Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ವಾರ ಭವಿಷ್ಯ > ರಾತ್ರೋರಾತ್ರಿ ಮಾಯವಾದ ಜೋಡೆತ್ತು! ಪೊಲೀಸರ ಮೊರೆ ಹೋದ ರೈತ
ಪ್ರಮುಖವಾರ ಭವಿಷ್ಯ

ರಾತ್ರೋರಾತ್ರಿ ಮಾಯವಾದ ಜೋಡೆತ್ತು! ಪೊಲೀಸರ ಮೊರೆ ಹೋದ ರೈತ

Share
1 Min Read
SHARE

newsics.com/ನ್ಯೂಸಿಕ್ಸ್

ಗದ್ದೆಯನ್ನು ಉಳುಮೆ ಮಾಡಲು ಪ್ರೀತಿಯಿಂದ ಸಾಕಿದ್ದ ಎತ್ತು, ಹೋರಿಗಳನ್ನು ಕಳ್ಳರು ಕಳ್ಳತನ ಮಾಡುತ್ತಿದ್ದು, ರೈತರು ಕಂಗಾಲಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಇದೇ ರೀತಿ ಮೂಡಿಗೆರೆ ತಾಲೂಕಿನ ಸಂಪ್ಲಿ ಗ್ರಾಮದಲ್ಲಿ ರೈತನ ಜೋಡೆತ್ತುಗಳನ್ನು ಕಳ್ಳರು ರಾತ್ರೋರಾತ್ರಿ ಕದ್ದೊಯ್ದ ಘಟನೆ ಆತಂಕ ಮೂಡಿಸಿದೆ. ಬೇಸಾಯದ ಅವಿಭಾಜ್ಯ ಅಂಗವಾಗಿದ್ದ ಎತ್ತುಗಳನ್ನು ಕಳೆದುಕೊಂಡ ರೈತ ಕುಟುಂಬ ಈಗ ಸಂಕಷ್ಟಗೆ ಸಿಲುಕಿದೆ.

ಸಂಪ್ಲಿ ಗ್ರಾಮದ ನಿವಾಸಿ ರೈತ ಚಿನ್ನೇಗೌಡರಿಗೆ ಸೇರಿದ ಎರಡು ಜೋಡೆತ್ತುಗಳನ್ನು ಮನೆಯಿಂದ ಪಕ್ಕದಲ್ಲಿರುವ ಸ್ಥಳದಲ್ಲಿ ಕಟ್ಟಲಾಗಿತ್ತು. ಕೊಟ್ಟಿಗೆ ದುರಸ್ತಿ ಕಾಮಗಾರಿಗಳು ನಡೆಯುತ್ತಿದ್ದ ಹಿನ್ನೆಲೆ, ತಾತ್ಕಾಲಿಕವಾಗಿ ಹೊರಗೆ ಕಟ್ಟಿದ್ದ ಈ ಎತ್ತುಗಳನ್ನು ದುಷ್ಕರ್ಮಿಗಳು ತಡರಾತ್ರಿ ಕದ್ದೊಯ್ದಿದ್ದಾರೆ. ರಾತ್ರಿ ಸುಮಾರು 11 ಗಂಟೆಯಿಂದ ಬೆಳಗ್ಗೆ 5 ಗಂಟೆಯೊಳಗೆ ಈ ಕಳ್ಳತನ ನಡೆದಿರುವುದಾಗಿ ಅಂದಾಜಿಸಲಾಗಿದೆ.

ಕಳ್ಳರು ಎತ್ತುಗಳನ್ನು ಹಗ್ಗ ಸಮೇತವಾಗಿ ತೆಗೆದುಕೊಂಡು ಹೋಗಿದ್ದು, ಸುಮಾರು 15 ವರ್ಷಗಳಿಂದ ಸಾಕಿಕೊಂಡು ಬಂದ ಈ ಎತ್ತುಗಳು ರೈತನಿಗೆ ಬೇಸಾಯದ ಪ್ರಮುಖ ಆಧಾರವಾಗಿದ್ದವು, ಅವುಗಳನ್ನು ಕಳೆದುಕೊಂಡಿರುವುದರಿಂದ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಕುಟುಂಬದ ಸದಸ್ಯರು ಕಣ್ಣೀರು ಹಾಕುತ್ತಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ. ಗ್ರಾಮದಲ್ಲಿ ದನಗಳ್ಳರ ಹಾವಳಿ ಹೆಚ್ಚುತ್ತಿರುವ ಬಗ್ಗೆ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದು, ಕೆಲವರು ಗೋಹತ್ಯೆಗಾಗಿ ದನ ಕಳ್ಳತನ ನಡೆಯುತ್ತಿದೆ ಎಂಬ ಆರೋಪವನ್ನು ಕೂಡ ಮಾಡಿದ್ದಾರೆ.

