Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗುಣಮುಖಳಾಗ್ತಾಳೆಂದು ಪುನರ್ವಸತಿ ಕೇಂದ್ರಕ್ಕೆ ದಾಖಲಾಗಿದ್ದ ಯುವತಿ ಅನುಮಾನಾಸ್ಪದ ಸಾವು
ಕರ್ನಾಟಕಪ್ರಮುಖ

ಗುಣಮುಖಳಾಗ್ತಾಳೆಂದು ಪುನರ್ವಸತಿ ಕೇಂದ್ರಕ್ಕೆ ದಾಖಲಾಗಿದ್ದ ಯುವತಿ ಅನುಮಾನಾಸ್ಪದ ಸಾವು

Share
2 Min Read
SHARE

ಪ್ರಸಿದ್ಧ ಮಾನಸಿಕ ಸಾಮಾಜಿಕ ಪುನರ್ವಸತಿ ಕೇಂದ್ರಕ್ಕೆ ಚಿಕಿತ್ಸೆಗೆಂದು ದಾಖಲಾಗಿದ್ದ ಯುವತಿ ಒಂದೇ ದಿನಕ್ಕೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿಕಾರಿಪುರದ ಈಸೂರಿನ ನಿವಾಸಿ ನೇಹಾ (17) ಮೃತ ಯುವತಿಯಾಗಿದ್ದು, ಮಗಳ ಹುಷಾರಾಗಿ ಮನೆಗೆ ಬರುತ್ತಾಳೆಂಬ ನಿರೀಕ್ಷೆಯಲ್ಲಿದ್ದ ಕುಟುಂಬಕ್ಕೀಗ ಆಘಾತ ಉಂಟಾಗಿದೆ.

ಯುವತಿಯ ಸಾವಿನ ಹಿಂದೆ ನೂರೆಂಟು ಅನುಮಾನಗಳು ಹುಟ್ಟಿಕೊಂಡಿದ್ದು, ಈ ಬಗ್ಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

