Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮಾಣವಚನಕ್ಕೆ ಸಿದ್ಧತೆ ನಡೆಸಿದ್ದ ವಿಜಯ್‌ಗೆ ಬಿಗ್‌ ಶಾಕ್‌ ಕೊಟ್ಟ ತಮಿಳುನಾಡು ಗವರ್ನರ್!
ಪ್ರಮುಖಮನರಂಜನೆ

ಪ್ರಮಾಣವಚನಕ್ಕೆ ಸಿದ್ಧತೆ ನಡೆಸಿದ್ದ ವಿಜಯ್‌ಗೆ ಬಿಗ್‌ ಶಾಕ್‌ ಕೊಟ್ಟ ತಮಿಳುನಾಡು ಗವರ್ನರ್!

Share
2 Min Read
SHARE

newsics.com/ನ್ಯೂಸಿಕ್ಸ್

ಹೊಸ ಪಕ್ಷವಾದ ಟಿವಿಕೆ ಕಟ್ಟಿ, ಮೊದಲ ಬಾರಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ನಟ ಜೋಸೆಫ್ ವಿಜಯ್ (Vijay) ಯಾರೂ ನಿರೀಕ್ಷೆಯೂ ಮಾಡಿರದ ರೀತಿಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರು. ತಮಿಳುನಾಡಿನ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಟಿವಿಕೆಗೆ ಸರ್ಕಾರ ರಚನೆಗೆ ಬೇಕಾದ ಬಹುಮತವಾದ 118 ಸ್ಥಾನಗಳು ಸಿಕ್ಕಿರಲಿಲ್ಲ.

ಹೀಗಾಗಿ, ಅನಿವಾರ್ಯವಾಗಿ ವಿಜಯ್ ಬೇರೆ ಪಕ್ಷಗಳ ಬೆಂಬಲ ಕೋರಿದ್ದರು. ಕಾಂಗ್ರೆಸ್​​ನ ಬೆಂಬಲದಿಂದ ವಿಜಯ್ ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಿದ್ಧರಾಗಿದ್ದರು. ಆದರೆ, ತಮಿಳುನಾಡಿನ ರಾಜ್ಯಪಾಲರು ವಿಜಯ್ ನೀಡಿದ ಬಹುಮತದ ಲೆಕ್ಕಾಚಾರದಿಂದ ತೃಪ್ತರಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಕಾರಣದಿಂದ ವಿಜಯ್ ನಾಳೆ ಪ್ರಮಾಣವಚನ ಸ್ವೀಕರಿಸುವುದು ಅನುಮಾನ ಎನ್ನಲಾಗುತ್ತಿದೆ.

ತಮಿಳುನಾಡಿನಲ್ಲಿ ಸರ್ಕಾರ ರಚನೆಯಾಗಲು 118 ಸ್ಥಾನಗಳ ಬಹುಮತ ಬೇಕಾಗಿದೆ. ಆದರೆ, ಟಿವಿಕೆ ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಹೊಂದಿದೆ. ಹೀಗಾಗಿ, ಸರ್ಕಾರ ರಚಿಸಲು ಇನ್ನೂ 10 ಸ್ಥಾನಗಳು ಬೇಕಾಗಿದ್ದರಿಂದ ವಿಜಯ್ ಬೇರೆ ಪಕ್ಷಗಳ ಬೆಂಬಲ ಕೋರಿದ್ದರು. ಡಿಎಂಕೆ ಜೊತೆಗಿನ 55 ವರ್ಷಗಳ ಮೈತ್ರಿಯನ್ನು ಮುರಿದುಕೊಂಡಿದ್ದ ಕಾಂಗ್ರೆಸ್ ಟಿವಿಕೆಗೆ ಬೆಂಬಲ ನೀಡಲು ಒಪ್ಪಿಗೆ ನೀಡಿತ್ತು. ಆದರೆ, ತಮಿಳುನಾಡಿನಲ್ಲಿ ಕಾಂಗ್ರೆಸ್ ಗೆದ್ದಿರುವ ಸ್ಥಾನಗಳು ಕೇವಲ 5. ಈ ಮೂಲಕ ಟಿವಿಕೆಯ ಸ್ಥಾನಗಳು 113ಕ್ಕೆ ಏರಿಕೆಯಾದರೂ ಇನ್ನೂ 5 ಸೀಟುಗಳ ಬೆಂಬಲದ ಅಗತ್ಯವಿದೆ.

