newsics.com/ನ್ಯೂಸಿಕ್ಸ್
ಬಿಜೆಪಿ ಅಧಿಕಾರಕ್ಕೆ ಬಂದ ನಂತರ ವಿವೇಕ್ ಅಗ್ನಿಹೋತ್ರಿಯವರ ‘ದಿ ಬೆಂಗಾಲ್ ಫೈಲ್ಸ್’ ಸಿನಿಮಾ ಪಶ್ಚಿಮ ಬಂಗಾಳದಲ್ಲಿ ತೆರೆಕಾಣಲಿದೆ.
ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಈ ಚಿತ್ರವನ್ನು ಪಶ್ಚಿಮ ಬಂಗಾಳದಲ್ಲಿ ತೆರೆಗೆ ತರಲು ಸಾಧ್ಯ ಆಗಿರಲಿಲ್ಲ. ಕೊನೆಗೂ ಪಶ್ಚಿಮ ಬಂಗಾಳದ ಚಿತ್ರಮಂದಿರಗಳಲ್ಲಿ ಮೇ 15ರಂದು ತೆರೆಕಾಣಲಿದೆ. ಈ ಬಗ್ಗೆ ವಿವೇಕ್ ಅಗ್ನಿಹೋತ್ರಿ ಅಧಿಕೃತವಾಗಿ ಘೋಷಿಸಿದ್ದಾರೆ.
‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶನ ಮಾಡಿದ್ದ ವಿವೇಕ್ ಅಗ್ನಿಹೋತ್ರಿ ‘ದಿ ಬೆಂಗಾಲ್ ಫೈಲ್ಸ್’ ನಿರ್ದೇಶನ ಮಾಡಿದ್ದರು. ಈ ಚಿತ್ರ 2025ರಲ್ಲೇ ದೇಶಾದ್ಯಂತ ಬಿಡುಗಡೆಯಾಗಿತ್ತು. ಆದರೆ, ಪಶ್ಚಿಮ ಬಂಗಾಳದಲ್ಲಿ ಮಾತ್ರ ಪ್ರದರ್ಶನಕ್ಕೆ ತೀವ್ರ ಅಡೆತಡೆಗಳು ಎದುರಾಗಿದ್ದವು.
‘ದಿ ಬೆಂಗಾಲ್ ಫೈಲ್ಸ್’ ಚಿತ್ರವು ಬಂಗಾಳದ ಇತಿಹಾಸದ ಕರಾಳ ಘಟನೆಗಳಾದ ‘ಡೈರೆಕ್ಟ್ ಆಕ್ಷನ್ ಡೇ’ (ನೇರ ಕ್ರಮ ದಿನ) ಮತ್ತು ನೋಖಾಲಿ ದಂಗೆಗಳ ಸುತ್ತ ಹೆಣೆಯಲಾದ ಕಥೆಯನ್ನು ಹೊಂದಿದೆ.
ಪಶ್ಚಿಮ ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ ಮತ್ತು ಪ್ರಧಾನಿ ಮೋದಿಯವರ ತೀವ್ರ ಪ್ರಚಾರದ ಫಲವಾಗಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಈ ರಾಜಕೀಯ ಬದಲಾವಣೆಯು ಚಿತ್ರದ ಬಿಡುಗಡೆಗೆ ಹಾದಿ ಸುಗಮಗೊಳಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅಗ್ನಿಹೋತ್ರಿ, ‘ಸತ್ಯವನ್ನು ಹೆಚ್ಚು ಕಾಲ ಮುಚ್ಚಿಡಲು ಸಾಧ್ಯವಿಲ್ಲ. ಬೆಂಗಾಲಿಗಳ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ’ ಎಂದು ಬರೆದುಕೊಂಡಿದ್ದಾರೆ.