ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ವೇಳೆ ಭದ್ರತಾ ಲೋಪ ಉಂಟಾಗಿದ್ದು, ಅವರು ಸಂಚರಿಸುವ ಮಾರ್ಗದ ಪಕ್ಕದಲ್ಲೇ ಸ್ಫೋಟಕಗಳಿದ್ದ ಬಾಕ್ಸ್ ಪತ್ತೆಯಾಗಿತ್ತು. ಇದೀಗ ಈ ಬಗ್ಗೆ ಮಹತ್ವ ಬೆಳವಣಿಗಳು ನಡೆದಿದೆ. ಈ ಪ್ರಕರಣಕ್ಕೆ ಎನ್ಐಎ ಎಂಟ್ರಿಯಾಗಿದೆ.
ಇದರ ಜತೆಗೆ ಈ ಪ್ರಕರಣದಲ್ಲಿ ವ್ಯಕ್ತಿಯೊಬ್ಬನ್ನು ಬಂಧನ ಮಾಡಲಾಗಿದೆ. ಇದೀಗ ಆತ ತನಿಖೆ ವೇಳೆ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾನೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿ ಇತಿಹಾಸ ನಿರ್ಮಿಸಿರುವ ಟಿವಿಕೆ (TVK) ಪಕ್ಷದ ನಾಯಕ, ನಟ ಜೋಸೆಫ್ ವಿಜಯ್ ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಜಗತ್ತು ಬಿಕ್ಕಟ್ಟಿನಲ್ಲಿದ್ದು, ದೇಶದ ಹಿತಕ್ಕಾಗಿ ತ್ಯಾಗಗಳನ್ನು ಮಾಡಲು ಸಿದ್ಧರಾಗಿ ಎಂದು ಅವರು ಹೇಳಿದ್ದಾರೆ. ಕಚ್ಚಾ ತೈಲ ಮತ್ತು ಚಿನ್ನದ ಬೆಲೆಗಳು ಗಣನೀಯವಾಗಿ ಹೆಚ್ಚಾಗಿರುವುದರಿಂದ, ವಿದೇಶಿ ವಿನಿಮಯವನ್ನು ಉಳಿಸುವುದು ಅತ್ಯಗತ್ಯ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ. ಈ ನಿಟ್ಟಿನಲ್ಲಿ, ನಾಗರಿಕರು ಮುಂದಿನ ಒಂದು ವರ್ಷದವರೆಗೆ ಚಿನ್ನ ಖರೀದಿಸುವುದನ್ನು ನಿಲ್ಲಿಸಬೇಕು ಎಂದು ಸಲಹೆ ನೀಡಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಆಹ್ವಾನದ ಮೇರೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮೇ 13 ರಿಂದ 15 ರವರೆಗೆ ಚೀನಾಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ವೇಳೆ ಭದ್ರತಾ ಲೋಪ ಉಂಟಾಗಿದ್ದು, ಅವರು ಸಂಚರಿಸುವ ಮಾರ್ಗದ ಪಕ್ಕದಲ್ಲೇ ಸ್ಫೋಟಕಗಳಿದ್ದ ಬಾಕ್ಸ್ ಪತ್ತೆಯಾಗಿತ್ತು. ಇದೀಗ ಈ ಬಗ್ಗೆ ಮಹತ್ವ ಬೆಳವಣಿಗಳು ನಡೆದಿದೆ. ಈ ಪ್ರಕರಣಕ್ಕೆ ಎನ್ಐಎ ಎಂಟ್ರಿಯಾಗಿದೆ. ಈ ಪ್ರಕರಣದಲ್ಲಿ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಇನ್ನು ಈ ವ್ಯಕ್ತಿಯ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಹೇಳಿದ್ದಾರೆ. ಈ ವ್ಯಕ್ತಿಯ ಹೆಸರು ಲೋಹಿತ್ ಎಂದು ಗುರುತಿಸಲಾಗಿದೆ.
ಆರೋಪಿ ಬಳಿ ಪೊಲೀಸ್ ಇಲಾಖೆ, ತನಿಖಾ ಸಂಸ್ಥೆಗಳ ನಂಬರ್ ಇದೆ. ಸುಖಾಸುಮ್ಮನೆ ಹುಸಿ ಬೆದರಿಕೆ ಕರೆ ಮಾಡಿದ್ದ ಮಾಹಿತಿ ಬಹಿರಂಗವಾಗಿದೆ. ವಿಚಾರಣೆ ವೇಳೆ ಆರೋಪಿ ದೊಡ್ಡ ದೊಡ್ಡವರ ಹೆಸರು ಹೇಳುತ್ತಾನೆ. ನನಗೆ ಅಜಿತ್ ದೋವಲ್ ಗೊತ್ತು, ಎನ್ಐಎ ನಿರ್ದೇಶಕ ಗೊತ್ತು, ಸಿಬಿಐ ಡೈರೆಕ್ಟರ್ ಗೊತ್ತು, ಡಿಜಿ-ಐಜಿಪಿ, ಕಮಿಷನರ್ ಹೆಸರು ಹೇಳ್ತಾನೆ. ಎಲ್ಲಾ ತನಿಖಾ ಸಂಸ್ಥೆಗಳ ಕಂಟ್ರೊಲ್ ರೂಂ ನಂಬರ್ ಇಟ್ಟುಕೊಂಡಿದ್ದಾನೆ. ಮನಸ್ಸಿಗೆ ಬಂದ ಹಾಗೆ ಕರೆ ಮಾಡಿ ಬೆದರಿಕೆ ಸಂದೇಶಗಳನ್ನು ಹಾಕ್ತಾನೆ ಎಂದು ಹೇಳಲಾಗಿದೆ.
ಸಿದ್ದರಾಮಯ್ಯ ಸರ್ಕಾರದಿಂದ ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಗಿಫ್ಟ್!