newsics.com/ನ್ಯೂಸಿಕ್ಸ್
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಅವರು ಸಲ್ಲಿಸಿರುವ ಹೊಸ ಜಾಮೀನು ಅರ್ಜಿಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.
https://youtube.com/shorts/1MGAmJmhYq0?si=nMc-nPA4I0KAHwKo
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ತೂಗುದೀಪ ಅವರಿಗೆ ಜಾಮೀನು ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಹೊಸದಾಗಿ ಅರ್ಜಿ ಸಲ್ಲಿಸಲಾಗಿದೆ.
ಈ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಪ್ರಕರಣದ ಸ್ಥಿತಿಗತಿ ಹಾಗೂ ವಿಚಾರಣೆಯ ಪ್ರಗತಿಯ ಕುರಿತು ವರದಿ ಸಲ್ಲಿಸುವಂತೆ ಸೂಚಿಸಿದೆ.ಈ ಹಿಂದೆ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದ ಬಳಿಕ, ನಟ ದರ್ಶನ್ ಅವರು ಸುಪ್ರೀಂ ಕೋರ್ಟ್‌ಗೆ ಮತ್ತೊಮ್ಮೆ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.ಪ್ರಕರಣದಲ್ಲಿ ಒಟ್ಟು 273 ಸಾಕ್ಷಿಗಳಿದ್ದು, ಈವರೆಗೆ ಕೇವಲ 15 ಸಾಕ್ಷಿಗಳ ವಿಚಾರಣೆ ಮಾತ್ರ ಪೂರ್ಣಗೊಂಡಿದೆ. ವಿಚಾರಣೆ ಮುಗಿಯಲು ಇನ್ನೂ ಹಲವು ವರ್ಷಗಳು ತೆಗೆದುಕೊಳ್ಳಬಹುದು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.