newsics.com/ನ್ಯೂಸಿಕ್ಸ್
ದೆಹಲಿ: ನ್ಯಾಯಾಧೀಶರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ದೆಹಲಿಯಲ್ಲಿ ನಡೆದಿದೆ. ವರದಿಗಳ ಪ್ರಕಾರ, ದೆಹಲಿಯ ಸಫ್ದರ್ಜಂಗ್ ಪ್ರದೇಶದಲ್ಲಿ ವಾಸಿಸುತ್ತಿದ್ದ ನ್ಯಾಯಾಧೀಶರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ.ನ್ಯಾಯಾಧೀಶರ ಈ ನಿರ್ಧಾರಕ್ಕೆ ಕಾರಣಗಳು ಇನ್ನೂ ತಿಳಿದುಬಂದಿಲ್ಲ.
https://youtube.com/shorts/xzgXqaAsbcA?si=TkhVxPE1WLxdWyg8
ಮೃತ ನ್ಯಾಯಾಧೀಶರ ಹೆಸರು ಅಮನ್ ಕುಮಾರ್ ಶರ್ಮಾ. ಇವರಿಗೆ 30 ವರ್ಷವಾಗಿತ್ತು. ಅಮನ್ ಕುಮಾರ್ ಶರ್ಮ ಈಶಾನ್ಯ ದೆಹಲಿಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ (DLSA) ಕಾರ್ಯದರ್ಶಿಯಾಗಿ ಕರ್ಕಾರ್ಡೂಮಾ ನ್ಯಾಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಅವರ ನೇಮಕವನ್ನು ಕರ್ಕಾರ್ಡೂಮಾ ಬಾರ್ ಅಸೋಸಿಯೇಷನ್ ಕೂಡ ದೃಢಪಡಿಸಿದೆ. ದೆಹಲಿ ಪೊಲೀಸ್ ಮೂಲಗಳ ಪ್ರಕಾರ ಶನಿವಾರ (ಮೇ 2) ಮಧ್ಯಾಹ್ನ 1.45ರ ಸುಮಾರಿಗೆ ಸಫ್ದರ್ಜಂಗ್ ಎನ್ಕ್ಲೇವ್ ಪೊಲೀಸ್ ಠಾಣೆಗೆ ಕರೆ ಬಂದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.
2018ರಲ್ಲಿ ಮಹಾರಾಷ್ಟ್ರದ ಪುಣೆಯ ಸಿಂಬಿಯೋಸಿಸ್ ಕಾನೂನು ಶಾಲೆಯಿಂದ ಕಾನೂನು ಪದವಿ ಪೂರ್ಣಗೊಳಿಸಿದ ಅಮನ್ ಶರ್ಮ 2021ರ ಜೂನ್ 19ರಂದು ದೆಹಲಿಯಲ್ಲಿ ನ್ಯಾಯಾಂಗ ಸೇವೆಗೆ ಸೇರಿದರು. ಅವರು ತಮ್ಮ ಸೇವಾ ಅವಧಿಯಲ್ಲಿ ಹಲವು ಕ್ರಿಮಿನಲ್ ಮತ್ತು ಸಿವಿಲ್ ವ್ಯಾಜ್ಯಗಳ ವಾದ-ವಿವಾದ ಆಲಿಸಿ ತೀರ್ಪು ನೀಡಿದ್ದಾರೆ. ವಿವಿಧ ನ್ಯಾಯಾಲಯಗಳಲ್ಲಿ ಸೇವೆ ಸಲ್ಲಿಸಿದ ಅವರನ್ನು 2025ರ ಅಕ್ಟೋಬರ್ನಲ್ಲಿ ಕರ್ಕಾರ್ಡೂಮಾ ನ್ಯಾಯಾಲಯದ ಡಿಎಲ್ಎಸ್ಎಯಲ್ಲಿ ಪೂರ್ಣ ಸಮಯದ ಕಾರ್ಯದರ್ಶಿಯಾಗಿ ನೇಮಿಸಲಾಯಿತು.
ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ವಿಧಿವಿಜ್ಞಾನ ತಂಡಗಳು ಸ್ಥಳಕ್ಕೆ ಧಾವಿಸಿದವು. ಪ್ರಾಥಮಿಕ ಮಾಹಿತಿಯ ಪ್ರಕಾರ, ಅಮನ್ ಶರ್ಮಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ದೆಹಲಿ ಪೊಲೀಸರು ಅವರ ಸಾವನ್ನು ದೃಢಪಡಿಸಿ, ಪ್ರಕರಣವನ್ನು ಆತ್ಮಹತ್ಯೆ ಎಂದು ದಾಖಲಿಸಿಕೊಂಡಿದ್ದಾರೆ.
https://www.newsics.com/2026/05/03/explosion-while-defusing-ied-bomb-four-security-personnel-killed/