ಗ್ರಾಮದಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿ ಕಳ್ಳರನ್ನು ಪತ್ತೆಹಚ್ಚಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ದನ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ಶೀಘ್ರ ಬಂಧಿಸಿ ನ್ಯಾಯ ಒದಗಿಸಬೇಕೆಂದು ರೈತರು ಹಾಗೂ ಗ್ರಾಮಸ್ಥರು ಪೊಲೀಸರನ್ನು ಆಗ್ರಹಿಸಿದ್ದಾರೆ.

ಇದು ಆಸ್ಪತ್ರೆಯಲ್ಲಿ ಕೂತು ಸಾವಿನ ಸೂಚನೆ ನೀಡುವ ಬೆಕ್ಕು!

TAGGED:A pair of oxen that disappeared overnight! A farmer went to the police to find them.
Share This Article
Facebook Twitter Copy Link Print
Previous Article ಇದು ಆಸ್ಪತ್ರೆಯಲ್ಲಿ ಕೂತು ಸಾವಿನ ಸೂಚನೆ ನೀಡುವ ಬೆಕ್ಕು!
Next Article ತಮಿಳುನಾಡು ಸಿಎಂ ಆಗಿ ನಾಳೆ ವಿಜಯ್​ ಪ್ರಮಾಣವಚನ

Popular Posts

Tattoo HIV Case ಟ್ಯಾಟೂ ಪ್ರೇಮಿಗಳೇ ಎಚ್ಚರ..! ಹಚ್ಚೆ ಹಾಕಿಸಿಕೊಂಡ ಮಹಿಳೆಗೆ ತಗುಲಿದ ಎಚ್‌ಐವಿ ಸೋಂಕು

2 Min Read

Wall Fungus ಮಳೆಗಾಲದಲ್ಲಿ ಗೋಡೆಗಳ ಮೇಲೆ ಬೂಷ್ಟು ಸಮಸ್ಯೆಯೇ? ದುಬಾರಿ ಕೆಮಿಕಲ್ ಬೇಡ, ಮನೆಯಲ್ಲೇ ಇದೆ ಸುಲಭ ಪರಿಹಾರ

2 Min Read

Pregnancy Skincare Guide ಗರ್ಭಿಣಿಯರೇ ಎಚ್ಚರ..! ನೀವು ಬಳಸುವ ಮೇಕಪ್ ಪ್ರಾಡಕ್ಟ್ ಮಗುವಿಗೆ ಸೇಫ್ ಅಲ್ವಾ? ತಪ್ಪದೇ ಓದಿ ಈ ಸ್ಟೋರಿ

2 Min Read

Cholesterol problem ದೇಶದ ಹತ್ತು ವಯಸ್ಕರಲ್ಲಿ 9 ಮಂದಿಗೆ ಕೊಲೆಸ್ಟ್ರಾಲ್ ಸಮಸ್ಯೆ!

3 Min Read

You Might Also Like

ದೇಶಪ್ರಮುಖ

Techie mysterious death ಬೆತ್ತಲೆಯಾಗಿ ದೇವಸ್ಥಾನಕ್ಕೆ ನುಗ್ಗಿ ವಿಗ್ರಹ ಹೊತ್ತೊಯ್ದ ಯುವತಿ ನಿಗೂಢ ಸಾವು!

2 Min Read
ದೇಶಪ್ರಮುಖ

Today Gold Rate | ಚಿನ್ನದ ಬೆಲೆ ಮತ್ತೆ ಏರಿಕೆ

2 Min Read
ದೇಶಪ್ರಮುಖವಿದೇಶ

P V Sindhu Record ಜಪಾನ್ ಓಪನ್ ಚಾಂಪಿಯನ್‌ಶಿಪ್‌ನಲ್ಲಿ ಇತಿಹಾಸ ಬರೆದ ಪಿ.ವಿ. ಸಿಂಧು

3 Min Read
ಕರ್ನಾಟಕಪ್ರಮುಖ

Crime news ಆಸ್ತಿ ಕೊಡದ ತಂದೆಯನ್ನು‌ ಕೊಂ*ದು ತಾನೂ ಜೀವ ಕಳೆದುಕೊಂಡ ಮಗ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?