Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Kerala cm resigned ಪಿಣರಾಯಿ‌ ವಿಜಯನ್‌ಗೆ ಭಾರೀ‌ ಮುಖಭಂಗ: ಸಿಎಂ ಸ್ಥಾನಕ್ಕೆ ದಿಢೀರ್ ರಾಜೀನಾಮೆ!
ದೇಶಪ್ರಮುಖ

Kerala cm resigned ಪಿಣರಾಯಿ‌ ವಿಜಯನ್‌ಗೆ ಭಾರೀ‌ ಮುಖಭಂಗ: ಸಿಎಂ ಸ್ಥಾನಕ್ಕೆ ದಿಢೀರ್ ರಾಜೀನಾಮೆ!

Share
2 Min Read
SHARE

newsics.com/ನ್ಯೂಸಿಕ್ಸ್

ತಿರುವನಂತಪುರಂ: ಕೇರಳ ವಿಧಾನಸಭೆ ಚುನಾವಣೆಯಲ್ಲಿ ಸಿಪಿಎಂ ಲೆಕ್ಕಾಚಾರ ಉಲ್ಟಾ ಆಗಿದೆ. ಹ್ಯಾಟ್ರಿಕ್ ಗೆಲುವಿನ ಕನಸಿನಲ್ಲಿದ್ದ ಪಿಣರಾಯಿ ವಿಜಯನ್ ನೇತೃತ್ವದ ಸಿಪಿಐ(ಎಂ) ಹೀನಾಯ ಸೋಲು ಕಂಡಿದೆ. ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಮುಖಭಂಗ ಅನುಭವಿಸಿದ ಬೆನ್ನಲ್ಲೇ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ.

ಕಣ್ಣೂರಿನ ತಮ್ಮ ನಿವಾಸದಲ್ಲಿರುವ ಅವರು, ರಾಜಧಾನಿ ತಿರುವನಂತಪುರಂಗೆ ಬಾರದೆ ವಿಶೇಷ ದೂತರ ಮೂಲಕ ರಾಜೀನಾಮೆ ಪತ್ರವನ್ನು ರಾಜಭವನಕ್ಕೆ ರವಾನಿಸಿದ್ದಾರೆ. ಮುಖ್ಯಮಂತ್ರಿಗಳ ರಾಜೀನಾಮೆಯನ್ನು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅಂಗೀಕರಿಸಿದ್ದಾರೆ. ಅಲ್ಲದೆ, ಹೊಸ ಸರ್ಕಾರ ಅಧಿಕಾರ ವಹಿಸಿಕೊಳ್ಳುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯುವಂತೆ ಪಿಣರಾಯಿ ವಿಜಯನ್ ಅವರಿಗೆ ಸೂಚಿಸಿದ್ದಾರೆ.

ಮನೆಯಿಂದ ಹೊರಬಂದಿಲ್ಲ ಪಿಣರಾಯಿ ವಿಜಯನ್

ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಪಿಣರಾಯಿ ವಿಜಯನ್ ಮನೆಯಿಂದ ಹೊರಬಂದಿಲ್ಲ ಮತ್ತು ಮಾಧ್ಯಮಗಳನ್ನೂ ಭೇಟಿಯಾಗಿಲ್ಲ. ಅವರು ನಾಳೆ ರಾಜೀನಾಮೆ ನೀಡಬಹುದು ಎಂಬ ಮಾತುಗಳು ಕೇಳಿಬಂದಿತ್ತು. ಇತ್ತ ಪಕ್ಷದ ಕೆಲ ಮೂಲಗಳು ಇದೇ ಮಾತನ್ನು ಹೇಳಿತ್ತು. ಆದರೆ, ಎಲ್ಲರ ನಿರೀಕ್ಷೆಗೂ ಮುನ್ನವೇ ಪಿಣರಾಯಿ ತಮ್ಮ ಸಿಎಂ ಹುದ್ದೆ ತೊರೆದಿದ್ದಾರೆ.

