newsics.com/ನ್ಯೂಸಿಕ್ಸ್
ಚೆನ್ನೈ:ತಮಿಳುನಾಡು ರಾಜಕೀಯದಲ್ಲಿ ಮಹತ್ತರ ಬೆಳವಣಿಗೆಯಾಗಿದ್ದು, ಸರ್ಕಾರ ರಚನೆಯ ಪ್ರಕ್ರಿಯೆಯ ಭಾಗವಾಗಿ ತಮಿಳಗ ವೆಟ್ರಿ ಕಳಗಂ ಪಕ್ಷವು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿ ಮಾಡಲು ಕಾಲಾವಕಾಶ ಕೋರಿದೆ.
https://youtube.com/shorts/iatQVbaFb3g?si=I11csgvje-MFvvAP
ಕೆಲ ವರದಿಗಳ ಪ್ರಕಾರ, ಮೇ 7ರಂದು ಚೆನ್ನೈನ ಪ್ರತಿಷ್ಠಿತ ಜವಹರಲಾಲ್ ನೆಹರು ಸ್ಟೇಡಿಯಂನಲ್ಲಿ ವಿಜಯ್ ಅವರ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ಅದ್ಧೂರಿ ಕಾರ್ಯಕ್ರಮಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ಆರಂಭವಾಗಿವೆ.
ಲಕ್ಷಾಂತರ ಅಭಿಮಾನಿಗಳು ಮತ್ತು ರಾಜಕೀಯ ಗಣ್ಯರ ಸಮ್ಮುಖದಲ್ಲಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಎಂ.ಜಿ.ಆರ್ ಮತ್ತು ಜಯಲಲಿತಾ ಅವರ ನಂತರ ಸಿನಿಮಾ ರಂಗದಿಂದ ಬಂದು ನೇರವಾಗಿ ರಾಜ್ಯದ ಚುಕ್ಕಾಣಿ ಹಿಡಿಯುತ್ತಿರುವ ಮತ್ತೊಬ್ಬ ಜನಪ್ರಿಯ ನಾಯಕ ಎಂಬ ಹೆಗ್ಗಳಿಕೆಗೆ ವಿಜಯ್ ಪಾತ್ರರಾಗುತ್ತಿದ್ದಾರೆ.
ಬಹುಮತ ಸಾಬೀತುಪಡಿಸಲು ಅಗತ್ಯವಿರುವ ಬೆಂಬಲವನ್ನು ಪಡೆಯಲು ಟಿವಿಕೆ ಪಕ್ಷವು ಇತರ ರಾಜಕೀಯ ಪಕ್ಷಗಳ ನಾಯಕರೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ದಶಕಗಳಿಂದ ತಮಿಳುನಾಡನ್ನು ಆಳುತ್ತಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳ ಪ್ರಾಬಲ್ಯವನ್ನು ವಿಜಯ್ ಅವರ ಪಕ್ಷವು ಈ ಚುನಾವಣೆಯಲ್ಲಿ ಧೂಳೀಪಟ ಮಾಡಿದೆ.
https://www.newsics.com/2026/05/05/pooja-hegdes-prediction-about-vijays-victory/