newsics.com/ನ್ಯೂಸಿಕ್ಸ್
ಪಶ್ಚಿಮಬಂಗಾಳ : ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಒಂದು ಅಭೂತಪೂರ್ವ ಮತ್ತು ಐತಿಹಾಸಿಕ ಬದಲಾವಣೆ ಘಟಿಸಿದೆ.
https://youtube.com/shorts/iatQVbaFb3g?si=I11csgvje-MFvvAP
ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಭರ್ಜರಿ ಬಹುಮತ ಗಳಿಸುವ ಮೂಲಕ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಆಡಳಿತಕ್ಕೆ ಮುಕ್ತಿ ಹಾಡಿದೆ. ಈ ಮಹತ್ವದ ಗೆಲುವಿನ ಬೆನ್ನಲ್ಲೇ ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ ಮತ್ತು ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕ ಹಾಗೂ ಸಮಯ ಅಧಿಕೃತವಾಗಿ ಪ್ರಕಟಗೊಂಡಿದೆ.
ಮುಂಬರುವ ಮೇ 9 ರಂದು ಕೋಲ್ಕತ್ತಾದಲ್ಲಿ ಪಶ್ಚಿಮ ಬಂಗಾಳದ ಹೊಸ ಮುಖ್ಯಮಂತ್ರಿ ಅಧಿಕಾರ ಸೂತ್ರ ಹಿಡಿಯಲಿದ್ದಾರೆ. ಈ ದಿನವು ಬಂಗಾಳದ ಸಾಂಸ್ಕೃತಿಕ ಇತಿಹಾಸದಲ್ಲಿ ಅತ್ಯಂತ ಪ್ರಮುಖ ದಿನವಾಗಿದ್ದು ವಿಶ್ವಕವಿ ರವೀಂದ್ರನಾಥ ಟ್ಯಾಗೋರ್ ಅವರ ಜನ್ಮದಿನವಾದ ರವೀಂದ್ರ ಜಯಂತಿಯಂದೇ ಈ ಐತಿಹಾಸಿಕ ಕಾರ್ಯಕ್ರಮ ನಡೆಯುತ್ತಿರುವುದು ವಿಶೇಷ ರಾಜಕೀಯ ಮತ್ತು ಸಾಂಸ್ಕೃತಿಕ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಬಂಗಾಳ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಅವರು ಈ ನಿರ್ಧಾರವನ್ನು ಮಾಧ್ಯಮಗಳಿಗೆ ಅಧಿಕೃತವಾಗಿ ಖಚಿತಪಡಿಸಿದ್ದಾರೆ.