Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸುವೇಂದು ಅಧಿಕಾರಿ ಪಿಎ ಚಂದ್ರನಾಥ್ ಹತ್ಯೆ ಪ್ರಕರಣ; ಎಸ್​ಐಟಿ ತನಿಖೆಗೆ ಆದೇಶ
ಪ್ರಮುಖದೇಶ

ಸುವೇಂದು ಅಧಿಕಾರಿ ಪಿಎ ಚಂದ್ರನಾಥ್ ಹತ್ಯೆ ಪ್ರಕರಣ; ಎಸ್​ಐಟಿ ತನಿಖೆಗೆ ಆದೇಶ

Share
2 Min Read
SHARE

newsics.com/ನ್ಯೂಸಿಕ್ಸ್

ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೇಂದು ಅಧಿಕಾರಿಯ  ಆಪ್ತ ಸಹಾಯಕ ಚಂದ್ರನಾಥ್ ರಥ  ಅವರ ಕೊಲೆ ಪ್ರಕರಣ ರಾಜಕೀಯ ಬಿಸಿಯನ್ನು ಹೆಚ್ಚಿಸಿದೆ. ತನಿಖೆ ನಡೆಸುತ್ತಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

ಈ ಘಟನೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು ಎಸ್​ಐಟಿಯನ್ನು ರಚಿಸಲಾಗಿದೆ. ಚಂದ್ರನಾಥ ರಥ್ ಹತ್ಯೆಯ ತನಿಖೆಗಾಗಿ ಮೀಸಲಾದ ಎಸ್‌ಐಟಿಯನ್ನು ರಚಿಸಲಾಗಿದೆ. ಈ ತಂಡಕ್ಕೆ ಇನ್ಸ್‌ಪೆಕ್ಟರ್ ಜನರಲ್ (ಐಜಿ) ಮಟ್ಟದ ಅಧಿಕಾರಿ ನೇತೃತ್ವ ವಹಿಸಲಿದ್ದಾರೆ.

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ (ಪಿಎ) ಚಂದ್ರನಾಥ ರಥ್ ಅವರನ್ನು ಬುಧವಾರ ತಡರಾತ್ರಿ ಉತ್ತರ 24 ಪರಗಣದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ. ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಕೆಲವೇ ದಿನಗಳ ಮೊದಲು ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹಿಂಸಾಚಾರ ತೀವ್ರಗೊಂಡಿದೆ. ಈ ಘಟನೆ ಪಶ್ಚಿಮ ಬಂಗಾಳದಲ್ಲಿ ತೀವ್ರ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಹಂತಕರಿಗಾಗಿ ಪೊಲೀಸರು ದೊಡ್ಡ ಪ್ರಮಾಣದ ಹುಡುಕಾಟವನ್ನು ಪ್ರಾರಂಭಿಸಿದ್ದಾರೆ. ಈ ಹತ್ಯೆಯ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ.

ಈಗಾಗಲೇ ಚಂದ್ರನಾಥ್ ರಥ ಅವರ ಮೃತದೇಹದ ಶವಪರೀಕ್ಷೆ ಮಾಡಲಾಗಿದೆ. ಪ್ರಾಥಮಿಕ ಮರಣೋತ್ತರ ವರದಿಯಲ್ಲಿ ಅವರಿಗೆ ಮೂರು ಗುಂಡೇಟಿನ ಗಾಯಗಳಾಗಿರುವುದಾಗಿ ತಿಳಿದುಬಂದಿದೆ. 7.6 ಬೋರ್ ಸೆಮಿ-ಆಟೋಮ್ಯಾಟಿಕ್ ಪಿಸ್ತೂಲ್‌ನಿಂದ ಅವರನ್ನು ಗುಂಡು ಹಾರಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಎಸ್​ಐಟಿ ರಚಿಸಲಾಗಿದ್ದು, ವಿವಿಧ ಜಿಲ್ಲೆಗಳು ಮತ್ತು ವಿಶೇಷ ಘಟಕಗಳ ಪೊಲೀಸ್ ಸಿಬ್ಬಂದಿ ಈ ಎಸ್‌ಐಟಿಯ ಭಾಗವಾಗಿರುತ್ತಾರೆ. ಈ ತಂಡವು ಪ್ರಕರಣದ ಪ್ರತಿಯೊಂದು ಹಂತವನ್ನು ಪರಿಶೀಲಿಸುತ್ತದೆ. ಹಲವಾರು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ. ಪ್ರಮುಖ ಶೂಟರ್‌ಗಳು ಇನ್ನೂ ತಲೆಮರೆಸಿಕೊಂಡಿದ್ದಾರೆ.

