newsics.com/ನ್ಯೂಸಿಕ್ಸ್
ಬಂಗಾಳಕೊಲ್ಲಿಉಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನಲೆ ಮುಂದಿನ 5 ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಇನ್ನೇನು ಕಲವೇ ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಆಗಮನವಾಗಲಿದ್ದು, ಇದಕ್ಕೂ ಮುನ್ನವೇ ಚಂಡಮಾರುತದ ಸುಳಿಗಾಳಿ (Cyclonic Circulation) ಸಕ್ರಿಯವಾಗಿದೆ. ಇದರಿಂದಾಗಿ ಮುಂದಿನ 48 ಗಂಟೆಗಳಲ್ಲಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ನಿರೀಕ್ಷೆಯಿದೆ. ಇದರ ಪರಿಣಾಮವಾಗಿ ಕರ್ನಾಟಕದ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಹವಾಮಾನ ಬದಲಾವಣೆ ಆಗಲಿದ್ದು, ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ಇಲಾಕೆ ಎಚ್ಚರಿಸಿದೆ.
ಬೆಂಗಳೂರಿನಲ್ಲಿ ದಿನವಿಡೀ ಕೆಲ ಏರಿಯಾಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. IMD ಪ್ರಕಾರ, ನಗರದಲ್ಲಿ ಗರಿಷ್ಠ ತಾಪಮಾನವು 34°C ಆಗಿದ್ದರೆ ಕನಿಷ್ಠ ತಾಪಮಾನವು 22°C ಆಗುವ ನಿರೀಕ್ಷೆಯಿದೆ. ವಿಶೇಷವಾಗಿ ಸಿಲ್ಕ್ ಬೋರ್ಡ್, ಎಲೆಕ್ಟ್ರಾನಿಕ್ ಸಿಟಿ, ಎಂಜಿ ರೋಡ್, ಮೆಜೆಸ್ಟಿಕ್ ಸುತ್ತಮುತ್ತ, ಜಯನಗರ, ರಾಜಾಜಿನಗರ, ವೈಟ್‌ಫಿಲ್ಡ್, ಶಾಂತಿನಗರ, ಶಿವಾಜಿ ನಗರ ಸುತ್ತಮುತ್ತ ರಾತ್ರಿ ವೇಳೆ ಗುಡುಗು ಸಹಿತ ಭಾರೀ ಮಳೆ ನಿರೀಕ್ಷೆಯಿದೆ.
ಇಂದಿನಿಂದ ಮುಂದಿನ 4 ದಿನ ಅಂದರೆ ಮೇ 14 ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯೊಂದಿಗೆ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಅಲ್ಲದೇ ಕಲಬುರಗಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿಯೂ ವಾರದ ಕೊನೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.
13 ವರ್ಷಗಳ ಅವಮಾನಕ್ಕೆ ಸಿಎಂ ಆಗಿ ಪ್ರತೀಕಾರ;ಅಂದು ಅವಮಾನಿಸಿದವರೇ ಇಂದು ಸೆಲ್ಯೂಟ್ ಹೊಡೆಯುವಂತೆ ಮಾಡಿದ ದಳಪತಿ ವಿಜಯ್