Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 03-05-2026, ಭಾನುವಾರ
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 03-05-2026, ಭಾನುವಾರ

Share
4 Min Read
SHARE

newsics.com/ನ್ಯೂಸಿಕ್ಸ್ 

ಶುಭೋದಯ

ಇಂದಿನ ಪಂಚಾಂಗ

03-05-2026, ಭಾನುವಾರ

ಪರಾಭವ ನಾಮ ಸಂವತ್ಸರ ಉತ್ತರಾಯಣ ವಸಂತ ಋತು ವೈಶಾಖ ಮಾಸ ಕೃಷ್ಣ ಪಕ್ಷ ದ್ವಿತೀಯಾ.

—

ಶಾಲಿವಾಹನ ಶಕೆ 1949ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಅನುರಾಧಾ, ಯೋಗ : ವರಿಯಾನ್, ಕರಣ : ಗರಜ, ಸೂರ್ಯೋದಯ – 06 – 02 am, ಸೂರ್ಯಾಸ್ತ – 06 – 40 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:05 – 18:40, ಯಮಗಂಡ ಕಾಲ 12:21 – 13:56, ಗುಳಿಕ ಕಾಲ 15:31 – 17:05.

# ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ

# ವಿಶ್ವ ನಗು ದಿನ

========

ಇಂದಿನ ರಾಶಿ ಭವಿಷ್ಯ

ಮೇಷ

ಸೌಂದರ್ಯ ವರ್ಧನೆಗೆ ಸಮಯವನ್ನು ಇಡುವಿರಿ‌. ಸಂಬಂಧಿಕರ ಸಹವಾಸ, ಸಹಾಯಗಳು ಸಿಗಲಿವೆ. ನಿಮ್ಮ ಅಂತಸ್ಸತ್ತ್ವ ಗಟ್ಟಿ ಇರುವುರಿಂದ ಯಾರ ಮಾತಿಗೂ ಕಿವಿಗೊಡದೆ ನೀವು ನಿರ್ಧರಿಸಿದ ಕೆಲಸದಲ್ಲಿ ಮುಂದುವರಿಯುತ್ತೀರಿ. ನೀವು ಮನೋರಂಜನೆಗೆ ಕ್ರೀಡೆಯಲ್ಲಿ ಪಾಲ್ಗೊಳ್ಳುವಿರಿ. ಪ್ರಭಾವೀ ವ್ಯಕ್ತಿಗಳ ಒತ್ತಡಕ್ಕೆ ಕೊನೆಗೂ ಶರಣಾಗಬೇಕಾಗುವುದು. ಆತ್ಮವಿಶ್ವಾಸವನ್ನು ಕಳೆದುಕೊಳ್ಳದೇ ಮುಂದಡಿ ಇಡುವಿರಿ. ಕಳೆದುಕೊಂಡ ವಸ್ತುವನ್ನು ಮರಳಿ ಪಡೆಯಬೇಕಾದ ಸ್ಥಿತಿ ಬರಬಹುದು.

ವೃಷಭ

ಇಂದು ಯಾವುದೇ ಕಾರಣಕ್ಕೆ ಪ್ರಯಾಣವನ್ನು ಅತಿಯಾಗಿ ಮಾಡಬೇಡಿ.‌ ಹಣದ ವಿಚಾರವಾಗಿ ಮನೆಯಲ್ಲಿ ಜಗಳವಾಹಬಹುದು. ಪರರ ಆಕರ್ಷಣೆಯಿಂದ ಮನಸ್ಸು ಅರಳುವುದು. ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹೋಗಬೇಡಿ.‌ ಸಮಯ ವ್ಯರ್ಥವಾಗುತ್ತಿದೆ ಎಂದು ತಿಳಿದಿದ್ದರೂ ಅನ್ಯ ಮಾರ್ಗವಿಲ್ಲದೇ ಇರಬೇಕಾದೀತು. ಮಕ್ಕಳಲ್ಲಿ ಸ್ಪರ್ಧಾಮನೋಭಾವವನ್ನು ಹೆಚ್ಚಿಸುವಿರಿ. ಕುಮಾರ್ಗದಿಂದ ಆದಾಯವನ್ನು ಪಡೆಯುವಿರಿ. ಭೂಮಿಯ ಖರೀದಿಗೆ ಮನಸ್ಸಾಗುವುದು.

