newsics.com/ನ್ಯೂಸಿಕ್ಸ್
ಬೆಂಗಳೂರು: ಸರ್ಕಾರಿ ನೌಕರರ ದೀರ್ಘಕಾಲದ ಬೇಡಿಕೆಯಾಗಿದ್ದ ತುಟ್ಟಿಭತ್ಯೆ ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಅನುಮೋದನೆ ನೀಡಿದ್ದಾರೆ.
https://youtube.com/shorts/QmBsVJxCxsg?si=FaYAZtjO3Xv8e1rn
ಮೂಲ ವೇತನದ ಶೇ. 1.5 ರಷ್ಟು ತುಟ್ಟಿಭತ್ಯೆ ಹೆಚ್ಚಳ.ಈ ಹೆಚ್ಚಳವು ಜನವರಿ 1, 2026 ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ.ಮುಖ್ಯಮಂತ್ರಿಗಳ ಅನುಮೋದನೆ ದೊರೆತಿರುವುದರಿಂದ, ರಾಜ್ಯ ಸರ್ಕಾರವು ಶೀಘ್ರದಲ್ಲೇ ಈ ಕುರಿತು ಅಧಿಕೃತ ಆದೇಶವನ್ನು ಹೊರಡಿಸಲಿದೆ.
ಈ ಮಹತ್ವದ ನಿರ್ಧಾರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಸ್ವಾಗತಿಸಿದೆ. ತುಟ್ಟಿಭತ್ಯೆ ಹೆಚ್ಚಳಕ್ಕೆ ಅಸ್ತು ಎಂದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಹಾಗೂ ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸಂಘದ ಪರವಾಗಿ ರಾಜ್ಯಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.