newsics.com/ನ್ಯೂಸಿಕ್ಸ್
ಮುಂದಿನ 4 ದಿನ ಕರ್ನಾಟಕದಲ್ಲಿ ಗುಡುಗು ಸಹಿತ ಭಾರಿ ಮಳೆ, ಕೊಡಗು ಚಿಕ್ಕಮಗಳೂರು ಶಿವಮೊಗ್ಗ ಹಾಸನಕ್ಕೆ ಯೆಲ್ಲೋ ಅಲರ್ಟ್ ನೀಡಿದೆ.
ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಭಾವ ಹೆಚ್ಚಿರಲಿದೆ. ವಿಶೇಷವಾಗಿ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಗಾಳಿ ಮತ್ತು ಗುಡುಗು ಸಹಿತ ಮಳೆಯಾಗುವ ಲಕ್ಷಣಗಳಿರುವುದರಿಂದ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ಉತ್ತರ ಕನ್ನಡ ಸಹಿತ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮುಂದಿನ 10 ದಿನಗಳವರೆಗೂ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆ ಮುಂದುವರಿಯುವ ಲಕ್ಷಣಗಳಿವೆ.
ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3 ದಿನಗಳ ಕಾಲ ಮಳೆ ಮುಂದುವರಿಯುವ ಸೂಚನೆಗಳಿವೆ.
https://www.newsics.com/2026/05/08/tcs-conversion-case-kingpin-nida-khan-arrested/