ಮಿಥುನ

ನಿಮ್ಮ ವಿವಾಹದ ಮಾತುಕತೆಗಳಿಂದ ಬಹಳ ನೆಮ್ಮದಿ ನೀಡುವುದು. ವಿವಾಹದ ಬಹು ನಿರೀಕ್ಷೆ ಹುಸಿಯಾಗಲಿದೆ. ಅಪರೂಪದ ಸ್ನೇಹಿತನ‌ ಜೊತೆ ಸುತ್ತಾಟ. ವ್ಯರ್ಥವೆನಿಸಿದರೂ ನಿಮಗೆ ಬೇಕಾದ ಅಂಶಗಳು ಅವನಿಂದ ಸಿಗಲಿದೆ. ನಿಮ್ಮ ಗೊಂದಲಗಳಿಗೆ ತೆರೆ ಬೀಳಲಿದೆ. ವೈದ್ಯರಿಗೆ ಇಂದು ಉತ್ತಮದಿನವಾಗಿಲ್ಲ. ನೀವೂ ದೈವಕ್ಕೆ ಶರಣಾಗಲೇ ಬೇಕು. ಸದಾಕಾಲ ಸಂತೋಷದಿಂದ ಇರಲು ನೀವೇ ಏನಾದರೂ ಕ್ರಮವನ್ನು ಅನುಸರಿಸುವಿರಿ.

ಕರ್ಕಾಟಕ

ನಿಮ್ಮ ಮಾತುಗಳನ್ನು ಸರಿಯಾಗಿ ಆಡಿ. ಇಲ್ಲವಾದರೆ ಅನೇಕ ಶುಭಕಾರ್ಯಗಳಿಂದ, ಉತ್ತಮ ಕಾರ್ಯಗಳಿಂದ ವಂಚಿತರಾಗುವಿರಿ. ಮಕ್ಕಳ ವಿಚಾರವಾಗಿ ದಂಪತಿಗಳ ಮಧ್ಯದಲ್ಲಿ ವೈಮನಸ್ಯವು ಉಂಟಾಗಬಹುದು. ಸಹೋದರರಿಗೆ ಆರ್ಥಿಕ ಸಹಾಯ ಮಾಡುವಿರಿ. ನಿಮ್ಮಿಬ್ಬರ ಮಾತಿನ‌ ಚಕಮಕಿಯಲ್ಲಿ ಕೂಸು ಬಡವಾದೀತು. ಮನಸ್ಸಿನ ದುಗುಡವನ್ನು ಶಾಂತಮಾಡಿಕೊಳ್ಳುವಿರಿ. ಕೋಪವನ್ನು ಬಲವಂತವಾಗಿ ತಡೆಯುವಿರಿ. ನಿಮ್ಮ ವಿಚಾರವನ್ನು ನೀವು ಗುಪ್ತವಾಗಿ ತಿಳಿದುಕೊಳ್ಳುವಿರಿ.

