newsics.com/ನ್ಯೂಸಿಕ್ಸ್
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
https://youtube.com/shorts/gjYZnQ_VPsc?si=qVOf4mHBsp6RN8ZV
ಕೊಡಗು, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಷ್ಕ ವಾತಾವರಣ ಇರಲಿದೆ. ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ಬೆಳಗಾವಿ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.