Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Gang ra*pe ಇಬ್ಬರು ಬಾಲಕಿಯರ ಮೇಲೆ 12‌ ಕಾಮುಕರಿಂದ ಸಾಮೂಹಿಕ ಅತ್ಯಾ*ಚಾರ, 6 ಮಂದಿ‌ ಬಂಧನ
ದೇಶಪ್ರಮುಖ

Gang ra*pe ಇಬ್ಬರು ಬಾಲಕಿಯರ ಮೇಲೆ 12‌ ಕಾಮುಕರಿಂದ ಸಾಮೂಹಿಕ ಅತ್ಯಾ*ಚಾರ, 6 ಮಂದಿ‌ ಬಂಧನ

Share
2 Min Read
SHARE

newsics.com/ನ್ಯೂಸಿಕ್ಸ್

ರಾಯ್‌ಪುರ: ಬುಡಕಟ್ಟು ಸಮುದಾಯದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ 12 ಮಂದಿ ಕಾಮುಕರ ಗುಂಪು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ (Crime News) ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ.

ಛತ್ತೀಸ್‌ಸರ್ಹದ ಸುರ್ಗುಜಾ ಜಿಲ್ಲೆಯಲ್ಲಿ ಈ ಭೀಕರ ಕೃತ್ಯ ನಡೆದಿದ್ದು, ಇಬ್ಬರು ಅಪ್ರಾಪ್ತ ಬುಡಕಟ್ಟು ಸಮುದಾಯದ ಹುಡುಗಿಯರ ಮೇಲೆ 12 ಮಂದಿ ಕಾಮುಕರು ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನಾಲ್ವರು ಹದಿಹರೆಯದ ಹುಡುಗಿಯರು ಮದುವೆ ಕಾರ್ಯಕ್ರಮ ಮುಗಿಸಿ ತಮ್ಮ ಮನೆಗೆ ತಡರಾತ್ರಿ ನಡೆದುಕೊಂಡು ಹೋಗುತ್ತಿದ್ದಾಗ ನಿರ್ಜನ ಪ್ರದೇಶದಲ್ಲಿ ತಡೆದ 12 ಕಾಮುಕರ ಗುಂಪು ಈ ಕೃತ್ಯ ಎಸಗಿದೆ. ಅದೃಷ್ಟವಶಾತ್ ಇಬ್ಬರು ಹುಡುಗಿಯರು ಕಾಮುಕರು ಕೈಯಿಂದ ತಪ್ಪಿಸಿಕೊಂಡು ಓಡಿ ಪಾರಾಗಿದ್ದಾರೆ ಎಂದು ಎಂದು ತಿಳಿದು ಬಂದಿದೆ.

ಮಾಹಿತಿ ಪ್ರಕಾರ, ಆರು ಬೈಕ್‌ಗಳಲ್ಲಿ ಬಂದ 12 ಯುವಕರ ಗುಂಪು ನಿರ್ಜನ ಪ್ರದೇಶದಲ್ಲಿ 13-14 ವರ್ಷ ವಯಸ್ಸಿನ ನಾಲ್ಕು ಮಂದಿ ಹದಿಹರೆಯದ ಹುಡುಗಿಯರನ್ನು ತಡೆದಿದೆ. ಆಗ ಕಾಮುಕರ ಕೈಯಿಂದ ತಪ್ಪಿಸಿ ಇಬ್ಬರು ಹುಡುಗಿಯರು ಪರಾರಿಯಾಗುವಲ್ಲಿ ಯಶಸ್ವಿಯಾದರು, ಆದರೆ ಇಬ್ಬರು ಅಪ್ರಾಪ್ತ ವಯಸ್ಕರನ್ನು ಬಲವಂತವಾಗಿ ಬಂಧಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ನ್ಯೂಸ್ 18 ಹಿಂದಿ ವರದಿ ಮಾಡಿದೆ.

ಸುರ್ಗುಜಾ ಜಿಲ್ಲೆಯ ಸೀತಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕಿಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಆತಂಕಕಾರಿ ಸಂಗತಿ ಎಂದರೆ ಬಂಧಿತ ಆರೋಪಿಗಳ ಪೈಕಿ ಮೂವರು ಅಪ್ರಾಪ್ತ ವಯಸ್ಕ ಬಾಲಕರು ಎಂದು ತಿಳಿದು ಬಂದಿದೆ.

