newsics.com/ನ್ಯೂಸಿಕ್ಸ್
ಚಂಡೀಗಢ: ಹೈದರಾಬಾದ್‌ನಿಂದ ಚಂಡೀಗಢಕ್ಕೆ ಆಗಮಿಸಿದ ಇಂಡಿಗೋ ವಿಮಾನವೊಂದರಲ್ಲಿ ಪ್ರಯಾಣಿಕರೊಬ್ಬರ ಎಲೆಕ್ಟ್ರಾನಿಕ್ ಸಾಧನದಲ್ಲಿ (ಪವರ್ ಬ್ಯಾಂಕ್) ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
https://youtube.com/shorts/iatQVbaFb3g?si=I11csgvje-MFvvAP
ವಿಮಾನವು ಚಂಡೀಗಢ ರನ್‌ವೇನಲ್ಲಿ ಇಳಿದು ನಿಂತಿದ್ದ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಪ್ರಯಾಣಿಕರೊಬ್ಬರ ಕೈಚೀಲದಲ್ಲಿದ್ದ ಪವರ್ ಬ್ಯಾಂಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದೇ ಈ ಅವಾಂತರಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಿಮಾನ ಸಿಬ್ಬಂದಿ ಕೂಡಲೇ ತುರ್ತು ನಿರ್ಗಮನ ಪ್ರಕ್ರಿಯೆಯನ್ನು ಕೈಗೊಂಡರು. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಕ್ಕೆ ಇಳಿಸಲಾಗಿದ್ದು, ಯಾವುದೇ ಪ್ರಾಣಾಪಾಯ ಅಥವಾ ಗಾಯಗಳಾದ ವರದಿಯಾಗಿಲ್ಲ.