newsics.com/ನ್ಯೂಸಿಕ್ಸ್
ನ್ಯೂಯಾರ್ಕ್: ಕೊರೊನಾ ಮಹಾಮಾರಿಯ ನೆನಪುಗಳು ಇನ್ನೂ ಮಾಸದಿರುವಾಗಲೇ ಜಗತ್ತಿನ ಗಮನ ಇದೀಗ ‘ಹಂಟಾವೈರಸ್’ ಸೋಂಕಿನತ್ತ ತಿರುಗಿದೆ. ಸ್ವಿಜರ್ಲೆಂಡ್‌ನಲ್ಲಿ ಮೊದಲ ಹಂಟಾವೈರಸ್ ಪ್ರಕರಣ ಪತ್ತೆಯಾಗಿದೆ ಎಂದು ಅಧಿಕೃತವಾಗಿ ದೃಢಪಡಿಸಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ಹಂಟಾವೈರಸ್ ಬಗ್ಗೆ ಜಾಗತಿಕ ಎಚ್ಚರಿಕೆ ನೀಡಿದೆ. ಈಗಾಗಲೇ ಐದು ದೇಶಗಳಲ್ಲಿ ಹಂಟಾವೈರಸ್ ಪ್ರಕರಣಗಳು ವರದಿಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹೈ ಅಲರ್ಟ್ ಘೋಷಿಸಲಾಗಿದೆ.
ಅಮೆರಿಕ ಸೇರಿದಂತೆ ಐದು ಪ್ರಮುಖ ರಾಷ್ಟ್ರಗಳಲ್ಲಿ ಹಂಟಾವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಆರೋಗ್ಯ ಇಲಾಖೆಗಳು ತುರ್ತು ಪರಿಸ್ಥಿತಿಗೆ ಸಜ್ಜಾಗಿವೆ. ಸೋಂಕು ಪತ್ತೆಯಾದ ಪ್ರದೇಶಗಳನ್ನು ಸಂಪೂರ್ಣವಾಗಿ ಸ್ಕ್ಯಾನ್ ಮಾಡಲಾಗುತ್ತಿದೆ.
ಮುಂದಿನ ದಿನಗಳಲ್ಲಿ ಈ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ. ವೈರಸ್ ಹರಡುವಿಕೆಯನ್ನು ತಡೆಯಲು ಅಂತರಾಷ್ಟ್ರೀಯ ಪ್ರಯಾಣದ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಸೂಚಿಸಿದೆ.
ಇತ್ತೀಚೆಗೆ ಕ್ರೂಸ್ ಹಡಗುಗಳಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಪ್ರವಾಸ ಮುಗಿಸಿ ಬರುವ ಹಡಗುಗಳನ್ನು ಕಡ್ಡಾಯವಾಗಿ ತಪಾಸಣೆ ಮತ್ತು ನೈರ್ಮಲ್ಯೀಕರಣ ಮಾಡಲು ನಿರ್ಧರಿಸಲಾಗಿದೆ.
https://www.newsics.com/2026/05/08/iran-attacks-3-us-navy-ships-trump-issues-stern-warning-to-iran/