newsics.com/ನ್ಯೂಸಿಕ್ಸ್
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದ್ದು, ದಕ್ಷಿಣ ಒಳನಾಡಿನ ಹಲವು ಕಡೆ ಗಾಳಿ ಮಳೆಯೂ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
https://youtube.com/shorts/4WeDGkWkv1E?si=V5-kEiXb0VaUEmaX
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆಯಾರ್ಭಟವಿದ್ದು, ಕೆಲವೆಡೆ ಹೀಟ್ ವೇವ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ 30-40 ಕಿ. ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.