newsics.com/ನ್ಯೂಸಿಕ್ಸ್
ಬೆಂಗಳೂರು: ದುಡಿಯುವ ಸಾಮರ್ಥ್ಯವಿರುವ ಪತಿಯು ತಾನು ನಿರುದ್ಯೋಗಿ ಎಂಬ ಕಾರಣ ನೀಡಿ ಪತ್ನಿಗೆ ಜೀವನಾಂಶ ನೀಡುವುದರಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
https://youtube.com/shorts/gjYZnQ_VPsc?si=qVOf4mHBsp6RN8ZV
ಅರ್ಜಿದಾರ ಪತಿ ಮತ್ತು ಪತ್ನಿ ಇಬ್ಬರೂ ಈ ಮೊದಲೇ ವಿಚ್ಛೇದನ ಪಡೆದವರಾಗಿದ್ದು, 2021ರಲ್ಲಿ ಮರು ವಿವಾಹವಾಗಿದ್ದರು. ಆದರೆ, ದಾಂಪತ್ಯದಲ್ಲಿ ಮೂಡಿದ ಭಿನ್ನಾಭಿಪ್ರಾಯದಿಂದಾಗಿ 2022ರಲ್ಲಿ ಪತ್ನಿಯು ಜೀವನಾಂಶ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಕೌಟುಂಬಿಕ ನ್ಯಾಯಾಲಯವು ಪತ್ನಿಗೆ ಮಾಸಿಕ 20 ಸಾವಿರ ರೂಪಾಯಿ ಮಧ್ಯಂತರ ಜೀವನಾಂಶ ನೀಡುವಂತೆ ಪತಿಗೆ ನಿರ್ದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಪತಿಯು ಹೈಕೋರ್ಟ್ ಮೆಟ್ಟಿಲೇರಿದ್ದರು.
ತಾವು 2023ರಲ್ಲಿ ಕೆಲಸ ಕಳೆದುಕೊಂಡಿದ್ದು, ಪ್ರಸ್ತುತ ನಿರುದ್ಯೋಗಿಯಾಗಿದ್ದೇನೆ ಎಂದು ಪತಿ ವಾದಿಸಿದ್ದರು. ತಂದೆ-ತಾಯಿಯ ಪಿಂಚಣಿ ಹಾಗೂ ಹಳೆಯ ಉಳಿತಾಯದ ಹಣದಲ್ಲಿ ಜೀವನ ಸಾಗಿಸುತ್ತಿರುವುದಾಗಿ ಹೇಳಿಕೊಂಡಿದ್ದರು. ಅಲ್ಲದೆ, ಪತ್ನಿಯು ಪದವೀಧರೆಯಾಗಿದ್ದು, ಸ್ವಂತ ಆದಾಯ ಹೊಂದಿರುವುದರಿಂದ ಆಕೆಗೆ ಜೀವನಾಂಶ ನೀಡುವ ಅಗತ್ಯವಿಲ್ಲ ಎಂದು ನ್ಯಾಯಪೀಠಕ್ಕೆ ಮನವರಿಕೆ ಮಾಡಲು ಪ್ರಯತ್ನಿಸಿದ್ದರು.
ಆರೋಗ್ಯವಂತ ಪತಿಯು ಕೆಲಸವಿಲ್ಲ ಎಂಬ ನೆಪ ಹೇಳಿ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಹೈಕೋರ್ಟ್ ಪುನರುಚ್ಚರಿಸಿದೆ.
ವೈವಾಹಿಕ ಜೀವನದ ಅವಧಿಯಲ್ಲಿ ಪತ್ನಿ ಯಾವ ರೀತಿಯ ಜೀವನಮಟ್ಟವನ್ನು ಅನುಭವಿಸಿದ್ದರೋ, ಅದನ್ನು ಮುಂದುವರಿಸಲು ಜೀವನಾಂಶದ ಅಗತ್ಯವಿದೆ ಎಂದು ನ್ಯಾಯಾಲಯ ಹೇಳಿದೆ.
https://www.newsics.com/2026/05/08/the-heat-of-war-has-hit-the-stock-market-sensex-falls-500-points/