ಪ್ರಾಥಮಿಕ ವಿವರಗಳ ಪ್ರಕಾರ, ನಿನ್ನೆ ರಾತ್ರಿ 10.30ರ ಸುಮಾರಿಗೆ ಉತ್ತರ 24 ಪರಗಣದ ಮಧ್ಯಮಗ್ರಾಮ್ ಪ್ರದೇಶದಲ್ಲಿ ಕೊಲೆ ನಡೆದಿದೆ. ಚಂದ್ರನಾಥ್ ರಥ ಕೊಲ್ಕತ್ತಾದಿಂದ ಮನೆಗೆ ಹಿಂತಿರುಗುತ್ತಿದ್ದಾಗ ಅವರ ಸ್ಕಾರ್ಪಿಯೋ ಡೊಹ್ರಿಯಾ ಪ್ರದೇಶವನ್ನು ತಲುಪಿದಾಗ ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಸ್ಕಾರ್ಪಿಯೋದ ಎಡಭಾಗದಿಂದ ಗುಂಡಿನ ದಾಳಿ ನಡೆಸಿ, ಚಂದ್ರನಾಥ್​​ನನ್ನು ಕೊಂದಿದ್ದಾರೆ.

ಗುಂಡಿನ ದಾಳಿಯ ನಂತರ ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ. ಚಂದ್ರನಾಥ್ ಅವರ ಎದೆ, ಹೊಟ್ಟೆ ಮತ್ತು ಮುಖಕ್ಕೆ ಗುಂಡು ತಗುಲಿದೆ. ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಗೆ ಬರುವಾಗಲೇ ಅವರು ಮೃತಪಟ್ಟಿದ್ದರು. ಅವರ ಚಾಲಕನಿಗೂ ಗುಂಡೇಟಿನ ಗಾಯಗಳಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲ್ಕತ್ತಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಪಕ್ಕದ ಮನೆ ಮಹಿಳೆಯನ್ನು ತಬ್ಬಿಕೊಂಡು ವಿಕೃತಿ ಮೆರೆದ ವ್ಯಕ್ತಿ: ಪ್ರಶ್ನೆ ಮಾಡಿದ್ದಕ್ಕೆ ಮಚ್ಚಿನಿಂದ ಹಲ್ಲೆ ನಡೆಸಿದ ಪಾಪಿಗಳು

TAGGED:Suvendu officer PA Chandranath murder case; SIT probe ordered
Share This Article
Facebook Twitter Copy Link Print
Previous Article ಪಕ್ಕದ ಮನೆ ಮಹಿಳೆಯನ್ನು ತಬ್ಬಿಕೊಂಡು ವಿಕೃತಿ ಮೆರೆದ ವ್ಯಕ್ತಿ: ಪ್ರಶ್ನೆ ಮಾಡಿದ್ದಕ್ಕೆ ಮಚ್ಚಿನಿಂದ ಹಲ್ಲೆ ನಡೆಸಿದ ಪಾಪಿಗಳು
Next Article 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನಾಳೆ ಮಳೆ ಸಾಧ್ಯತೆ; ಹೇಗಿರಲಿದೆ ಬೆಂಗಳೂರು ವೆದರ್​​?

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?