newsics.com/ನ್ಯೂಸಿಕ್ಸ್
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ 108 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದರೂ ಬಹುಮತ ಕೊರತೆ ಇರುವುದರಿಂದ ಸರ್ಕಾರ ರಚನೆಗೆ ಕಸರತ್ತು ನಡೆಸಿದೆ.
https://youtube.com/shorts/gjYZnQ_VPsc?si=qVOf4mHBsp6RN8ZV
ಸರ್ಕಾರ ರಚನೆಗೆ ಅವಕಾಶ ಕೊಡಿ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸುವುದಾಗಿ ವಿಜಯ್ ಮನವಿಗೂ ಒಪ್ಪದ ರಾಜ್ಯಪಾಲರು 118 ಶಾಸಕರ ಸ್ಪಷ್ಟ ಬೆಂಬಲದೊಂದಿಗೆ ಸರ್ಕಾರ ರಚಿಸಲು ಸೂಚಿಸಿದ್ದಾರೆ.
ರಾಜ್ಯಪಾಲರ ಈ ನಡೆ ವಿರುದ್ಧ ಟಿವಿಕೆ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ಲೋಕಭವನದ ಎದುರು ಜಮಾವಣೆಗೊಂಡಿರುವ ಟಿವಿಕೆ ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣ ವಿಜಯ್ ಗೆ ಸರ್ಕಾರ ರಚನೆಗೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
https://www.newsics.com/2026/05/08/philip-tried-to-forcefully-hug-a-female-legislator/