newsics.com/ನ್ಯೂಸಿಕ್ಸ್
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಪಕ್ಷವು ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೇವಲ 59 ಸ್ಥಾನಗಳಿಗೆ ಸೀಮಿತವಾದ ಡಿಎಂಕೆ ಅಧಿಕಾರ ಕಳೆದುಕೊಂಡಿದ್ದು, ಸ್ಟಾಲಿನ್ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ.
ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ತಮಿಳುನಾಡು ರಾಜಕೀಯದಲ್ಲಿ ಸಮೀಕರಣಗಳು ವೇಗವಾಗಿ ಬದಲಾಗುತ್ತಿವೆ. ಸರ್ಕಾರ ರಚನೆಯ ಪ್ರಯತ್ನದಲ್ಲಿ ಟಿವಿಕೆ ಪಕ್ಷವು ಇತರ ಪಕ್ಷಗಳೊಂದಿಗೆ ಮಹತ್ವದ ಮಾತುಕತೆ ನಡೆಸುತ್ತಿದೆ.
ಸೋಲಿನ ಬಗ್ಗೆ ಪ್ರತಿಕ್ರಿಯಿಸಿರುವ ಸ್ಟಾಲಿನ್, ಜನರ ತೀರ್ಪನ್ನು ನಾನು ಶಿರಸಾವಹಿಸಿ ಒಪ್ಪಿಕೊಳ್ಳುತ್ತೇನೆ. ಇನ್ನು ಮುಂದೆ ಡಿಎಂಕೆ ಪಕ್ಷವು ಪ್ರಬಲ ಪ್ರತಿಪಕ್ಷವಾಗಿ ತನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲಿದೆ ಎಂದು ತಿಳಿಸಿದ್ದಾರೆ.
https://www.newsics.com/2026/05/05/new-cm-to-be-sworn-in-in-west-bengal-on-may-9/