ಸಿಂಹ

ಇಂದು ದಿನವಿಡೀ ದೇಹದ ಆಲಸ್ಯ, ಮನಸ್ಸಿನಲ್ಲಿ ಇರುವ ಜಾಡ್ಯದಿಂದ ಯಾವ ಕಾರ್ಯಗಳೂ ಆಗದು. ನಿಮ್ಮ ವೇಗವನ್ನು ನಿಯಂತ್ರಿಸಲು ಅನ್ಯರ ಹಸ್ತಕ್ಷೇಪ ಹೆಚ್ಚಾಗುವುದು. ದಿವಸ ಚಟುವಟಿಕೆಗಳಿಗಿಂತ ಭಿನ್ನವಾದ ಯಾವುದಾದರೂ ಆಸಕ್ತಿಯಿರುವ ಕೆಲಸಗಳ ಬಗ್ಗೆ ಗಮನಹರಿಸಿ. ನಿಮ್ಮನ್ನು ಭಾವನಾತ್ಮಕವಾಗಿ ಕಟ್ಟಿಹಾಕಬಹುದು. ವಿರೋಧಿಗಳ ಮಾತಿನ ಭರದಲ್ಲಿ ನಿಮ್ಮ ಮಾತು ಗೌಣವಾಗಬಹುದು. ನಿಮ್ಮನ್ನು ನಿಂದಿಸುವವರನ್ನು ನೀವು ದೂರವಿರಿಸುವಿರಿ.

ಕನ್ಯಾ

ನಿಮ್ಮ ಯೋಜನೆಗೆ ನಿರೀಕ್ಷೆಗೆ ತಕ್ಕ ಪ್ರತಿಕ್ರಿಯೆ ಸಿಗದು. ಕೂಡಲೇ ವಿರುದ್ಧದ ಆಲೋಚನೆ ಬೇಡ, ಯಥಾಸ್ಥಿತಿ ಇರಲಿ. ನಿಮ್ಮ ಜೀವನದಲ್ಲಿ ಪ್ರಮುಖರು ಯಾರೆಂಬ ಸರಿಯಾದ ಚಿತ್ರಣವು ನಿಮಗೆ ಸಿಗಲಿದೆ. ಪಿತ್ತರೋಗದಿಂದ ಬಳಲುವ ಸಾಧ್ಯತಯಿದೆ. ಮನೆಯಲ್ಲಿಯೇ ಉಂಟಾದ ಜಗಳವನ್ನು ಅಲ್ಲಿಯೇ ಪರಿಹರಿಸಿಕೊಳ್ಳಿ. ವಿದೇಶೀಯ ವ್ಯಾಪಾರವು ಹೆಸರಿಗಷ್ಟೇ ಇರುವುದು. ಹಣಕಾಸಿನ ವಿಚಾರಕ್ಕೆ ಅಪವಾದ ಬರಬಹುದು. ನಿಮ್ಮನ್ನು ಪರೋಕ್ಷವಾಗಿ ಯಾರದರೂ ನಿಂದಿಸಬಹುದು. ಮನಸ್ಸಿನಲ್ಲಿ ಸಾವಧಾನತೆ ಇರದು.

ತುಲಾ 

ಪ್ರೀತಿಯನ್ನು ಮನೆಯವರ ಮೇಲೂ ತೋರಿಸಬಹುದು. ಕೇವಲ ಅನ್ಯಲಿಂಗಿಯರ ಮೇಲೆ ಮಾತ್ರವಲ್ಲ. ನಿಮ್ಮಿಂದ ನಿಮ್ಮ ತಂದೆ, ತಾಯಿಯರು ಸಂಕಟಪಡಬಹುದು. ವಿವಾಹಯೋಗವು ನಿಮಗಿದೆ. ಯಾವುದಾದರೂ ಉಪಯೋಗಕ್ಕೆ ಬರುವ ಕೆಲಸಕ್ಕೆ ಕೈ ಹಾಕಿ.‌‌ ರಾಜಕೀಯದಲ್ಲಿ ವಿವಾದಾಸ್ಪದ ಮಾತುಗಳನ್ನಾಡಿ ಎಲ್ಲರ ಕೆಂಗಣ್ಣಿಗೆ ಸಿಲುಕುವಿರಿ. ಮುಖಂಡರ ಜತೆ ಗುರುತಿಸಿಕೊಳ್ಳಲು ಇಷ್ಟಪಡುವಿರಿ. ಅಮೂಲ್ಯವಾದ ವಸ್ತುಗಳನ್ನು ಪಡೆದುಕೊಳ್ಳುವಿರಿ.