ಈ ಘಟನೆಯು ಆ ಪ್ರದೇಶದಲ್ಲಿ ವ್ಯಾಪಕ ಜನಾಕ್ರೋಶವನ್ನು ಹುಟ್ಟುಹಾಕಿದೆ. ಪೊಲೀಸರ ಪ್ರಕಾರ, ಸಂತ್ರಸ್ತರು ಮದುವೆ ಸಮಾರಂಭದಿಂದ ಹಿಂತಿರುಗುತ್ತಿದ್ದಾಗ ಆರೋಪಿಗಳು ಅವರನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅಪರಾಧ ಎಸಗಿದ್ದಾರೆ. ಕೃತ್ಯದ ನಂತರ, ಗಂಭೀರ ಗಾಯಗೊಂಡಿದ್ದ ಸಂತ್ರಸ್ತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ವರದಿಯಾಗಿದೆ.

ಅಚ್ಚರಿಯ ಸಂಗತಿ ಎಂದರೆ, ಆರಂಭದಲ್ಲಿ, ಸ್ಥಳೀಯ ಆರೋಗ್ಯ ಕೇಂದ್ರದ ವೈದ್ಯಕೀಯ ವರದಿಯು ಅತ್ಯಾಚಾರವನ್ನು ದೃಢಪಡಿಸಲಿಲ್ಲ, ಇದು ಪ್ರಕರಣದ ಬಗ್ಗೆ ವಿವಾದವನ್ನು ಸೃಷ್ಟಿಸಿತು. ಆದರೆ, ಜಿಲ್ಲಾ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿನಲ್ಲಿ ನಂತರದ ಪರೀಕ್ಷೆಗಳು ಅತ್ಯಾಚಾರವನ್ನು ದೃಢಪಡಿಸಿದವು. ಇದರ ನಂತರ, ಪೊಲೀಸರು ತ್ವರಿತವಾಗಿ ಕಾರ್ಯನಿರ್ವಹಿಸಿ ಆರೋಪಿಯನ್ನು ಬಂಧಿಸಿದರು.

ಸಂತ್ರಸ್ತೆಯ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ, ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 70(2) ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 4(2) ಮತ್ತು 5(ಜೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸೆಕ್ಷನ್‌ಗಳ ಅಡಿಯಲ್ಲಿ ಅಪರಾಧಗಳನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ ಮತ್ತು ಅಪರಾಧ ಸಾಬೀತಾದಾಗ ಕಠಿಣ ಶಿಕ್ಷೆಗೆ ಗುರಿಯಾಗಬಹುದು.

ಘಟನೆಯ ನಂತರ, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಇಡೀ ಪ್ರಕರಣದ ಕೂಲಂಕುಶ ತನಿಖೆಗೆ ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.

Smallest fox ಜಗತ್ತಿನ ಅತಿ ಸಣ್ಣ ಗಾತ್ರದ ಫೆನ್ನೆಕ್ ಫಾಕ್ಸ್ ಪತ್ತೆ!

Revenue deficit ಕರ್ನಾಟಕ ಸೇರಿ 9 ರಾಜ್ಯಗಳಲ್ಲಿ ಆದಾಯ ಕೊರತೆ: ಕೇಂದ್ರ ಹಣಕಾಸು ಇಲಾಖೆ ಎಚ್ಚರಿಕೆ

Moringa leaves ಇಮ್ಯುನಿಟಿ ಬೂಸ್ಟರ್ ನುಗ್ಗೆ ಸೊಪ್ಪು ತಿನ್ನದಿದ್ದರೆ ಹತ್ತಾರು ಆರೋಗ್ಯ ಸಮಸ್ಯೆ!

TAGGED:Two girls gang-raped by 12 men
Share This Article
Facebook Twitter Copy Link Print
Previous Article Moringa leaves ಇಮ್ಯುನಿಟಿ ಬೂಸ್ಟರ್ ನುಗ್ಗೆ ಸೊಪ್ಪು ತಿನ್ನದಿದ್ದರೆ ಹತ್ತಾರು ಆರೋಗ್ಯ ಸಮಸ್ಯೆ!
Next Article Indigo service suspended ಬೆಂಗಳೂರು- ಶಿವಮೊಗ್ಗ ನಡುವಿನ ಇಂಡಿಗೋ‌ ವಿಮಾನ ಸೇವೆ ಸ್ಥಗಿತ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?