newsics.com/ನ್ಯೂಸಿಕ್ಸ್
ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಹಿಂಸಾಚಾರ ಜೋರಾಗಿದ್ದು, ಬಿಜೆಪಿ ನಾಯಕ ಹಾಗೂ ಸಿಎಂ ರೇಸ್ನಲ್ಲಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.
https://youtube.com/shorts/iatQVbaFb3g?si=spJ72cQdl8luCXZE
ಬುಧವಾರ ರಾತ್ರಿ ಸುಮಾರು 10.20ಕ್ಕೆ ಚಂದ್ರನಾಥ್ ರಥ್ ಅವರು ಬಾರಾಸಾತ್‌ನಲ್ಲಿರುವ ತಮ್ಮ ಮನೆಗೆ ಕಾರಿನಲ್ಲಿ ಮರಳುತ್ತಿದ್ದರು. ದೋಹಾರಿಯಾ ಪ್ರದೇಶದಲ್ಲಿ ಮೋಟಾರ್ ಸೈಕಲ್‌ಗಳಲ್ಲಿ ಬಂದ ಅಪರಿಚಿತರು ಅವರ ಕಾರನ್ನು ಅಡ್ಡಗಟ್ಟಿದ್ದಾರೆ. ಒಬ್ಬ ವ್ಯಕ್ತಿ ಕಾರಿನ ಕಿಟಕಿಯ ಹತ್ತಿರ ಬಂದು ಚಂದ್ರನಾಥ್ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾನೆ.
ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ರಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಕಾರು ಚಾಲಕನನ್ನು ಕೋಲ್ಕತ್ತಾದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.