newsics.com/ನ್ಯೂಸಿಕ್ಸ್
ಬೆಂಗಳೂರು : ರಾಜ್ಯದಲ್ಲಿ ಬಿಸಿಲಿನ ತಾಪಮಾನಕ್ಕೆ ಇತ್ತೀಚಿಗೆ ಕೆಲವರು ಕುಸಿದು ಬಿದ್ದು ಸಾವನ್ನಪ್ಪಿರುವ ಪ್ರಕರಣಗಳು ನಡೆದಿದ್ದವು.
https://youtube.com/shorts/QmBsVJxCxsg?si=FaYAZtjO3Xv8e1rn
ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬರದಿ ಗ್ರಾಮದ ಬಳಿ ಕುಸಿದು ಬಿದ್ದು 70 ವರ್ಷದ ವೃದ್ಧರೊಬ್ಬರೂ ಸಾವನಪ್ಪಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬರದಿ ಗ್ರಾಮದ ಬಳಿ ಚಿಕ್ಕಣ್ಣ (70) ಎಂಬುವವರು ಸಾವನ್ನಪ್ಪಿದ್ದಾರೆ. ದಾಸರಹಳ್ಳಿಯ ಶೆಟ್ಟಿಹಳ್ಳಿ ನಿವಾಸಿಯಾಗಿದ್ದ ಚಿಕ್ಕಣ್ಣ ಬರದಿ ಬಳಿ ಕೋಳಿ ಫಾರಂನಲ್ಲಿ ಕೆಲಸ ಮಾಡುತ್ತಿದ್ದರು.
ಬೆಳಿಗ್ಗೆ ಕೆಲಸಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ಬಿಸಿಲಿನ ತಾಪಮಾನಕ್ಕೆ ಕುಸಿದು ಬಿದ್ದು ಸಾವನ್ನಪ್ಪಿದ್ದರೆ. ನೆಲಮಂಗಲ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ಮೃತ ದೇಹ ರವಾನೆ ಮಾಡಲಾಗಿದೆ. ನೆಲಮಂಗಲ ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.