ವೃಶ್ಚಿಕ

ಸಣ್ಣ ಆದಾಯದಿಂದ ಆರ್ಥಿಕವಾಗಿ ಇಂದು ಸಬಲರಾಗುವಿರಿ.‌ ಪ್ರೀತಿಪಾತ್ರರಾದವರ ಭೇಟಿಯು ಸಂತೋಷವನ್ನು ಹೆಚ್ಚಿಸೀತು. ಹಿರಿಯರ ಮಾತುಗಳು ನಿಮ್ಮ ಮನಸ್ಸಿಗೆ ನಾಟಿ ಇಲ್ಲಿಯವರೆಗಿನ ಕಾರ್ಯಕ್ಕೆ ಪಾಶ್ಚಾತ್ತಾಪವನ್ನು ಅನುಭವಿಸುವಿರಿ. ಮಕ್ಕಳ‌ ಜತೆ ಅನ್ಯೋನ್ಯ ಸಂಬಂಧವು ಕಾಣಿಸಿಕೊಂಡೀತು. ನಿಮ್ಮ ಕಷ್ಟವನ್ನು ಕುಟುಂಬಕ್ಕೆ ದಾಟಿಸಲಾರಿರಿ. ನೀವು ಹೇಳಿದ ಕೆಲಸವೂ ವೇಗವಾಗಿ ಮುಗಿಯದು. ಸ್ನೇಹಿತರಿಗೆ ಬೇಸರವಾಗಬಾರದೆಂದು ಅವರ ಜೊತೆ ಸಮಸ್ಯೆ ಕಳೆಯುವಿರಿ.

ಧನುಸ್ಸು

ನಿಮ್ಮನ್ನು ಕಂಡು ಅಸೂಯೆ ಪಡುವ ಜನರಿರುತ್ತಾರೆ ನಿಮ್ಮ ಸುತ್ತ. ನಿಮ್ಮ ಚಿಂತನೆಯ ಜಗತ್ತು ಎಲ್ಲದಕ್ಕಿಂತ ಭಿನ್ನವಾಗಿರಲಿದೆ. ಅವರನ್ನು ನಗಣ್ಯ ಮಾಡಬೇಡಿ. ನಿಮ್ಮ ಮೇಲೆ ಸಲ್ಲದ ಪಿತೂರಿಗಳನ್ನು ಮಾಡಿಯಾರು.‌ಅವರ ಮೇಲೆ ಒಂದು ಕಣ್ಣಿರಲಿ. ಸ್ನೇಹಿತರ ಜೊತೆ ಮನಸ್ಸು ಬಿಚ್ಚಿ ಮಾತನಾಡಿ. ಶುಭಸಮಾಚಾರ ನಿಮಗೆ ಗೊತ್ತಾಗಲಿದೆ. ಹಿತಶತ್ರುಗಳ ಬಗ್ಗೆ ನಿಮ್ಮ ಊಹೆಯು ಸುಳ್ಳಾಗಬಹುದು. ಆರೋಗ್ಯವು ಬಡವಾದಂತೆ ತೋರುವುದು.

ಮಕರ

ಮಾತಿನಿಂದ ಮಾತ್ರ ಎಲ್ಲವೂ ಸರಿಯಾಗುವುದು ಎನ್ನುವ ಭ್ರಮೆಯಿಂದ ಹೊರಬನ್ನಿ. ಹಣವೊಂದು ನೆಮ್ಮದಿಗೆ ಕಾರಣವಾಗದು. ಒಳ್ಳೆಯ ಸ್ವಭಾವವೇ ಮುಖ್ಯವಾಗಿ ಇರುವುದು. ಭವಿಷ್ಯದ ಯೋಚನೆಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ನಿಮ್ಮ ವ್ಯವಹಾರವನ್ನು ಯಾರೋ ನಿಯಂತ್ರಿಸಿದಂತೆ ಅನ್ನಿಸುವುದು. ಜಾಣ್ಮೆಯನ್ನು ಪ್ರದರ್ಶಿಸಲು ಹೋಗಿ ಮುಗ್ಗರಿಸುವಿರಿ. ನಿಮ್ಮ ಗುಟ್ಟನ್ನು ಬಿಟ್ಟಕೊಡುವುದು ಬೇಡ. ಮಕ್ಕಳಲ್ಲಿ ಪ್ರೀತಿ ಅಧಿಕವಾಗುವುದು.

