆ. “ಈಗಾಗಲೇ ವಿವಾದ ಸೃಷ್ಟಿಯಾಗಿದೆ, ಈ ಹೊತ್ತಿನಲ್ಲಿ ನೀವು ದೆಹಲಿಗೆ ಬಂದರೆ ಅದು ನೆಗೆಟಿವ್ ಆಗಿ ಬಿಂಬಿತವಾಗಬಹುದು. ಸದ್ಯಕ್ಕೆ ಬೆಂಗಳೂರಿನಲ್ಲೇ ಉಳಿದುಕೊಳ್ಳಿ” ಎಂದು ಸಿಎಂ ಸೂಕ್ಷ್ಮವಾಗಿ ಸಲಹೆ ನೀಡಿದ್ದಾರೆ. ಸಿಎಂ ಸಲಹೆಯ ಬೆನ್ನಲ್ಲೇ ಜಮೀರ್ ತಮ್ಮ ದೆಹಲಿ ಪ್ರವಾಸವನ್ನು ರದ್ದುಗೊಳಿಸಿ ಬೆಂಗಳೂರಿನಲ್ಲೇ ಉಳಿಯಲು ನಿರ್ಧರಿಸಿದ್ದಾರೆ.

ಖಾಸಗಿ ಗೆಸ್ಟ್ ಹೌಸ್‌ನಲ್ಲಿ ರಹಸ್ಯ ಸಭೆ:

ದೆಹಲಿ ಪ್ರವಾಸ ರದ್ದಾದ ಬೆನ್ನಲ್ಲೇ ಜಮೀರ್ ಅಹಮದ್ ಆತಂಕದಿಂದ ಮುಸ್ಲಿಂ ನಾಯಕರ ಮೊರೆ ಹೋಗಿದ್ದಾರೆ. ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿ ಇರುವ ಕಾಂಗ್ರೆಸ್ ನಾಯಕರೊಬ್ಬರಿಗೆ ಸೇರಿದ ಖಾಸಗಿ ಗೆಸ್ಟ್ ಹೌಸ್‌ನಲ್ಲಿ ಜಮೀರ್ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮುಸ್ಲಿಂ ಸಮುದಾಯದ ಪ್ರಮುಖ ನಾಯಕರು ಹಾಗೂ ಎಂಎಲ್ಸಿ ನಸೀರ್ ಅಹ್ಮದ್ ಖಾನ್ ಕೂಡ ಉಪಸ್ಥಿತರಿದ್ದರು ಎನ್ನಲಾಗಿದೆ. ಆಡಿಯೋ ವಿವಾದದಿಂದ ಆಗಬಹುದಾದ ರಾಜಕೀಯ ಹಾನಿಯನ್ನು ತಡೆಯುವುದು ಹೇಗೆ ಮತ್ತು ಹೈಕಮಾಂಡ್ ಮುಂದೆ ಯಾವ ರೀತಿ ಸ್ಪಷ್ಟನೆ ನೀಡಬೇಕು ಎಂಬ ಬಗ್ಗೆ ಚರ್ಚೆ ನಡೆಸಲಾಗಿದೆ.

ಹೆಚ್ಚಿದ ಆತಂಕ:

ವೈರಲ್ ಆಡಿಯೋದಲ್ಲಿ ಕಾಂಗ್ರೆಸ್ ವಿರೋಧಿ ಮಾತುಗಳು ಕೇಳಿಬಂದಿರುವುದು ಜಮೀರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಅದರಲ್ಲೂ ದಾವಣಗೆರೆಯ ಶಾಸಕ ಸಮರ್ಥ ಶಾಮನೂರು ಅವರು ಈ ಬಗ್ಗೆ ಹೈಕಮಾಂಡ್‌ಗೆ ದೂರು ನೀಡುವ ಎಚ್ಚರಿಕೆ ನೀಡಿರುವುದು ಜಮೀರ್ ಅವರ ನಿದ್ದೆಗೆಡಿಸಿದೆ. ಒಂದು ಕಡೆ ಇದು ‘ನಕಲಿ ಆಡಿಯೋ’ ಎಂದು ಜಮೀರ್ ವಾದಿಸುತ್ತಿದ್ದರೂ, ಪಕ್ಷದೊಳಗಿನ ಇತರ ನಾಯಕರು ಮಾತ್ರ ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

Share This Article
Facebook Twitter Copy Link Print
Previous Article Smallest fox ಜಗತ್ತಿನ ಅತಿ ಸಣ್ಣ ಗಾತ್ರದ ಫೆನ್ನೆಕ್ ಫಾಕ್ಸ್ ಪತ್ತೆ!
Next Article Nursery rhymes 12 ವರ್ಷದ ಬಾಲಕಿಯಿಂದ 38 ಶಿಶುಗೀತೆ! ಖುಷಿಪಟ್ಟ ಚೇತನ್ ಭಗತ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?