ಪಿಣರಾಯಿ ಸರ್ಕಾರಕ್ಕ ಭಾರೀ ಆಘಾತ

ಮೂರನೇ ಬಾರಿಗೆ ಅಧಿಕಾರಕ್ಕೇರುವ ಕನಸಿನಲ್ಲಿದ್ದ ಪಿಣರಾಯಿ ಸರ್ಕಾರಕ್ಕೆ ಈ ಚುನಾವಣೆಯಲ್ಲಿ ದೊಡ್ಡ ಆಘಾತ ಎದುರಾಗಿದೆ. 10 ವರ್ಷಗಳ ನಂತರ ಯುಡಿಎಫ್ 102 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೇರಿದರೆ, ಎಲ್‌ಡಿಎಫ್ ಕೇವಲ 35 ಸ್ಥಾನಗಳಿಗೆ ಕುಸಿದಿದೆ. ಸ್ವತಃ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಮ್ಮ ಧರ್ಮಡಂ ಕ್ಷೇತ್ರದಲ್ಲಿ ಪ್ರಯಾಸದ ಗೆಲುವು ಸಾಧಿಸಿದರೆ, ಸ್ಪರ್ಧಿಸಿದ್ದ 20 ಸಚಿವರಲ್ಲಿ 13 ಮಂದಿ ಸೋಲು ಕಂಡಿದ್ದಾರೆ.

ಎಲ್‌ಡಿಎಫ್‌ನ ಭದ್ರಕೋಟೆಗಳೆನಿಸಿದ್ದ ಹಲವು ಕ್ಷೇತ್ರಗಳು ಈ ಬಾರಿ ಕೈತಪ್ಪಿವೆ. ಹತ್ತು ವರ್ಷಗಳ ಆಡಳಿತದ ಶಕ್ತಿ, ಸಚಿವರು ಮತ್ತು ಶಾಸಕರೆಲ್ಲರೂ ಇದ್ದರೂ ಗೆಲ್ಲಲು ಇನ್ನೇನು ಬೇಕು ಎಂಬ ಆತ್ಮವಿಶ್ವಾಸಕ್ಕೆ ಜನರು ತಣ್ಣೀರೆರಚಿದ್ದಾರೆ. ಕಾಲು ಶತಮಾನದಿಂದ ಶಾಸಕರಾಗಿದ್ದ ಕೆ.ಬಿ. ಗಣೇಶ್ ಕುಮಾರ್ ಪತ್ತನಾಪುರಂನಲ್ಲಿ ಜ್ಯೋತಿ ಕುಮಾರ್ ಚಾಮಕ್ಕಾಲ ಎದುರು ಸೋತಿದ್ದಾರೆ. ವೀಣಾ ಜಾರ್ಜ್ ಒಂದೇ ಒಂದು ಸುತ್ತಿನಲ್ಲೂ ಮುನ್ನಡೆ ಸಾಧಿಸಲಿಲ್ಲ. ಅಲ್ಲಿ ಅಬಿನ್ ವರ್ಕಿ ಭರ್ಜರಿ ಜಯ ಸಾಧಿಸಿದರು. ಧರ್ಮಡಂನಲ್ಲಿ ಸೋಲಿನಂಚಿಗೆ ತಲುಪಿದ್ದ ಪಿಣರಾಯಿ ವಿಜಯನ್, ಕೊನೆಗೆ ಹೇಗೋ ಗೆದ್ದು ಬಂದರು.

Vijay Net Worth: ಅತ್ತ ರಾಜಕೀಯದಲ್ಲಿ ಅಧಿಕಾರಕ್ಕೆ ಹತ್ತಿರವಾಗ್ತಿರೋ ವಿಜಯ್ ಒಟ್ಟು ಆಸ್ತಿ ಎಷ್ಟು?

 

ಪಶ್ಚಿಮ ಬಂಗಾಳದಲ್ಲಿ ಕೇಸರಿ ಸುನಾಮಿ : ಮಕಡೆ ಮಲಗಿದ ದೀದಿ : ಗೆಲುವಿಗೆ ಟೊಂಕ ಕಟ್ಟಿ ನಿಂತ ಮೋದಿ-ಅಮಿತ್ ಶಾ ಜೋಡಿ

ದಳಪತಿ ವಿಜಯ್ ಓದಿದ್ದೆಷ್ಟು? ಅವರ ಬಗೆಗಿನ ಆಸಕ್ತಿದಾಯಕ ಸಂಗತಿ

TAGGED:Pinarayi Vijayan suffers major embarrassment: sudden resignation from CM post
Share This Article
Facebook Twitter Copy Link Print
Previous Article PM Modi Speech ಪಶ್ಚಿಮ ಬಂಗಾಳದ ಗೆಲುವು ಐತಿಹಾಸಿಕ ಗೆಲುವು ಎಂದು ಬಣ್ಣಿಸಿದ ಪ್ರಧಾನಿ ಮೋದಿ
Next Article Deedi defeat ಭದ್ರಕೋಟೆಯಾಗಿದ್ದ ಭವಾನಿಪುರದಲ್ಲೇ ದೀದಿಗೆ ಹೀನಾಯ ಸೋಲು

Popular Posts

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

You Might Also Like

ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?