8 ತಿಂಗಳ ಹಿಂದೆ ಕಾಲೇಜಿಗೆ ಹೋಗುವಾಗ ಹಾವು ನೋಡಿ ನೇಹಾ ಬೆಚ್ಚಿಬಿದ್ದಿದ್ದಳು. ಓದುವ ವಿಚಾರದಲ್ಲಿಯೂ ಮಂಕಾಗಿದ್ದ ಈಕೆ ಒಮ್ಮೆ ಬ್ಲೇಡ್​​ನಿಂದ ಕೈ ಸಹ ಕೊಯ್ದುಕೊಂಡಿದ್ದಳು. ಈ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಕೂಡ ಬರೆದಿರಲಿಲ್ಲ. 3 ದಿನಗಳ ಹಿಂದೆಯೂ ಯುವತಿಯನ್ನು ಖಾಸಗಿ ನರ್ಸಿಂಗ್ ಹೋಂಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿತ್ತು. ಈ ನಡುವೆ ಶಿವಮೊಗ್ಗದ ಮಾನಸಧಾರ ಮಾನಸಿಕ ಸಾಮಾಜಿಕ ಪುನರ್ವಸತಿ ಕೇಂದ್ರದದವರು ನೇಹಾಳನ್ನು ಬೇಸಿಗೆ ಶಿಬಿರಕ್ಕೆ ಸೇರಿಸಿದರೆ ಗುಣಮುಖರಾಗುತ್ತಾಳೆ ಎಂದಿದ್ದರಂತೆ. ಹೀಗಾಗಿ ಮೊನ್ನೆ ಮಧ್ಯಾಹ್ನ 3 ಗಂಟೆಗೆ ಪುನರ್ ವಸತಿ ಕೇಂದ್ರಕ್ಕೆ ನೇಹಾಳನ್ನ ಕರೆತಂದು ಪೋಷಕರು ಸೇರಿಸಿದ್ದರು. ಆದರೆ ನಿನ್ನೆ ಮಧ್ಯಾಹ್ನದ ಹೊತ್ತಿಗೆ ಪುನರ್ವಸತಿ ಕೇಂದ್ರದ ಕಡೆಯಿಂದ ನೇಹಾ ಪೋಷಕರಿಗೆ ಸಾವರ್ ಲೈನ್ ರಸ್ತೆಯಲ್ಲಿರುವ ಖಾಸಗಿ ನರ್ಸಿಂಗ್​​ ಹೋಂಗೆ ಬನ್ನಿ. ನೇಹಾ ಮತ್ತೆ ಕೈ ಕೊಯ್ದುಕೊಂಡಿದ್ದಾಳೆ ಎಂಬ ಮಾಹಿತಿ ಬಂದಿದೆ. ಕುಟುಂಬ ನರ್ಸಿಂಗ್ ಹೋಂಗೆ ಬಂದ ವೇಳೆ ಆಕೆ ಮೃತಳಾಗಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಸಂಪೂರ್ಣ ಜವಾಬ್ದಾರಿ ನಮ್ಮದೇ ಎಂದು ಪುನರ್ ವಸತಿ ಕೇಂದ್ರಕ್ಕೆ ಸೇರಿಸಿಕೊಂಡಿದ್ದ ವೈದ್ಯರು ಇಂತಹ ಘಟನೆ ನಡೆದ್ರೂ ಪೊಲೀಸರಿಗೆ ಮಾಹಿತಿ ನೀಡದೇ ಖಾಸಗಿ ಆಸ್ಪತ್ರೆಗೆ ಆಕೆಯನ್ನು ಕರೆತಂದಿದ್ದಾರೆ. ಬೇಸಿಗೆ ಶಿಬಿರದಲ್ಲಿ ಸಮಾನ ಮನಸ್ಕರರೊಂದಿಗೆ ನೇಹಾಳನ್ನ ಬಿಡಲಾಗುವುದು ಎಂದಿದ್ದ ಆಸ್ಪತ್ರೆಯವರು ಮಾನಸಿಕ ರೋಗಿಗಳ ಜೊತೆ ಆಕೆಯನ್ನು ಬಿಟ್ಟಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ. ಅಲ್ಲದೆ ಪುನರ್​​ ವಸತಿ ಕೇಂದ್ರದ ಕೊಠಡಿಯಲ್ಲಿಯೇ ನೇಹಾ ವೇಲ್​​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಗಂಭೀರ ಆರೋಪ ಮಾಡಿದ್ದಾರೆ. ಒಟ್ಟಿನಲ್ಲಿ ಪುನರ್ ವಸತಿ ಕೇಂದ್ರಕ್ಕೆ ಸೇರಿದ ಒಂದೇ ದಿನದಲ್ಲಿ ನೇಹಾ ಪ್ರಾಣಬಿಟ್ಟಿರೋದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಲೈಂಗಿಕ ದೌರ್ಜನ್ಯ ಕೇಸ್; ಕಂಬಕ್ಕೆ ಕಟ್ಟಿ ರೈಲ್ವೆ ಕಾನ್​ಸ್ಟೇಬಲ್​​ನನ್ನು ಕೊಂದ ಸಾರ್ವಜನಿಕರು

TAGGED:Suspicious death of young woman admitted to rehabilitation center hoping her daughter would recover
Share This Article
Facebook Twitter Copy Link Print
Previous Article ಲೈಂಗಿಕ ದೌರ್ಜನ್ಯ ಕೇಸ್; ಕಂಬಕ್ಕೆ ಕಟ್ಟಿ ರೈಲ್ವೆ ಕಾನ್​ಸ್ಟೇಬಲ್​​ನನ್ನು ಕೊಂದ ಸಾರ್ವಜನಿಕರು
Next Article ತಮಿಳುನಾಡು ಇತಿಹಾಸದಲ್ಲೇ ಮೊದಲ ಸಮ್ಮಿಶ್ರ ಸರ್ಕಾರಕ್ಕೆ ದಳಪತಿ ಸಾರಥಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?