newsics.com/ನ್ಯೂಸಿಕ್ಸ್
ಹಾಸನ: ಲೈಂಗಿಕ ಕ್ರಿಯೆಗೆ ನಿರಾಕರಿಸಿದ್ದಕ್ಕೆ ಮಹಿಳೆಯೊಬ್ಬಳ ಮೇಲೆ ತೀವ್ರ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಅತ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಮ್ಯಾ.ಎ.ಆರ್ (35) ಕೊಲೆಯಾದ ಮಹಿಳೆಯಾಗಿದ್ದು, ಅದೇ ಗ್ರಾಮದ ಚಂದ್ರ (41) ಹತ್ಯೆಗೈದ ಆರೋಪಿ ಎಂದು ತಿಳಿದುಬಂದಿದೆ.
ವಿಧವೆಯಾಗಿದ್ದ ರಮ್ಯಾ ಬೆಂಗಳೂರಿನಲ್ಲಿ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದು, ಆರೋಪಿ ಚಂದ್ರನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು.
ಏ.28ರಂದು ಅತ್ತೆಯ ಅಂತ್ಯಸಂಸ್ಕಾರಕ್ಕೆಂದು ಸ್ವಗ್ರಾಮ ಅತ್ತಿಹಳ್ಳಿಗೆ ಬಂದಿದ್ದಾಗ, ರಾತ್ರಿ ಮನೆಗೆ ಬಂದ ಚಂದ್ರ ಲೈಂ*ಗಿಕ ಕ್ರಿಯೆಗೆ ಒತ್ತಾಯಿಸಿದ್ದಾನೆ. ಇದಕ್ಕೆ ರಮ್ಯಾ ನಿರಾಕರಿಸಿದ್ದರಿಂದ ಸಿಟ್ಟಿಗೆದ್ದ ಆರೋಪಿ, ಆಕೆಯ ಮೇಲೆ ಮನಬಂದಂತೆ ಹ*ಲ್ಲೆ ನಡೆಸಿ ಮರ್ಮಾಂಗಕ್ಕೆ ಒದ್ದಿದ್ದಾನೆ.
ಏ.30ರಂದು ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ರಮ್ಯಾ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
Toxic Movie ಟಾಕ್ಸಿಕ್ನ ಹಾಟ್ ದೃಶ್ಯಕ್ಕೆ ಕತ್ತರಿ ಬೀಳತ್ತಾ? ನಟಿ ಕಿಯಾರಾ ಅಡ್ವಾಣಿ ಮನವಿ ಮಾಡಿದ್ದೇನು?
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ: ಹನಿಯೂರು ಚಂದ್ರೇಗೌಡನ ಅಸಲಿ ಮುಖ ತನಿಖೆಯಲ್ಲಿ ಬಯಲು