Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಜನಿ-ಕಮಲ್ ಹೊಸ ಸಿನಿಮಾಗೆ ತ್ರಿಶಾ ನಾಯಕಿ?
ಪ್ರಮುಖಮನರಂಜನೆ

ರಜನಿ-ಕಮಲ್ ಹೊಸ ಸಿನಿಮಾಗೆ ತ್ರಿಶಾ ನಾಯಕಿ?

Share
2 Min Read
SHARE

newsics.com/ನ್ಯೂಸಿಕ್ಸ್

ತಮಿಳು ಚಿತ್ರರಂಗದ ಸ್ಟಾರ್ ನಟರಾದ ರಜನಿಕಾಂತ್ ಮತ್ತು ಕಮಲ್ ಹಾಸನ್ ಅವರು ದಶಕಗಳ ನಂತರ ಮತ್ತೆ ಬೆಳ್ಳಿತೆರೆಯ ಮೇಲೆ ಒಂದಾಗುತ್ತಿರುವುದು ಈಗಾಗಲೇ ಅಭಿಮಾನಿಗಳಿಗೆ ಖುಷಿ ನೀಡಿದೆ. ಈಗ ಈ ಬೃಹತ್ ಚಿತ್ರಕ್ಕೆ (KHxRK) ಸೌತ್ ಕ್ವೀನ್ ತ್ರಿಶಾ ಕೃಷ್ಣನ್ ಕೂಡ ಸೇರ್ಪಡೆ ಆಗಲಿದ್ದಾರೆ ಎಂಬ ಸುದ್ದಿ ಕಾಲಿವುಡ್ ಅಂಗಳದಲ್ಲಿ ಜೋರಾಗಿ ಸದ್ದು ಮಾಡುತ್ತಿದೆ.

ತ್ರಿಶಾ ಅವರ ಹೆಸರು ಈಗ ಎಲ್ಲ ಕಡೆಗಳಲ್ಲಿ ಚರ್ಚೆಯಲ್ಲಿದೆ. ದಳಪತಿ ವಿಜಯ್ ಜೊತೆಗಿನ ಸ್ನೇಹದ ಕಾರಣದಿಂದಲೂ ಅವರು ಸುದ್ದಿ ಆಗುತ್ತಿದ್ದಾರೆ. ಈ ನಡುವೆ ‘KHxRK’ ಚಿತ್ರಕ್ಕೂ ಅವರೇ ನಾಯಕಿ ಎಂಬ ಸುದ್ದಿ ಹರಿದಾಡುತ್ತಿದೆ.

‘ಜೈಲರ್’ ಖ್ಯಾತಿಯ ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶಿಸಲಿರುವ ಈ ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ನೀಡುತ್ತಿದ್ದಾರೆ. ಕೆಲ ತಿಂಗಳ ಹಿಂದೆ ಬಿಡುಗಡೆಯಾದ ಅನೌನ್ಸ್‌ಮೆಂಟ್ ವಿಡಿಯೋದಲ್ಲಿ ರಜನಿ ಮತ್ತು ಕಮಲ್ ಸ್ಟೈಲಿಶ್ ರೆಟ್ರೋ ಲುಕ್‌ನಲ್ಲಿ ಕಾಣಿಸಿಕೊಂಡಿದ್ದರು. ವಿಡಿಯೋದ ಕೊನೆಯಲ್ಲಿ ಬರುವ ‘ಹೀರೋ ಯಾರು?’ ಎಂಬ ಡೈಲಾಗ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೆಂಡ್ ಆಗಿತ್ತು.