ಕುಂಭ

ಯಾರೊಂದಿಗೂ ಸಂಪೂರ್ಣ ನಿಜವನ್ನು ಹೇಳಿಬಿಡಬೇಡಿ. ಅಪರೂಪದ ವ್ಯಕ್ತಿಗಳ ಭೇಟಿಯಾಗುವ ಸಾಧ್ಯತೆ ಇದೆ. ನೀವೇ ಆರಂಭಿಸಿದ ಕಾರ್ಯದ ಯಶಸ್ಸನ್ನು ಪರರಿಗೆ ಕೊಡಬೇಕಾಗುವುದು. ಜಯವೃತ್ತಿಗೆ ಸಂಬಂಧಿಸಿದಂತೆ ಶುಭದಿನವಾಗಿದೆ. ಸಾಮಾಜಿಕವಾದ ಸ್ಥಾನಮಾನ ಹೆಚತಚಾಗುವುದು. ಮಕ್ಕಳ ವಿದ್ಯಾಭ್ಯಾಸದ ಚಿಂತೆ ಇರಲಿದೆ. ಕೆಲವು ಗೊಂದಲವು ಪರಿಹಾರವಾಗದೇ ಹಾಗೆಯೇ ಇರುವುದು.

ಮೀನ

ಆಲೋಚಿಸದೇ ಯಾವುದೇ ಸಾಹಸದ ಕಾರ್ಯವನ್ನು, ಕೆಲಸವನ್ನು ಮಾಡಬೇಡಿ. ಬಯಸದೇ ಬಂದಿದ್ದನ್ನು ಉಳಿಸಿಕೊಳ್ಳುವುದು ಕಷ್ಟ. ಅನಾರೋಗ್ಯವು ನಿಮ್ಮನ್ನು ಕಾಡಲಿದೆ. ಪಿತ್ರಾರ್ಜಿತ ಭೂಮಿಯ ವ್ಯವಹಾರದಲ್ಲಿ ದ್ವೇಷ ಸಾಧಿಸಿ ಪ್ರಯೋಜನವಾಗದು. ನಿಮ್ಮನ್ನು ನೌಕರರು ಹೋಗಳುವರು. ಎದರುರಾಗು ಅಡ್ಡಿ, ಆತಂಕಗಳನ್ನು ನೀವು ಅನಾಯಾಸವಾಗಿ ದೂರ ಸರಿಸುವಿರಿ. ಸಹನೆಯ ಪರೀಕ್ಷೆಯಲ್ಲಿ ನೀವು ಗೆಲ್ಲುವಿರಿ.

 

TAGGED:GOOD MORNING | Today's Horoscope 03-05-2026Sunday
Share This Article
Facebook Twitter Copy Link Print
Previous Article Actress ಐದು ವರ್ಷಗಳ ವೈವಾಹಿಕ ಜೀವನಕ್ಕೆ ವಿದಾಯ ಹೇಳಿದ ಬಾಲಿವುಡ್ ನಟಿ
Next Article Viral ಮದುವೆ ಮಂಟಪದಲ್ಲಿ ವರನಿಗೆ ಹಾರ ಹಾಕುವ ಬದಲು ಪ್ರಿಯತಮನಿಗೆ ಹಾರ ಹಾಕಿದ ವಧು : ವೈರಲ್ ವಿಡಿಯೋ ನೋಡಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?