ಇದುವರೆಗೂ ಕಾಂಗ್ರೆಸ್ ಮಾತ್ರ ಟಿವಿಕೆಗೆ ಬಹಿರಂಗವಾಗಿ ಬೆಂಬಲ ಘೋಷಿಸಿದೆ. ಡಿಎಂಕೆ ಮೈತ್ರಿಕೂಟದಲ್ಲಿದ್ದ ಸಿಪಿಐ (2 ಸ್ಥಾನ), ಸಿಪಿಎಂ (2 ಸ್ಥಾನ) ಮತ್ತು ವಿಸಿಕೆ (2 ಸ್ಥಾನ) ಟಿವಿಕೆಗೆ ಬೆಂಬಲ ನೀಡಲಿವೆ ಎನ್ನಲಾಗುತ್ತಿದೆ. ಆದರೆ, ರಾಜ್ಯಪಾಲರಿಗೆ ವಿಜಯ್ ನೀಡಿದ ಹಕ್ಕು ಮಂಡನೆ ಪತ್ರದಲ್ಲಿ ಈ ಪಕ್ಷಗಳ ಬೆಂಬಲದ ಕುರಿತು ಸ್ಪಷ್ಟತೆಯಿಲ್ಲ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಬಹುಮತ ಸಾಬೀತುಪಡಿಸದೆ ವಿಜಯ್ ಅವರಿಗೆ ಸರ್ಕಾರ ರಚಿಸಲು ಅನುಮತಿ ನೀಡಲು ರಾಜ್ಯಪಾಲರು ನಿರಾಕರಿಸಿದ್ದಾರೆ ಎನ್ನಲಾಗುತ್ತಿದೆ.

ವರದಿಗಳ ಪ್ರಕಾರ ವಿಜಯ್ ಅವರು ಪ್ರಸ್ತುತ 118 ಜನರ ಬೆಂಬಲವನ್ನು ಹೊಂದಿದ್ದಾರೆಂದು ಮೌಖಿಕವಾಗಿ ಮಾತ್ರ ಹೇಳಿದ್ದಾರೆಯೇ ವಿನಃ ಆ ಪಕ್ಷಗಳ ಬೆಂಬಲ ಪತ್ರವನ್ನು ನೀಡಿಲ್ಲ. ಹೀಗಾಗಿ, ರಾಜ್ಯಪಾಲರು ಕಾನೂನು ಸಹಾಯ ಪಡೆಯಲು ನಿರ್ಧರಿಸಿದ್ದಾರೆ. ಇದರಿಂದಾಗಿ ನಾಳೆಗೆ ನಿಗದಿಯಾಗಿದ್ದ ವಿಜಯ್ ಪಟ್ಟಾಭಿಷೇಕ ಸಮಾರಂಭ ಮುಂದೂಡಲ್ಪಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಈ ಕಾರಣದಿಂದ ನಟ, ರಾಜಕಾರಣಿ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಗುರುವಾರ (ಮೇ 7) ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿಲ್ಲ. ರಾಜ್ಯ ವಿಧಾನಸಭೆಯಲ್ಲಿ ಬಹುಮತಕ್ಕೆ ಅಗತ್ಯವಿರುವ 118 ಶಾಸಕರ ಬೆಂಬಲವನ್ನು ಸಾಬೀತುಪಡಿಸುವ ಪತ್ರವನ್ನು ಸ್ವೀಕರಿಸಿದ ನಂತರವೇ ಮುಂದುವರಿಯುವುದು ಹೆಚ್ಚು ಸೂಕ್ತ ಎಂದು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಟಿವಿಕೆ ನಾಯಕರಿಗೆ ಹೇಳಿ ವಾಪಾಸ್ ಕಳುಹಿಸಿದ್ದಾರೆ ಎನ್ನಲಾಗಿದೆ.

ವಿದೇಶದಿಂದ ಭಾರತಕ್ಕೆ ವಾಪಸ್ ಬಂತು 100 ಮೆಟ್ರಿಕ್‌ ಟನ್‌ ಚಿನ್ನ; ಹ್ಯಾಟ್ರಿಕ್‌ ಸಾಧನೆ ಮಾಡಿದ ಆರ್‌ಬಿಐ

TAGGED:Tamil Nadu Governor gave a big shock to Vijay who was preparing to take oath!
Share This Article
Facebook Twitter Copy Link Print
Previous Article ವಿದೇಶದಿಂದ ಭಾರತಕ್ಕೆ ವಾಪಸ್ ಬಂತು 100 ಮೆಟ್ರಿಕ್‌ ಟನ್‌ ಚಿನ್ನ; ಹ್ಯಾಟ್ರಿಕ್‌ ಸಾಧನೆ ಮಾಡಿದ ಆರ್‌ಬಿಐ
Next Article ವೊಡಾಫೋನ್ ಐಡಿಯಾ ಸಾರಥ್ಯ ವಹಿಸಿಕೊಂಡ ಕುಮಾರ್ ಮಂಗಳಂ ಬಿರ್ಲಾ

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read
ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?