ಕಳೆದ 22 ವರ್ಷಗಳಿಂದ ಚಿತ್ರರಂಗದಲ್ಲಿ ಟಾಪ್ ನಟಿಯಾಗಿ ಮಿಂಚುತ್ತಿರುವ ತ್ರಿಶಾ, ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಲಿದ್ದಾರೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ತ್ರಿಶಾ ಈ ಪ್ರಾಜೆಕ್ಟ್‌ಗೆ ಒಪ್ಪಿಗೆ ನೀಡಿದ್ದು, ಇದಕ್ಕಾಗಿ ಅವರಿಗೆ ಭಾರಿ ಮೊತ್ತದ ಸಂಭಾವನೆ ನೀಡಲಾಗುತ್ತಿದೆ ಎನ್ನಲಾಗಿದೆ. ಇದು ಅವರ ವೃತ್ತಿಜೀವನದ ಅತ್ಯಂತ ದೊಡ್ಡ ಬಜೆಟ್‌ನ ಚಿತ್ರವಾಗಲಿದೆ.

ತ್ರಿಶಾ ಈ ಹಿಂದೆ ಕಮಲ್ ಹಾಸನ್ ಅವರೊಂದಿಗೆ ‘ಮನ್ಮದನ್ ಅಂಬು’, ‘ತೂಂಗಾ ವನಂ’ ಮತ್ತು ‘ಥಗ್ ಲೈಫ್’ ಚಿತ್ರಗಳಲ್ಲಿ ನಟಿಸಿದ್ದರೆ, ರಜನಿಕಾಂತ್ ಅವರೊಂದಿಗೆ ‘ಪೇಟ್ಟಾ’ ಚಿತ್ರದಲ್ಲಿ ಸ್ಕ್ರೀನ್ ಶೇರ್ ಮಾಡಿದ್ದರು. ಸೂರ್ಯ ಅಭಿನಯದ ‘ಕರುಪ್ಪು’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆ ಆಗಿದ್ದು, ಅದರಲ್ಲಿಯೂ ತ್ರಿಶಾ ಮಿಂಚಿದ್ದಾರೆ.

ನಿರ್ದೇಶಕ ನೆಲ್ಸನ್ ಸದ್ಯ ‘KHxRK’ ಸ್ಕ್ರಿಪ್ಟ್ ಮತ್ತು ತಾಂತ್ರಿಕ ವರ್ಗದ ಆಯ್ಕೆಯಲ್ಲಿ ಬ್ಯುಸಿಯಾಗಿದ್ದು, ಶೀಘ್ರದಲ್ಲೇ ಚಿತ್ರೀಕರಣ ಆರಂಭವಾಗಲಿದೆ. ರಜನಿ, ಕಮಲ್, ನೆಲ್ಸನ್ ಮತ್ತು ಅನಿರುದ್ಧ್ ಅವರ ಈ ಕಾಂಬಿನೇಷನ್ ಬಾಕ್ಸ್ ಆಫೀಸ್ ಇತಿಹಾಸವನ್ನೇ ಸೃಷ್ಟಿಸಲಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಈ ಚಿತ್ರವು 1000 ಕೋಟಿ ರೂಪಾಯಿ ಗಳಿಕೆ ಮಾಡುವ ಮೊದಲ ತಮಿಳು ಸಿನಿಮಾ ಆಗಲಿದೆ ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿದೆ.

ನೂರಾರು ಕೋಟಿ ಸಂಭಾವನೆ ಪಡೆಯುತ್ತಿದ್ದ ದಳಪತಿ ವಿಜಯ್ ಈಗಿನ ಸ್ಯಾಲರಿ ಎಷ್ಟು?

TAGGED:Trisha to be the heroine in Rajini-Kamal's new movie?
Share This Article
Facebook Twitter Copy Link Print
Previous Article ನೂರಾರು ಕೋಟಿ ಸಂಭಾವನೆ ಪಡೆಯುತ್ತಿದ್ದ ದಳಪತಿ ವಿಜಯ್ ಈಗಿನ ಸ್ಯಾಲರಿ ಎಷ್ಟು?
Next Article ಚಿನ್ನದ ದರದಲ್ಲಿ ಭಾರಿ ಇಳಿಕೆ; ಮೋದಿ ಅವರ ಆ ಒಂದು ಕರೆಗೆ ಗೋಲ್ಡ್ ರೇಟ್ ಕಮ್ಮಿಯಾಯ್ತಾ?

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?