Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮದ್ಯಕ್ಕೆ ನೀರು ತರಲು ನಿರಾಕರಿಸಿದ್ದಕ್ಕೆ 9 ವರ್ಷದ ಬಾಲಕನಿಗೆ ಗುಂಡಿಕ್ಕಿ ಕೊಲೆ
ದೇಶಪ್ರಮುಖ

ಮದ್ಯಕ್ಕೆ ನೀರು ತರಲು ನಿರಾಕರಿಸಿದ್ದಕ್ಕೆ 9 ವರ್ಷದ ಬಾಲಕನಿಗೆ ಗುಂಡಿಕ್ಕಿ ಕೊಲೆ

Share
1 Min Read
SHARE

newsics.com/ನ್ಯೂಸಿಕ್ಸ್

ಲಕ್ನೋ:  ಕೇವಲ ನೀರು ತರಲು ನಿರಾಕರಿಸಿದ ಎಂಬ ಕ್ಷುಲ್ಲಕ ಕಾರಣಕ್ಕೆ ಒಂಬತ್ತು ವರ್ಷದ ಬಾಲಕನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ.

ಕಾಸ್ಗಂಜ್ ಜಿಲ್ಲೆಯ ಸಹವರ್ ಪೊಲೀಸ್ ಠಾಣೆ ವ್ಯಾಪ್ತಿಯ ಯಾಕುತ್‌ಗಂಜ್ ಗ್ರಾಮದಲ್ಲಿ ಕಳೆದ ಶುಕ್ರವಾರದಂದು ನಾಮಕರಣ ಸಮಾರಂಭವೊಂದನ್ನು ಆಯೋಜಿಸಲಾಗಿತ್ತು. ಸಂಬಂಧಿಕರು ಮತ್ತು ಗ್ರಾಮಸ್ಥರು ಸೇರಿ ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಬಾಲಕನ ತಂದೆಯ ಸಂಬಂಧಿಯಾದ ಧನೇಶ್ ಯಾದವ್ ಎಂಬಾತ ಮದ್ಯ ಸೇವಿಸುತ್ತಾ ಕುಳಿತಿದ್ದ.

 

ಮದ್ಯದ ಅಮಲಿನಲ್ಲಿ ಸಾರಾಯಿ ಕುಡಿಯುತ್ತಿದ್ದ ಧನೇಶ್, ಮದ್ಯಕ್ಕೆ ಬೆರೆಸಲು ನೀರು ತರುವಂತೆ ಅಲ್ಲಿಯೇ ಇದ್ದ ಒಂಬತ್ತು ವರ್ಷದ ಬಾಲಕನಿಗೆ ಹೇಳಿದ್ದಾನೆ. ಆದರೆ ಬಾಲಕ ನೀರು ತರಲು ನಿರಾಕರಿಸಿದಾಗ, ಕೋಪಗೊಂಡ ಧನೇಶ್ ತನ್ನ ಬಳಿಯಿದ್ದ ಬಂದೂಕಿನಿಂದ ಮಗುವಿನ ಹೊಟ್ಟೆಗೆ ಗುಂಡು ಹಾರಿಸಿದ್ದಾನೆ.

ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಬಾಲಕನನ್ನು ತಕ್ಷಣವೇ ಕಾಸ್ಗಂಜ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು.  ಆದರೆ ಚಿಕಿತ್ಸೆಯ ವೇಳೆ ಶನಿವಾರ ಬಾಲಕ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ಆರೋಪಿ ಧನೇಶ್ ಬಂಧಿಸಿದ್ದಾರೆ. ಅಪರಾಧಕ್ಕೆ ಬಳಸಲಾದ ಬಂದೂಕನ್ನು ಪೊಲೀಸರು ವಶಪಡಿಸಿಕೊಂಡಿದ್ದು,  ಸಣ್ಣ ಕಾರಣಕ್ಕಾಗಿ ಮದ್ಯದ ಅಮಲಿನಲ್ಲಿ ನಡೆದ ಈ ಕೊಲೆ ಪ್ರಕರಣವು ಇಡೀ ಗ್ರಾಮವನ್ನೇ ಆಘಾತಕ್ಕೀಡು ಮಾಡಿದೆ.

https://www.newsics.com/2026/05/03/ac-explosion-causes-massive-fire-disaster-9-dead-many-injured/

 

 

 

TAGGED:9-year-old boy shot dead for refusing to bring water for alcohol
Share This Article
Facebook Twitter Copy Link Print
Previous Article ಎಸಿ ಸ್ಫೋಟಗೊಂಡು ಭೀಕರ ಅಗ್ನಿ ದುರಂತ: 9 ಮಂದಿ ಸಾವು, ಹಲವರಿಗೆ ಗಾಯ
Next Article ಮರಳು ತುಂಬಿದ್ದ ಲಾರಿ – ಕಾರಿನ ನಡುವೆ ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?