Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಚಿತ್ರರಂಗಕ್ಕೆ ನಟ ವಿಜಯ್ ಗುಡ್​​ಬೈ?
ಪ್ರಮುಖಮನರಂಜನೆ

ಚಿತ್ರರಂಗಕ್ಕೆ ನಟ ವಿಜಯ್ ಗುಡ್​​ಬೈ?

Share
1 Min Read
SHARE

newsics.com/ನ್ಯೂಸಿಕ್ಸ್

ನಟ ದಳಪತಿ ವಿಜಯ್ ಅವರು ಎಕ್ಸಿಟ್ ಪೋಲ್ ಲೆಕ್ಕಾಚಾರವನ್ನು ಸಂಪೂರ್ಣವಾಗಿ ಉಲ್ಟಾ ಮಾಡಿದ್ದಾರೆ ಎನ್ನಲಾಗುತ್ತಿದೆ.

ಹೌದು, ದಳಪತಿ ವಿಜಯ್ ಅವರ ಹಾದಿ ಇತರರಿಗಿಂತ ಭಿನ್ನ ಮತ್ತು ಸವಾಲುಗಳಿಂದ ಕೂಡಿತ್ತು. ಇಂದು ಅವರು ಮುಖ್ಯಮಂತ್ರಿ ಗದ್ದುಗೆಯ ಸನಿಹದಲ್ಲಿ ನಿಂತಿದ್ದಾರೆ. ಅವರ ರಾಜಕೀಯ ಯಶಸ್ಸಿನಿಂದ ಚಿತ್ರರಂಗಕ್ಕೆ ಗುಡ್​​ಬೈ ಹೇಳೋದು ಬಹುತೇಕ ಖಚಿತ ಎಂಬಂತಾಗಿದೆ.

ವಿಜಯ್ ಅವರ ಸಿನಿಮಾಗಳು ಕಳೆದ ದಶಕದಿಂದ ಕೇವಲ ಮನರಂಜನೆಗೆ ಸೀಮಿತವಾಗಿಲ್ಲ. ಅವರ ಚಿತ್ರಗಳಲ್ಲಿನ ರಾಜಕೀಯ ವಿಡಂಬನೆ ಮತ್ತು ಸಮಾಜದ ಅಂಕುಡೊಂಕುಗಳ ಬಗೆಗಿನ ಧ್ವನಿ ಆಡಳಿತಾರೂಢ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು. ವಿಶೇಷವಾಗಿ ‘ಜನ ನಾಯಗನ್’ ಸೆನ್ಸಾರ್ ಮಂಡಳಿಯ ಅಡೆತಡೆಗಳನ್ನು ಎದುರಿಸಬೇಕಾಯಿತು. ಚಿತ್ರಕ್ಕೆ ಅನುಮತಿ ನೀಡಲು ವಿಳಂಬ ಮಾಡುವುದು, ವಿವಾದ ಸೃಷ್ಟಿಸುವುದು ವಿಜಯ್ ಅವರನ್ನು ರಾಜಕೀಯವಾಗಿ ಹತ್ತಿಕ್ಕುವ ಪ್ರಯತ್ನದಂತೆ ಕಂಡಿತ್ತು.

ಈ ಅಡೆತಡೆಗಳೇ ವಿಜಯ್ ಅವರಿಗೆ ಮೈಲೇಜ್ ನೀಡಿತು. ಅವರು ‘ಸಂತ್ರಸ್ತ’ನ ರೀತಿ ಕಾಣಿಸಿದರು. ಇದು ಅವರ ಅಭಿಮಾನಿಗಳಲ್ಲಿ ರಾಜಕೀಯ ಆಕ್ರೋಶದ ಕಿಚ್ಚು ಹಚ್ಚಿದವು. ಇಂದು ಅವರು ರಾಜಕೀಯ ಮುನ್ನಡೆ ಸಾಧಿಸುತ್ತಿದ್ದಂತೆ, ‘ಜನ ನಾಯಗನ್’ ನಿರ್ಮಾಪಕರಲ್ಲಿ ಮಂದಹಾಸ ಮೂಡಿದೆ. ಒಂದೊಮ್ಮೆ ಅವರು ಸಿಎಂ ಆದಲ್ಲಿ, ‘ಜನ ನಾಯಗನ್’ ಚಿತ್ರಕ್ಕೆ ಬೃಹತ್ ಮೈಲೇಜ್ ಸಿಗುವುದು ಪಕ್ಕಾ ಆಗಿದೆ. ಲೀಕ್ ಆದ ಹೊರತಾಗಿಯೂ ‘ಜನ ನಾಯಗನ್’ ಗೆಲ್ಲೋದು ಪಕ್ಕಾ ಆಗಿದೆ.

ವಿಜಯ್ ಅವರ ಈ ಯಶಸ್ಸಿನ ನಡುವೆ ಅಭಿಮಾನಿಗಳಿಗೆ ಕಾಡುತ್ತಿರುವ ಒಂದು ದೊಡ್ಡ ಆತಂಕವೆಂದರೆ ಚಿತ್ರರಂಗಕ್ಕೆ ಅವರು ಹೇಳಲಿರುವ ‘ಗುಡ್ ಬೈ’. ವಿಜಯ್ ಸಿಎಂ ಆಗಿದ್ದೇ ಹೌದಾದಲ್ಲಿ ಸಂಪೂರ್ಣವಾಗಿ ಅವರು ರಾಜಕೀಯದಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ರೀತಿ ಸಿನಿಮಾದಿಂದ ದೂರ ಸರಿಯುವುದು ಕೇವಲ ವೈಯಕ್ತಿಕ ನಿರ್ಧಾರವಲ್ಲ, ಅದು ಜನರ ಮೇಲಿರುವ ಜವಾಬ್ದಾರಿಯ ಸಂಕೇತ ಎಂದು ಅವರು ಭಾವಿಸುತ್ತಾರೆ.
ನಟನೆಯಲ್ಲಿ ಉತ್ತುಂಗದಲ್ಲಿರುವಾಗ ವಿಜಯ್ ಚಿತ್ರರಂಗ ಬಿಡುವುದು ಕಾಲಿವುಡ್‌ಗೆ ದೊಡ್ಡ ನಷ್ಟವಾದರೂ, ತಮಿಳುನಾಡು ರಾಜಕೀಯಕ್ಕೆ ಓರ್ವ ಹೊಸ ಭರವಸೆಯ ನಾಯಕ ಸಿಕ್ಕಂತಾಗಿದೆ. ಅವರ ಕೊನೆಯ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಸಾರ್ವಕಾಲಿಕ ದಾಖಲೆ ಬರೆಯುವ ಎಲ್ಲಾ ಲಕ್ಷಣ ಗೋಚರವಾಗಿದೆ.

Metro station closed ವಿದ್ಯುತ್ ವ್ಯತ್ಯಯ: ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣ ತಾತ್ಕಾಲಿಕ ಸ್ಥಗಿತ, ಇಲ್ಲೀಗ ರೈಲು ನಿಲ್ಲಲ್ಲ

TAGGED:Actor Vijay's goodbye to the film industry?
Share This Article
Facebook Twitter Copy Link Print
Previous Article Vijay ತಮಿಳುನಾಡಿನ ಬೀದಿಬೀದಿಗಳಲ್ಲಿ ದಳಪತಿ ವಿಜಯ್ ಪಂಚ್ ಡೈಲಾಗ್‌ಗಳ ಅಬ್ಬರ
Next Article Kerala Results ಕೇರಳದಲ್ಲಿ ಯುಡಿಎಫ್​ ಶತಕದತ್ತ ಓಟ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?